ಪಾಕಿಸ್ತಾನದಲ್ಲಿ ಭಾರತದ ಇಬ್ಬರು ರಾಜತಾಂತ್ರಿಕ ಸಿಬ್ಬಂದಿ ದಿಢೀರ್ ನಾಪತ್ತೆ, ಆತಂಕ ಸೃಷ್ಟಿ!
ಈ ಹಿಂದೆ ಪಾಕಿಸ್ತಾನದಲ್ಲಿರುವ ಭಾರತೀಯ ರಾಯಭಾರಿ ಕಚೇರಿಯ ಅಧಿಕಾರಿಯನ್ನು ಐಎಸ್ಐ ಏಜೆಂಟ್ ಓರ್ವ ಹಿಂಬಾಲಿಸಿದ್ದು ಆತಂಕಕ್ಕೀಡು ಮಾಡಿತ್ತು. ಇದೀಗ ಭಾರತದ ಇಬ್ಬರು ರಾಜತಾಂತ್ರಿಕ ಸಿಬ್ಬಂದಿ ನಾಪತ್ತೆಯಾಗಿದ್ದಾರೆ.

ನವದೆಹಲಿ/ಇಸ್ಲಾಮಾಬಾದ್: ಈ ಹಿಂದೆ ಪಾಕಿಸ್ತಾನದಲ್ಲಿರುವ ಭಾರತೀಯ ರಾಯಭಾರಿ ಕಚೇರಿಯ ಅಧಿಕಾರಿಯನ್ನು ಐಎಸ್ಐ ಏಜೆಂಟ್ ಓರ್ವ ಹಿಂಬಾಲಿಸಿದ್ದು ಆತಂಕಕ್ಕೀಡು ಮಾಡಿತ್ತು. ಇದೀಗ ಭಾರತದ ಇಬ್ಬರು ರಾಜತಾಂತ್ರಿಕ ಸಿಬ್ಬಂದಿ ನಾಪತ್ತೆಯಾಗಿದ್ದಾರೆ.
ಕಳೆದ ಎರಡು ಗಂಟೆಗಳಿಂದ ಪಾಕಿಸ್ತಾನದ ಇಬ್ಬರು ಭಾರತೀಯ ಹೈಕಮಿಷನ್ ಸಿಬ್ಬಂದಿ ನಾಪತ್ತೆಯಾಗಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ. ಈ ಸಂಬಂಧ ಪಾಕಿಸ್ತಾನ ಅಧಿಕಾರಿಗಳೊಂದಿಗೆ ಭಾರತ ಸರ್ಕಾರ ಈ ವಿಷಯ ಕುರಿತಾಗಿ ಚರ್ಚೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.
ಭಾರತೀಯ ಹೈಕಮಿಷನ್ ಸಿಬ್ಬಂದಿ ಇಬ್ಬರೂ ಸಿಐಎಸ್ಎಫ್ ಚಾಲಕರಾಗಿದ್ದರು. ಈ ಇಬ್ಬರು ಇಸ್ಲಾಮಾಬಾದ್‌ನಲ್ಲಿ ಕರ್ತವ್ಯದಲ್ಲಿದ್ದರು ಎಂಬುದು ಬೆಳಕಿಗೆ ಬಂದಿದೆ. ಬೆಳಗ್ಗೆ ಮನೆಯಿಂದ ಹೊರಟ ಅವರು ಕಚೇರಿಗೆ ಬಂದಿಲ್ಲ. ಇದು ಸದ್ಯದ ಮಟ್ಟಿಗೆ ಆಂತಕಕ್ಕೀಡಾಗಿದೆ.
ವರದಿಯ ಬಗ್ಗೆ ಪ್ರತಿಕ್ರಿಯಿಸಿದ ಭಾರತದ ಮಾಜಿ ರಾಜತಾಂತ್ರಿಕ ಶರತ್ ಸಬರ್ವಾಲ್ ಅವರು ನೀತಿ ಸಂಹಿತೆಯನ್ನು ಪಾಲಿಸದ ಕಾರಣ ಪಾಕಿಸ್ತಾನದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


