ವಿದೇಶ

ವಿಶ್ವಾದ್ಯಂತ ಕೊರೋನಾ ಸೋಂಕಿತರ ಸಂಖ್ಯೆ 66 ಲಕ್ಷಕ್ಕೆ ಏರಿಕೆ, 28.5 ಲಕ್ಷ ಜನ ಗುಣಮುಖ, 393,102 ರೋಗಿಗಳು ಸಾವು

ಜಗತ್ತಿನ 213ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಮರಣ ಮೃದಂಗ ಭಾರಿಸುತ್ತಿರುವ ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 66 ಲಕ್ಷಕ್ಕೆ ಏರಿಕೆಯಾಗಿದೆ.

ವಿಶ್ವಾದ್ಯಂತ ಕೊರೋನಾ ಸೋಂಕಿತರ ಸಂಖ್ಯೆ 66 ಲಕ್ಷಕ್ಕೆ ಏರಿಕೆ, 28.5 ಲಕ್ಷ ಜನ ಗುಣಮುಖ, 393,102 ರೋಗಿಗಳು ಸಾವು
ಕೊರೋನಾವೈರಸ್ ಪರೀಕ್ಷೆ
Published On :

ನ್ಯೂಯಾರ್ಕ್‌: ಜಗತ್ತಿನ 213ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಮರಣ ಮೃದಂಗ ಭಾರಿಸುತ್ತಿರುವ ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 66 ಲಕ್ಷಕ್ಕೆ ಏರಿಕೆಯಾಗಿದೆ.

ಈ ಬಗ್ಗೆ ಅಮೆರಿಕದ ಜಾನ್ ಹಾಪ್‌ಕಿನ್ಸ್‌ ವಿವಿಯ ಕೊರೊನಾ ಅಧ್ಯಯನ ಕೇಂದ್ರ ಮಾಹಿತಿ ನೀಡಿದ್ದು, ಜಗತ್ತಿನಾದ್ಯಂತ ಕೊರೋನಾ ಸೋಂಕಿತರ ಸಂಖ್ಯೆ 6,697,133ಕ್ಕೆ ಏರಿಕೆಯಾಗಿದ್ದು, ಅಂತೆಯೇ ಕೊರೋನಾ ಸೋಂಕಿನಿಂದಾಗಿ ಬಲಿಯಾದವರ ಸಂಖ್ಯೆ 393,102 ಲಕ್ಷಕ್ಕೆ ಏರಿಕೆಯಾಗಿದೆ. ಈ ವರೆಗೂ 28.5 ಲಕ್ಷಕ್ಕೂ ಹೆಚ್ಚು ಸೋಂಕಿತರು ಗುಣಮುಖರಾಗಿದ್ದಾರೆ. 

ಇನ್ನು ಅತಿಹೆಚ್ಚು (1,872,557) ಸೋಂಕು ಪ್ರಕರಣಗಳು ವರದಿಯಾಗಿರುವ ಅಮೆರಿಕ ಒಂದರಲ್ಲೇ 1,08,208 ಮಂದಿ ಮೃತಪಟ್ಟಿದ್ದಾರೆ. ಅಮೆರಿಕದ ಒಟ್ಟಾರೆ ಸೋಂಕು ಪ್ರಕರಣಗಳ ಪೈಕಿ 4,85,002 ಮಂದಿ ಗುಣಮುಖರಾಗಿದ್ದಾರೆ. ಅಮೆರಿಕ ನಂತರ ಹೆಚ್ಚು ಸೋಂಕು ಕಾಣಿಸಿಕೊಂಡಿರುವ ರಾಷ್ಟ್ರಗಳ ಸಾಲಿನಲ್ಲಿ ಎರಡನೇ ಸ್ಥಾನದಲ್ಲಿರುವ ಬ್ರೆಜಿಲ್‌ನಲ್ಲಿ 5,84,016 ಜನರಲ್ಲಿ ಸೋಂಕು ದೃಢಪಟ್ಟಿದೆ. ಇದರಲ್ಲಿ 2,38,617 ಮಂದಿ ಗುಣಮುಖರಾಗಿದ್ದು, 35,548 ಸೋಂಕಿತರು ಮೃತಪಟ್ಟಿದ್ದಾರೆ.

ರಷ್ಯಾದಲ್ಲಿ 4,40,538 ಜನರಿಗೆ ಸೋಂಕು ತಗುಲಿದ್ದು, ಇದರಲ್ಲಿ 2,04,197 ಸೋಂಕಿತರು ಗುಣಮುಖರಾಗಿದ್ದು, 5,376 ಮಂದಿ ಮೃತಪಟ್ಟಿದ್ದಾರೆ. ಇಂಗ್ಲೆಂಡ್‌ನಲ್ಲಿ 2,83,079 ಪ್ರಕರಣಗಳು ಖಚಿತವಾಗಿವೆ. 39,987 ಮಂದಿ ಮೃತಪಟ್ಟಿದ್ದಾರೆ. ಇಟಲಿಯಲ್ಲಿ 33,689, ಫ್ರಾನ್ಸ್‌ನಲ್ಲಿ 29,068 ಹಾಗೂ ಸ್ಪೇನ್‌ನಲ್ಲಿ 27,133 ಜನರು ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ. ಭಾರತದಲ್ಲಿ ಗುರುವಾರ ರಾತ್ರಿ 8ರ ವರೆಗೆ 1,06,737 ಪ್ರಕರಣಗಳು ಸಕ್ರಿಯವಾಗಿವೆ. 6,075 ಸೋಂಕಿತರು ಮೃತಪಟ್ಟಿದ್ದು, 1,04,106 ಮಂದಿ ಗುಣಮುಖರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.