ಭಾರತದ ಧಾರ್ಮಿಕ ಸ್ವಾತಂತ್ರ್ಯದ ಬಗ್ಗೆ ತೀವ್ರ ಆತಂಕವಿದೆ: ಅಮೆರಿಕ ರಾಯಭಾರಿ
ಐತಿಹಾಸಿಕವಾಗಿ ಭಾರತ ಎಲ್ಲಾ ಧರ್ಮಗಳನ್ನು ಗೌರವಿಸುತ್ತಿದ್ದು ಧರ್ಮ ಸಹಿಷ್ಣುತೆಯನ್ನು ಸಾರುವ ದೇಶವಾಗಿದೆ. ಆದರೆ ಭಾರತದಲ್ಲಿ ನಡೆಯುತ್ತಿರುವ ಧಾರ್ಮಿಕ ಸ್ವಾತಂತ್ರ್ಯಗಳ ವಿದ್ಯಾಮಾನಗಳು ತೀವ್ರ ಕಳವಳವನ್ನು ಹುಟ್ಟಿಸುತ್ತಿವೆ ಎಂದು ಅಮೆರಿಕದ ಡೊನಾಲ್ಡ್ ಟ್ರಂಪ್ ಆಡಳಿತದ ಉನ್ನತಾಧಿಕಾರಿಯೊಬ್ಬರು ಹೇಳಿದ್ದಾರೆ.

ವಾಷಿಂಗ್ಟನ್: ಐತಿಹಾಸಿಕವಾಗಿ ಭಾರತ ಎಲ್ಲಾ ಧರ್ಮಗಳನ್ನು ಗೌರವಿಸುತ್ತಿದ್ದು ಧರ್ಮ ಸಹಿಷ್ಣುತೆಯನ್ನು ಸಾರುವ ದೇಶವಾಗಿದೆ. ಆದರೆ ಭಾರತದಲ್ಲಿ ನಡೆಯುತ್ತಿರುವ ಧಾರ್ಮಿಕ ಸ್ವಾತಂತ್ರ್ಯಗಳ ವಿದ್ಯಾಮಾನಗಳು ತೀವ್ರ ಕಳವಳವನ್ನು ಹುಟ್ಟಿಸುತ್ತಿವೆ ಎಂದು ಅಮೆರಿಕದ ಡೊನಾಲ್ಡ್ ಟ್ರಂಪ್ ಆಡಳಿತದ ಉನ್ನತಾಧಿಕಾರಿಯೊಬ್ಬರು ಹೇಳಿದ್ದಾರೆ.
ಅಂತಾರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ರಾಯಭಾರಿಯಾಗಿರುವ ಸ್ಯಾಮುವೆಲ್ ಬ್ರೌನ್ ಬ್ಯಾಕ್ ಅವರು ಈ ಹೇಳಿಕೆ ನೀಡಿದ್ದು ನಿನ್ನೆ ವಾಷಿಂಗ್ಟನ್ ನಲ್ಲಿ 2019ನೇ ಸಾಲಿನ ಅಂತಾರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ವರದಿ ಬಿಡುಗಡೆ ಕಾರ್ಯಕ್ರಮದಲ್ಲಿ ಹೇಳಿದರು.
ವರದಿಯಲ್ಲಿ ಜಗತ್ತಿನಾದ್ಯಂತ ನಡೆಯುತ್ತಿರುವ ಧಾರ್ಮಿಕ ಸ್ವಾತಂತ್ರ್ಯಗಳ ಉಲ್ಲಂಘನೆ ಬಗ್ಗೆ ಪ್ರಸ್ತಾಪ ಮಾಡಲಾಗಿದೆ. ಅಮೆರಿಕಾ ಕಾರ್ಯದರ್ಶಿ ಮೈಕ್ ಪೊಂಪಿಯೊ ಈ ವರದಿಯನ್ನು ಬಿಡುಗಡೆ ಮಾಡಿದರು.
ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ವಿಷಯದಲ್ಲಿ ನಡೆಯುತ್ತಿರುವ ವಿದ್ಯಾಮಾನಗಳನ್ನು ನೋಡಿದಾಗ ತೀವ್ರ ಆತಂಕವಾಗುತ್ತಿದೆ. ಐತಿಹಾಸಿಕವಾಗಿ ಧಾರ್ಮಿಕ ಸಹಿಷ್ಣುತೆ ಹೊಂದಿರುವ ದೇಶ ಭಾರತ ಎಂದು ಬ್ರೌನ್ ಬಾಕ್ ಹೇಳಿದ್ದಾರೆ.
ಈ ಹಿಂದೆ ಭಾರತ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ವರದಿಯನ್ನು ತಳ್ಳಿಹಾಕಿತ್ತು. ತಮ್ಮ ದೇಶದ ಧಾರ್ಮಿಕ ಸ್ವಾತಂತ್ರ್ಯದ ಬಗ್ಗೆ ವಿದೇಶವೊಂದು ವರದಿ ನೀಡಲು ಸಾಧ್ಯವಿಲ್ಲ. ತಮ್ಮ ದೇಶದ ನಾಗರಿಕರ ಸ್ವಾತಂತ್ರ್ಯವನ್ನು ಸಾಂವಿಧಾನಿಕವಾಗಿ ಹೇಗೆ ರಕ್ಷಿಸಬೇಕೆಂದು ತಿಳಿದಿದೆ. ಅದನ್ನು ಒಪ್ಪಲು ಸಹ ಆಗುವುದಿಲ್ಲ ಎಂದು ಹೇಳಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


