ಕೊರೋನಾ ವೈರಸ್: ಜಾಗತಿಕ ಸೋಂಕಿತರ ಸಂಖ್ಯೆ 1 ಕೋಟಿ 31 ಲಕ್ಷ, 5.73 ಲಕ್ಷ ಮಂದಿ ಸಾವು
ಜಗತ್ತಿನಾದ್ಯಂತ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ದಿನದಿಂದ ಏರಿಕೆಯಾಗುತ್ತಿದ್ದು, ಭಾನುವಾರ ಸಂಜೆ ವೇಳೆಗೆ ಜಾಗತಿಕ ಸೋಂಕಿತರ ಸಂಖ್ಯೆ 1 ಕೋಟಿ 31 ಲಕ್ಷಕ್ಕೇರಿದೆ. ಸಾವಿನ ಸಂಖ್ಯೆ 5 ಲಕ್ಷದ 73 ಸಾವಿರ ದಾಟಿದೆ.

ವಾಷಿಂಗ್ಟನ್: ಜಗತ್ತಿನಾದ್ಯಂತ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ದಿನದಿಂದ ಏರಿಕೆಯಾಗುತ್ತಿದ್ದು, ಭಾನುವಾರ ಸಂಜೆ ವೇಳೆಗೆ ಜಾಗತಿಕ ಸೋಂಕಿತರ ಸಂಖ್ಯೆ 1 ಕೋಟಿ 31 ಲಕ್ಷಕ್ಕೇರಿದೆ. ಸಾವಿನ ಸಂಖ್ಯೆ 5 ಲಕ್ಷದ 73 ಸಾವಿರ ದಾಟಿದೆ.
ವಿಶ್ವದ ಒಟ್ಟು 210 ದೇಶಗಳಲ್ಲಿ ಕೊರೊನಾ ಸೋಂಕು ವರದಿಯಾಗಿದ್ದು, ಅತಿ ಹೆಚ್ಚು ಸೋಂಕು ಮತ್ತು ಸಾವಿನ ಪ್ರಕರಣಗಳು ಅಮೆರಿಕದಲ್ಲೇ ವರದಿಯಾಗಿದೆ. ಇಲ್ಲಿ 34.38 ಲಕ್ಷ ಜನರಿಗೆ ಸೋಂಕು ತಗಲಿದ್ದರೆ ಈವರೆಗೆ 1 ಲಕ್ಷದ 37 ಸಾವಿರ ಜನರು ಮಾರಕ ಖಾಯಿಲೆಯಿಂದ ಮೃತಪಟ್ಟಿದ್ದಾರೆ ಎಂದು ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ಮಾಹಿತಿ ತಿಳಿಸಿದೆ.
ಎರಡನೇ ಸ್ಥಾನದಲ್ಲಿರುವ ಬ್ರಿಜಿಲ್ನ ಒಟ್ಟು 18.66 ಲಕ್ಷ ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಮೃತರ ಸಂಖ್ಯೆ 72 ಸಾವಿದ ದಾಟಿದೆ. ಮೂರನೇ ಸ್ಥಾನದಲ್ಲಿರುವ ಭಾರತದಲ್ಲಿ ಈವರೆಗೆ 8.98 ಲಕ್ಷ ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 23 ಸಾವಿರಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ರಷ್ಯಾದಲ್ಲಿ 7.33 ಲಕ್ಷ ಸೋಂಕಿತರಿದ್ದು, ಪೆರು ದೇಶದಲ್ಲಿ 3.26 ಲಕ್ಷ ಸೋಂಕಿತರಿದ್ದಾರೆ.
ಇನ್ನು ಪಾಕಿಸ್ತಾನದಲ್ಲಿ ಸೋಮವಾರ 2,769 ಹೊಸ ಪ್ರಕರಣಗಳು ವರದಿಯಾಗಿವೆ. ಈ ಮೂಲಕ ಸೋಂಕಿತರ ಒಟ್ಟು ಸಂಖ್ಯೆ 2.51 ಲಕ್ಷ ದಾಟಿದೆ. 69 ಮಂದಿ ಸೋಂಕಿನಿಂದ ಮೃತಪಟ್ಟಿದ್ದು, ಸೋಂಕಿನಿಂದ ಈವರೆಗೆ ಮೃತಪಟ್ಟವರ ಒಟ್ಟು ಸಂಖ್ಯೆ 5,226ಕ್ಕೆ ಏರಿಕೆಯಾಗಿದೆ. 1,837 ರೋಗಿಗಳು ಗಂಭೀರ ಸ್ಥಿತಿಯಲ್ಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


