105 ವರ್ಷದ ಕೊರೋನಾ ವೈರಸ್ ಸೋಂಕಿತ ವೃದ್ಧ ಗುಣಮುಖ!
ಮಹಾಮಾರಿ ಕೊರೋನಾ ಸೋಂಕಿನಿಂದ ಬಳಲುತ್ತಿದ್ದ 105 ವರ್ಷದ ವೃದ್ಧರೊಬ್ಬರು ಗುಣಮುಖರಾಗಿದ್ದು, ಇದರೊಂದಿಗೆ ಮತ್ತಷ್ಟು ಕೊರೋನಾ ಸೋಂಕಿತರಿಗೆ ಭರವಸೆಯ ಆಶಾಕಿರಣ ಮೂಡಿಸಿದ್ದಾರೆ.

ಇಸ್ಲಾಮಾಬಾದ್: ಮಹಾಮಾರಿ ಕೊರೋನಾ ಸೋಂಕಿನಿಂದ ಬಳಲುತ್ತಿದ್ದ 105 ವರ್ಷದ ವೃದ್ಧರೊಬ್ಬರು ಗುಣಮುಖರಾಗಿದ್ದು, ಇದರೊಂದಿಗೆ ಮತ್ತಷ್ಟು ಕೊರೋನಾ ಸೋಂಕಿತರಿಗೆ ಭರವಸೆಯ ಆಶಾಕಿರಣ ಮೂಡಿಸಿದ್ದಾರೆ.
ಪಾಕಿಸ್ತಾನದ ಸೇನೆಯಲ್ಲಿ ಸೇವೆ ಸಲ್ಲಿಸಿದ್ದ ಫಝಲ್ ರಾವುಫ್ ಕೊರೋನಾ ಗೆದ್ದ ವ್ಯಕ್ತಿಯಾಗಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಫಝಲ್ ಅವರಿಲ್ಲಿ ಕೊರೋನಾ ಪಾಸಿಟಿವ್ ಬಂದಿತ್ತು. ಕೂಡಲೇ ಆಸ್ಪತ್ರೆಗೆ ದಾಖಲು ಮಾಡಿ ಕ್ವಾರಂಟೈನ್ ನಲ್ಲಿ ಇರಿಸಲಾಗಿತ್ತು. ಗುರುವಾರ ಮತ್ತೆ ಪರೀಕ್ಷೆಗೊಳಪಡಿಸಲಾಗಿದ್ದು, ಇದೀಗ ವೈದ್ಯಕೀಯ ವರದಿಯಲ್ಲಿ ಕೊರೋನಾ ಇಲ್ಲದಿರುವುದು ತಿಳಿದುಬಂದಿದೆ.
ನಿನ್ನೆಯಷ್ಟೇ ಫಝಲ್ ಅವರು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ವರದಿಗಳು ತಿಳಿಸಿವೆ.
ಪಾಕಿಸ್ತಾನದಲ್ಲಿ ಈ ವರೆಗೂ 221,896 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 4,551 ಮಂದಿ ಸಾವನ್ನಪ್ಪಿದ್ದಾರೆ. 113,623 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


