ವಿದೇಶ

ನೇಪಾಳ ವಿಧಾನಮಂಡಲ ಕಟ್ಟಡದ ಸಚಿವರ ಕಚೇರಿ ಬಳಿ 3 ಅನುಮಾನಾಸ್ಪದ ವಸ್ತುಗಳು ಪತ್ತೆ: ಆತಂಕ ಸೃಷ್ಟಿ

ನೇಪಾಳ ವಿಧಾನಮಂಡಲ ಕಟ್ಟಡ ಮೂವರು ಸಚಿವರ ಕಚೇರಿ ಬಳಿ ಮೂರು ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿದ್ದು, ಆತಂಕ ಸೃಷ್ಟಿಯಾಗಿರುವ ಘಟನೆ ಮಂಗಳವಾರ ನಡೆದಿದೆ.

ನೇಪಾಳ ವಿಧಾನಮಂಡಲ ಕಟ್ಟಡದ ಸಚಿವರ ಕಚೇರಿ ಬಳಿ 3 ಅನುಮಾನಾಸ್ಪದ ವಸ್ತುಗಳು ಪತ್ತೆ: ಆತಂಕ ಸೃಷ್ಟಿ
ನೇಪಾಳ ವಿಧಾನಮಂಡಲ ಕಚೇರಿ
Published On :

ಕಠ್ಮಂಡು: ನೇಪಾಳ ವಿಧಾನಮಂಡಲ ಕಟ್ಟಡ ಮೂವರು ಸಚಿವರ ಕಚೇರಿ ಬಳಿ ಮೂರು ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿದ್ದು, ಆತಂಕ ಸೃಷ್ಟಿಯಾಗಿರುವ ಘಟನೆ ಮಂಗಳವಾರ ನಡೆದಿದೆ. 

ಸುದುರ್ಪಾಶ್ಚಿಮ್ ಪ್ರಾಂತ್ಯದಲ್ಲಿರುವ ವಿಧಾನಮಂಡಲ ಕಟ್ಟಡದಲ್ಲಿರುವ ಮೂವರು ಸಚಿವರ ಕಚೇರಿಗಳ ಬಳಿ ಮೂರು ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿವೆ ಎಂದು ನೇಪಾಳ ಪೊಲೀಸರು ಮಾಹಿತಿ ನೀಡಿದ್ದಾರೆ. 

ಅನುಮಾನಾಸ್ಪದ ವಸ್ತುಗಳು ಪತ್ತೆಯಾಗುತ್ತಿದ್ದಂತೆಯೇ ಸ್ಥಳದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದ್ದು, ಕಟ್ಟಡ ಇರುವ ಪ್ರದೇಶದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.

ಈ ನಡುವೆ ಸ್ಥಳಕ್ಕಾಗಮಿಸಿರುವ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿಗಳು, ಅನುಮಾನಾಸ್ಪದ ವಸ್ತುಗಳನ್ನು ಸ್ಥಳದಿಂದ ತೆರವುಗೊಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.