ವಿದೇಶ

ಗೂಢಚಾರಿಕೆ ಆರೋಪ: ಪಾಕ್ ರಾಯಭಾರ ಕಚೇರಿ ಇಬ್ಬರು ಸಿಬ್ಬಂದಿ ಗಡಿಪಾರು ಬೆನ್ನಲ್ಲೆ ಭಾರತೀಯ ರಾಯಭಾರಿಗೆ ಸಮನ್ಸ್!

ಭಾರತದ ವಿರುದ್ಧ ಗೂಢಚಾರಿಕೆ ಮಾಡುತ್ತಿದ್ದ ಆರೋಪದ ಮೇಲೆ ದೆಹಲಿಯಲ್ಲಿರುವ ಪಾಕಿಸ್ತಾನ ಹೈಕಮೀಷನ್ ಕಚೇರಿಯಲ್ಲಿನ ಇಬ್ಬರು ಅಧಿಕಾರಿಗಳನ್ನು ಗಡೀಪಾರು ಮಾಡಿರುವ ಹಿನ್ನೆಲೆಯಲ್ಲಿ ಪಾಕಿಸ್ತಾನದಲ್ಲಿರುವ ಭಾರತೀಯ ರಾಯಭಾರಿ ಕಚೇರಿಯ ಅಧಿಕಾರಿಗಳ ಪಾಕಿಸ್ತಾನ ಸಮನ್ಸ್ ಜಾರಿ ಮಾಡಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಗೂಢಚಾರಿಕೆ ಆರೋಪ: ಪಾಕ್ ರಾಯಭಾರ ಕಚೇರಿ ಇಬ್ಬರು ಸಿಬ್ಬಂದಿ ಗಡಿಪಾರು ಬೆನ್ನಲ್ಲೆ ಭಾರತೀಯ ರಾಯಭಾರಿಗೆ ಸಮನ್ಸ್!
ಸಂಗ್ರಹ ಚಿತ್ರ
Published On :

ಇಸ್ಲಾಮಾಬಾದ್: ಭಾರತದ ವಿರುದ್ಧ ಗೂಢಚಾರಿಕೆ ಮಾಡುತ್ತಿದ್ದ ಆರೋಪದ ಮೇಲೆ ದೆಹಲಿಯಲ್ಲಿರುವ ಪಾಕಿಸ್ತಾನ ಹೈಕಮೀಷನ್ ಕಚೇರಿಯಲ್ಲಿನ ಇಬ್ಬರು ಅಧಿಕಾರಿಗಳನ್ನು ಗಡೀಪಾರು ಮಾಡಿರುವ ಹಿನ್ನೆಲೆಯಲ್ಲಿ ಪಾಕಿಸ್ತಾನದಲ್ಲಿರುವ ಭಾರತೀಯ ರಾಯಭಾರಿ ಕಚೇರಿಯ ಅಧಿಕಾರಿಗಳ ಪಾಕಿಸ್ತಾನ ಸಮನ್ಸ್ ಜಾರಿ ಮಾಡಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಭಾರತೀಯ ಪ್ರಜೆಯೊಬ್ಬನಿಂದ ಭಾರತದ ಭದ್ರತಾ ನೆಲೆಗಳಿಗೆ ಸಂಬಂಧಿಸಿದ ರಹಸ್ಯ ದಾಖಲೆಗಳನ್ನು ಸಂಗ್ರಹಿಸುತ್ತಿರುವ ವೇಳೆ ಅಧಿಕಾರಿಗಳು ಸಾಕ್ಷಿ ಸಮೇತ ದೆಹಲಿ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ. ದಾಖಲೆ ಕೊಟ್ಟ ವ್ಯಕ್ತಿಗೆ ಭಾರತೀಯ ರುಪಾಯಿಯಲ್ಲಿ ನಗದು ಹಾಗೂ ಐಫೋನ್ ನೀಡುತ್ತಿದ್ದರು. ಪೊಲೀಸರು ಪ್ರಶ್ನೆ ಮಾಡಿದಾಗ ತಾವ ಭಾರತೀಯ ಪ್ರಜೆಗಳು ಎಂದು ವಾದಿಸಿದ್ದರು, ಅಲ್ಲದೆ, ನಕಲಿ ಆಧಾರ್ ಕಾರ್ಡ್ ನೀಡಿದ್ದರು ಎಂದು ಮೂಲಗಳಿಂದ ತಿಳಿದುಬಂದಿದೆ. 

ವಿಚಾರಣೆ ವೇಳೆ ತಾವು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಪರ ಕಾರ್ಯನಿರ್ವಹಿಸುತ್ತಿರುವ ಸಂಗತಿಯನ್ನು ಇಬ್ಬರೂ ಬಾಯ್ಬಿಟ್ಟಿದ್ದಾರೆ. 

ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಅಬೀಬ್ ಹುಸೇನ್ ಹಾಗೂ ಮೊಹಮ್ಮದ್ ತಾಹೀರ್ ಎಂಬ ಈ ಇಬ್ಬರೂ ಪಾಕಿಸ್ತಾನ ಹೈಕಮಿ,ನ್ ಕಚೇರಿಯಲ್ಲಿನ ವೀಸಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಈ ನಡುವೆ ಪಾಕಿಸ್ತಾನ ಸರ್ಕಾರ ಭಾರತದ ಆರೋಪವನ್ನು ಆಧಾರಹಿತ ಎಂದು ಅಲ್ಲಗೆಳೆದಿದೆ. ಅಲ್ಲದೆ. ಈ ಸಂಬಂಧ ಪಾಕಿಸ್ತಾನದಲ್ಲಿರುವ ಭಾರತೀಯ ರಾಯಭಾರಿ ಕಚೇರಿಯ ಅಧಿಕಾರಿಗೆ ಸಮನ್ಸ್ ಕೂಡ ಜಾರಿದೆ ಮಾಡಿದೆ ಎಂದು ಹೇಳಲಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.