ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಶಾಶ್ವತ ಸದಸ್ಯತ್ವಕ್ಕೆ ಬಿಡೆನ್ ನೆರವು: ರಿಚರ್ಡ್ ವರ್ಮಾ
ಅಮೆರಿಕದ ಮುಂದಿನ ಅಧ್ಯಕ್ಷರಾಗಿ ಜೋ ಬಿಡೆನ್ ಅವರು ಆಯ್ಕೆಯಾದರೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಶಾಶ್ವತ ಸದಸ್ಯತ್ವ ಕೊಡಿಸುವ ಕುರಿತು ನೆರವು ನೀಡಲಿದೆ ಎಂದು ಭಾರತಕ್ಕೆ ಅಮೆರಿಕದ ರಾಯಭಾರಿಯಾಗಿದ್ದ ರಿಚರ್ಡ್ ವರ್ಮಾ ಹೇಳಿದ್ದಾರೆ.

ವಾಷಿಂಗ್ಟನ್: ಅಮೆರಿಕದ ಮುಂದಿನ ಅಧ್ಯಕ್ಷರಾಗಿ ಜೋ ಬಿಡೆನ್ ಅವರು ಆಯ್ಕೆಯಾದರೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಶಾಶ್ವತ ಸದಸ್ಯತ್ವ ಕೊಡಿಸುವ ಕುರಿತು ನೆರವು ನೀಡಲಿದೆ ಎಂದು ಭಾರತಕ್ಕೆ ಅಮೆರಿಕದ ರಾಯಭಾರಿಯಾಗಿದ್ದ ರಿಚರ್ಡ್ ವರ್ಮಾ ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ರಿಚರ್ಡ್ ವರ್ಮಾ ಅವರು, ನವೆಂಬರ್‌ನಲ್ಲಿ ನಡೆಯಲಿರುವ ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮಾಕ್ರೆಟಿಕ್ ಪಕ್ಷದ ಅಭ್ಯರ್ಥಿ ಜೊ ಬಿಡೆನ್ ಅವರು ಆಯ್ಕೆಯಾದರೆ, ವಿಶ್ವಸಂಸ್ಥೆಯಂಥ ಜಾಗತಿಕಮಟ್ಟದ ಸಂಘಟನೆಯನ್ನು ಪುನರ್ ರೂಪಿಸಲು ಶ್ರಮಿಸುವುದಲ್ಲದೆ, ಅದರ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಶಾಶ್ವತ ಸದಸ್ಯತ್ವ ನೀಡಲು ನೆರವಾಗುವರು ಎಂದು ಹೇಳಿದ್ದಾರೆ.
ಭಾರತಕ್ಕೆ ಶಾಶ್ವತ ಸದಸ್ಯತ್ವ ನೀಡಲು ಬಿಡೆನ್ ಅವರು ನೆರವಾಗಲಿದ್ದಾರೆ ಎಂಬುದರಲ್ಲಿ ಸಂದೇಹವಿಲ್ಲ. ನಮ್ಮ ನಾಗರಿಕರನ್ನು ಸುರಕ್ಷಿತವಾಗಿಡುವ ನಿಟ್ಟಿನಲ್ಲಿ ಅವರು ಭಾರತದ ಜತೆಗೆ ಕೈಜೋಡಿಸಿ ಕೆಲಸ ಮಾಡುವರು. ಗಡಿಯಾಚೆಗಿನ ಭಯೋತ್ಪಾದನೆ, ಗಡಿಯ ಯಥಾಸ್ಥಿತಿಯನ್ನು ಕದಡುವ ಭಾರತದ ನೆರೆರಾಷ್ಟ್ರಗಳ ಪ್ರಯತ್ನಗಳನ್ನು ತಡೆಯಲು ಅವರು ನೆರವಾಗುವರು’ ಎಂದು ಮಾಜಿ ರಾಯಭಾರಿ ಕೂಡ ಆಗಿದ್ದ ವರ್ಮಾ ಹೇಳಿದ್ದಾರೆ.
ವರ್ಮಾ ಅವರು 2014ರಿಂದ 2017ರ ಅವಧಿಯಲ್ಲಿ ಭಾರತದಲ್ಲಿ ಅಮೆರಿಕದ ರಾಯಭಾರಿಯಾಗಿ ಕಾರ್ಯ ನಿರ್ವಹಿಸಿದ್ದರು.
ವಿಶ್ವ ಸಂಸ್ಥೆಯಲ್ಲಿ ಸರಿಯಾದ ಪ್ರಾತಿನಿಧ್ಯ ಇಲ್ಲದಿರುವುದರಿಂದ ಅದನ್ನು ಮರುರೂಪಿಸುವ ಅಗತ್ಯವಿದೆ ಮತ್ತು ಅದರ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನಪಡೆಯಲು ಭಾರತ ಅರ್ಹವಾಗಿದೆ ಎಂದು ಭಾರತವು ಹಲವು ವರ್ಷಗಳಿಂದ ವಾದಿಸುತ್ತಿದೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಪ್ರಸಕ್ತ 15 ಸದಸ್ಯರಾಷ್ಟ್ರಗಳಿದ್ದು, ಅಮೆರಿಕ, ಬ್ರಿಟನ್, ಫ್ರಾನ್ಸ್, ರಷ್ಯಾ ಹಾಗೂ ಚೀನಾ ಶಾಶ್ವತ ಸದಸ್ಯತ್ವ ಹೊಂದಿವೆ. ಭಾರತಕ್ಕೆ ಶಾಶ್ವತ ಸದಸ್ಯತ್ವ ನೀಡುವುದನ್ನು ಎಲ್ಲಾ ರಾಷ್ಟ್ರಗಳು ಬೆಂಬಲಿಸಿದ್ದರೂ, ಚೀನಾ ವಿರೋಧಿಸುತ್ತಾ ಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


