ಲಡಾಖ್ ಗಡಿ ಸಂಘರ್ಷ: ಸಾವು-ನೋವಿನ ಮಾಹಿತಿ ನೀಡದ ಚೀನಾ, ಮೃತ ಯೋಧರ ಕುಟುಂಬಸ್ಥರಲ್ಲಿ ಮಡುಗಟ್ಟಿದ್ದ ಆಕ್ರೋಶ
ಗಲ್ವಾನ್ ಕಣಿವೆ ಪ್ರದೇಶದಲ್ಲಿ ಭಾರತದೊಂದಿಗೆ ಮುಖಾಮುಖಿ ಘರ್ಷಣೆಯಲ್ಲಿ ಅಪಾರ ಪ್ರಮಾಣದ ಸಾವು ನೋವು ಆಗಿದ್ದರೂ ಈ ಘಟನೆಯಲ್ಲಿ ಎಷ್ಟು ಮಂದಿ ಸೈನಿಕರು ಸಾವನ್ನಪ್ಪಿದ್ದಾರೆ ಎಂಬುದರ ಬಗ್ಗೆ ಚೀನಾ ದೇಶ ಯಾವುದೇ ಮಾಹಿತಿ ನೀಡಿಲ್ಲ

ಬೀಜಿಂಗ್: ಗಲ್ವಾನ್ ಕಣಿವೆ ಪ್ರದೇಶದಲ್ಲಿ ಭಾರತದೊಂದಿಗೆ ಮುಖಾಮುಖಿ ಘರ್ಷಣೆಯಲ್ಲಿ ಅಪಾರ ಪ್ರಮಾಣದ ಸಾವು ನೋವು ಆಗಿದ್ದರೂ ಈ ಘಟನೆಯಲ್ಲಿ ಎಷ್ಟು ಮಂದಿ ಸೈನಿಕರು ಸಾವನ್ನಪ್ಪಿದ್ದಾರೆ ಎಂಬುದರ ಬಗ್ಗೆ ಚೀನಾ ದೇಶ ಯಾವುದೇ ಮಾಹಿತಿ ನೀಡಿಲ್ಲ.
ಚೀನಾದ ಆಡಳಿತರೂಢ ಕಮ್ಯೂನಿಸ್ಟ್ ಪಕ್ಷದ ಈ ನಿರ್ಧಾರದ ಬಗ್ಗೆ ಗಡಿ ಸಂಘರ್ಷದಲ್ಲಿ ಮೃತಪಟ್ಟ ಚೀನಾ ಸೇನಾಪಡೆಗಳ ಕುಟುಂಬದವರಲ್ಲಿ ಅಸಮಾಧಾನದ ಹೊಗೆಯಾಡುತ್ತಿದೆ ಎಂದು ಅಮೆರಿಕ ಮೂಲಕ ಬ್ರೀಟ್‌ಬಾರ್ಟ್ ನ್ಯೂಸ್ ವರದಿ ಮಾಡಿದೆ.
ವೀಬೊ ಇನ್ನಿತರ ಸಾಮಾಜಿಕ ಮಾಧ್ಯಮಗಳಲ್ಲಿ ಸಂಘರ್ಘದಲ್ಲಿ ಮೃತರಾದ ಚೀನಾ ಸೈನಿಕರ ಕುಟುಂಬದವರು ಕೋಪ,ಹತಾಶೆಯನ್ನು ಹೊರಹಾಕುತ್ತಿದ್ದಾರೆ.ಅವರನ್ನು ಸಂತೈಸಲು ಚೀನಾ ಸರ್ಕಾರ ಹೆಣಗಾಡುತ್ತಿದೆ ಎಂದು ಬ್ರೀಟ್ ಬಾರ್ಟ್ ಹೇಳಿದೆ.
ಜೂನ್ 15 ರಂದು ನಡೆದ ಸಂಘರ್ಷದಲ್ಲಿ ಭಾರತದ 20 ಮಂದಿ ಯೋಧರು ಹುತಾತ್ಮರಾಗಿದ್ದಾರೆ ಎಂದು ಭಾರತ ಸರ್ಕಾರ ಬಹಿರಂಗವಾಗಿ ಹೇಳಿಕೊಂಡಿದೆ.ಆದರೆ, ಈವರೆಗೆ ಕೆಲವೇ ಕೆಲವು ಅಧಿಕಾರಿಗಳ ಸಾವನ್ನು ಚೀನಾ ಸರ್ಕಾರ ಒಪ್ಪಿಕೊಂಡಿದೆ.
ಚೀನಾದ 43 ಮಂದಿ ಸೈನಿಕರು ಮೃತಪಟ್ಟು ಹಲವು ಮಂದಿ ಗಾಯಗೊಂಡಿರುವುದಾಗಿ ಭಾರತ ಸರ್ಕಾರದ ಹಾಲಿ ಸಚಿವ ಜನರಲ್ ವಿಕೆ ಸಿಂಗ್ ಇತ್ತೀಚಿಗೆ ಹೇಳಿಕೆ ನೀಡಿದ್ದರು.
ಚೀನಾ ಸಾವಿಗೀಡಾದವರ ಬಗ್ಗೆ ಮೌನ ವಹಿಸಿದ್ದರೂ ಲಡಾಖ್ ನಲ್ಲಿ ಭಾರತದೊಂದಿಗೆ ನಡೆದ ಘರ್ಷಣೆಯಲ್ಲಿ ಚೀನಾದ ಕಡೆಯವರಿಗೂ ಹಾನಿಯಾಗಿದೆ ಎಂದು ಚೀನಾದ ಬ್ರೀಟ್ ಬಾರ್ಟ್ ಪ್ರಧಾನ ಸಂಪಾದಕ ಹು ಕ್ಸಿ ಜಿಂಗ್ ಟ್ವೀಟ್ ಮಾಡಿದ್ದಾರೆ. ಘರ್ಷಣೆಯಲ್ಲಿ ಮೃತರಾದ ಅನೇಕ ಯೋಧರ ಕುಟುಂಬದವರು ವಿಬೊ ಮತ್ತಿತರ ಕಡೆಗಳಲ್ಲಿ ಸರ್ಕಾರದ ನಡೆ ಬಗ್ಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದು ಅನೇಕ ವರದಿಗಳಾಗಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


