ಕೊವಿಡ್-19: ವಿಶ್ವಾದ್ಯಂತ 4 ಲಕ್ಷ ದಾಟಿದ ಸಾವಿನ ಸಂಖ್ಯೆ; ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯ ವರದಿ
ವಿಶ್ವದಾದ್ಯಂತ ಕೊವಿಡ್-19 ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ ಭಾನುವಾರ 4.00,000 ಮೀರಿದೆ ಎಂದು ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ಸೆಂಟರ್ ಫಾರ್ ಸಿಸ್ಟಮ್ಸ್ ಸೈನ್ಸ್ ಅಂಡ್ ಎಂಜಿನಿಯರಿಂಗ್ (ಸಿಎಸ್ಎಸ್ಇ) ತಿಳಿಸಿದೆ.

ವಾಷಿಂಗ್ಟನ್: ವಿಶ್ವದಾದ್ಯಂತ ಕೊವಿಡ್-19 ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ ಭಾನುವಾರ 4.00,000 ಮೀರಿದೆ ಎಂದು ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ಸೆಂಟರ್ ಫಾರ್ ಸಿಸ್ಟಮ್ಸ್ ಸೈನ್ಸ್ ಅಂಡ್ ಎಂಜಿನಿಯರಿಂಗ್ (ಸಿಎಸ್ಎಸ್ಇ) ತಿಳಿಸಿದೆ.
ಕೊವಿಡ್-19 ಸೋಂಕಿನಿಂದ ಇದುವರೆಗೆ 4,00792 ಜನರು ಬಲಿಯಾಗಿದ್ದಾರೆ ಎಂದು ವಿಶ್ವವಿದ್ಯಾಲಯ ಹೇಳಿದೆ. ಅಮೆರಿಕವೊಂದರಲ್ಲೇ ವೈರಸ್ನಿಂದಾಗಿ 1,09928 ಜನರು ಸಾವನ್ನಪ್ಪಿದ್ದರೆ, ಎರಡನೇ ಸ್ಥಾನದಲ್ಲಿರುವ ಯುನೈಟೆಡ್ ಕಿಂಗ್ಡಮ್ ನಲ್ಲಿ 40, 625, ಮೂರನೇ ಸ್ಥಾನದಲ್ಲಿರುವ ಬ್ರೆಜಿಲ್ ನಲ್ಲಿ 36,000 ಮಾರಕ ಸೋಂಕಿಗೆ ಬಲಿಯಾಗಿದ್ದಾರೆ.
ವಿಶ್ವದಾದ್ಯಂತ ಕೊವಿಡ್ ಸೋಂಕು ಪ್ರಕರಣಗಳ ಸಂಖ್ಯೆ 69.44 ಲಕ್ಷ ಮೀರಿದೆ. ಈ ಮಧ್ಯೆ, 30 ಲಕ್ಷಕ್ಕೂ ಹೆಚ್ಚು ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.
ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ 19.20 ಲಕ್ಷ ದಾಟಿದ್ದು, 109,802 ಮಂದಿ ಈವರೆಗೆ ಮೃತಪಟ್ಟಿದ್ದಾರೆ. ಬ್ರೆಜಿಲ್ನಲ್ಲಿ ಈವರೆಗೆ 6.72 ಲಕ್ಷಕ್ಕೂ ಹೆಚ್ಚು ಮಂದಿಗೆ ಸೋಂಕು ತಗುಲಿದ್ದು, 35,930 ಜನ ಸಾವಿಗೀಡಾಗಿದ್ದಾರೆ. ರಷ್ಯಾದಲ್ಲಿ 4.58 ಲಕ್ಷ ಜನರಿಗೆ ಸೋಂಕು ತಗುಲಿ 5,717 ಜನ ಮೃತಪಟ್ಟಿದ್ದಾರೆ. ರಷ್ಯಾದಲ್ಲಿ ಸಾವಿನ ಸಂಖ್ಯೆಯಲ್ಲಿ ಶನಿವಾರ ದಿಡೀರ್ ಏರಿಕೆ ಕಂಡುಬಂದಿತ್ತು. ಪಾಕಿಸ್ತಾನದಲ್ಲಿ ಸೋಂಕಿತರ ಸಂಖ್ಯೆ 93,983 ತಲುಪಿದ್ದು, ಈವರೆಗೆ 1,935 ಸಾವು ಸಂಭವಿಸಿದೆ. ಕೊರೋನಾದಿಂದಾಗಿ ಈವರೆಗೆ ಬ್ರೆಜಿಲ್ನಲ್ಲಿ 35,930, ಬ್ರಿಟನ್ನಲ್ಲಿ 40,548, ಸ್ಪೇನ್ನಲ್ಲಿ 27,135, ಇಟಲಿಯಲ್ಲಿ 33,846, ಫ್ರಾನ್ಸ್ನಲ್ಲಿ 29,145 ಹಾಗೂ ಜರ್ಮನಿಯಲ್ಲಿ 8,673 ಮಂದಿ ಅಸುನೀಗಿದ್ದಾರೆ.
ಮೆಕ್ಸಿಕೊದಲ್ಲಿ ಸಾವಿನ ಸಂಖ್ಯೆ ಏರಿಕೆ
ಮೆಕ್ಸಿಕೊದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 3,600 ಹೊಸ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಅಲ್ಲಿನ ಸೋಂಕಿತರ ಸಂಖ್ಯೆ 113,619ಕ್ಕೆ ಏರಿಕೆಯಾಗಿದೆ. ಈವರೆಗೆ 13,511 ಜನ ಮೃತಪಟ್ಟಿದ್ದಾರೆ. ಇನ್ನೂ 1,189 ಮಂದಿಯ ಸಾವು ಯಾವ ಕಾರಣದಿಂದ ಸಂಭವಿಸಿದೆ ಎಂಬುದು ಇನ್ನಷ್ಟೇ ತಿಳಿದು ಬರಬೇಕಿದೆ ಎಂದು ಅಲ್ಲಿನ ಆರೋಗ್ಯ ಸಚಿವಾಲಯ ತಿಳಿಸಿದೆ. ಸದ್ಯ ಮೆಕ್ಸಿಕೊದಲ್ಲಿ 19,278 ಸಕ್ರಿಯ ಪ್ರಕರಣಗಳಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


