ಕೋವಿಡ್-19: 5 ಲಕ್ಷ ಗಡಿ ದಾಟಿದ ಕೊರೋನಾ ವೈರಸ್ ಸೋಂಕಿತರ ಜಾಗತಿಕ ಸಾವಿನ ಸಂಖ್ಯೆ
ವಿಶ್ವದ 213ಕ್ಕೂ ಅಧಿಕ ರಾಷ್ಟ್ರಗಳಲ್ಲಿ ಮರಣ ಮೃದಂಗ ಭಾರಿಸುತ್ತಿರುವ ಮಾರಕ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ ಇದೀಗ 5 ಲಕ್ಷ ಗಡಿ ದಾಟಿದೆ.

ವಾಷಿಂಗ್ಟನ್: ವಿಶ್ವದ 213ಕ್ಕೂ ಅಧಿಕ ರಾಷ್ಟ್ರಗಳಲ್ಲಿ ಮರಣ ಮೃದಂಗ ಭಾರಿಸುತ್ತಿರುವ ಮಾರಕ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ ಇದೀಗ 5 ಲಕ್ಷ ಗಡಿ ದಾಟಿದೆ.
ಹೌದು.. ಜಗತ್ತಿನಾದ್ಯಂತ ದಿನದಿಂದ ದಿನಕ್ಕೆ ಕೋವಿಡ್–19 ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಇದುವರೆಗೆ ಮಹಾಮಾರಿಗೆ ಬಲಿಯಾದವರ ಸಂಖ್ಯೆ 5 ಲಕ್ಷ ಗಡಿ ದಾಟಿದೆ. ನಿನ್ನೆ ಒಂದೇ ದಿನ ಜಗತ್ತಿನಾದ್ಯಂತ 1.80 ಲಕ್ಷ ಮಂದಿ ಹೊಸ ಸೋಂಕು ಪ್ರಕರಣ ದಾಖಲಾಗಿದ್ದು, ಆ ಮೂಲಕ ಜಾಗತಿಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 10,063,319ಕ್ಕೆ ಏರಿಕೆಯಾಗಿದೆ. ಅಮೆರಿಕದ ಜಾನ್ ಹಾಪ್ ಕಿನ್ಸ್ ವಿಶ್ವವಿದ್ಯಾಲಯದ ಕೊರೊನಾ ಸಂಶೋಧನಾ ಕೇಂದ್ರ ವರದಿ ಮಾಡಿರುವಂತೆ ಈ ವರೆಗೂ ಜಗತ್ತಿನಾದ್ಯಂತ ಸೋಂಕಿತರ ಸಂಖ್ಯೆ 10.1 ಮಿಲಿಯನ್ ಗೆ ಏರಿಕೆಯಾಗಿದೆ ಎಂದು ತಿಳಿಸಿದೆ.
ಒಟ್ಟಾರೆ ಸೋಂಕಿತರಲ್ಲಿ 500,108 ಮಂದಿ ಮೃತಪಟ್ಟಿದ್ದು, ಇದುವರೆಗೆ ಒಟ್ಟು 5.12 ಲಕ್ಷ ಸೋಂಕು ಪೀಡಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.
ಅತೀಹೆಚ್ಚು (2,637,077 ) ಜನರಲ್ಲಿ ಸೋಂಕು ಕಾಣಿಸಿಕೊಂಡಿರುವ ಅಮೆರಿಕದಲ್ಲಿ ಈವರೆಗೆ ಒಟ್ಟು 128,437 ಮಂದಿ ಮೃತಪಟ್ಟಿದ್ದಾರೆ. 1,093,456 ಮಂದಿ ಗುಣಮುಖರಾಗಿದ್ದಾರೆ. ಬ್ರೆಜಿಲ್‌ನಲ್ಲಿ 1,345,254ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಈ ಪೈಕಿ 57,658 ಸೋಂಕಿತರು ಮೃತಪಟ್ಟು, 733,848 ಮಂದಿ ಗುಣಮುಖರಾಗಿದ್ದಾರೆ.
ರಷ್ಯಾದಲ್ಲಿ ಸೋಂಕಿತರ ಸಂಖ್ಯೆ634,437ಕ್ಕೆ ಏರಿದ್ದು, ಸಾವಿನ ಸಂಖ್ಯೆ 9,073 ಆಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


