ವಿದೇಶ

ಕೊರೋನಾವೈರಸ್: ಚೀನಾದಲ್ಲಿ ಮತ್ತೆ 35 ಮಂದಿ ಬಲಿ ಮೃತರ ಸಂಖ್ಯೆ 2,870 ಏರಿಕೆ

ಚೀನಾದಲ್ಲಿ ತನ್ನ ಮರಣ ಮೃದಂಗವನ್ನು ಮುಂದುವರೆಸಿರುವ ಮಹಾಮಾರಿ ಕೊರೋನಾ ವೈರಸ್ ಹೊಸದಾಗಿ ಮತ್ತೆ 35 ಮಂದಿಯನ್ನು ಬಲಿಪಡೆದುಕೊಂಡಿದ್ದು, ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಈಗ 2,870ಕ್ಕೆ ಏರಿಕೆಯಾಗಿದೆ.

ಕೊರೋನಾವೈರಸ್: ಚೀನಾದಲ್ಲಿ ಮತ್ತೆ 35 ಮಂದಿ ಬಲಿ ಮೃತರ ಸಂಖ್ಯೆ 2,870 ಏರಿಕೆ
ಸಂಗ್ರಹ ಚಿತ್ರ
Published On :

ಬೀಜಿಂಗ್: ಚೀನಾದಲ್ಲಿ ತನ್ನ ಮರಣ ಮೃದಂಗವನ್ನು ಮುಂದುವರೆಸಿರುವ ಮಹಾಮಾರಿ ಕೊರೋನಾ ವೈರಸ್ ಹೊಸದಾಗಿ ಮತ್ತೆ 35 ಮಂದಿಯನ್ನು ಬಲಿಪಡೆದುಕೊಂಡಿದ್ದು, ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಈಗ 2,870ಕ್ಕೆ ಏರಿಕೆಯಾಗಿದೆ. 

ವೈರಾಣು ಸೋಂಕು ಮತ್ತೆ 573 ಮಂದಿಯಲ್ಲಿ ಪತ್ತೆಯಾಗಿದ್ದು, ಚೀನಾದ 31 ಪ್ರಾಂತ್ಯಗಳ ಇತ್ತೀಚಿನ ಮಾಹಿತಿಗಳ ಪ್ರಕಾರ ಸೋಂಕಿತರ ಸಂಖ್ಯೆ 79,824ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ. 

ಜನವರಿ ಹಾಗೂ ಫೆಬ್ರವರಿ ತಿಂಗಳುಗಳಲ್ಲಿಯೇ ಸೋಂಕಿತರ ಸಂಖ್ಯೆ ಹೆಚ್ಚಾಗಿ ಕಂಡು ಬಂದಿದೆ ಎಂದು ವರದಿಗಳು ತಿಳಿಸಿವೆ. 

ಕೊರೋನಾ ವೈರಸ್ ವೊದು ಜಾತಿಯ ವೈರಸ್ ಆಗಿದೆ. ಸೂಕ್ಷ್ಮ ದರ್ಶಕದಲ್ಲಿ ಇದು ಕಿರೀಟ ರೀತಿ ಕಾಣಿಸುತ್ತದೆ. ಲ್ಯಾಟಿನ್ ಭಾಷೆಯಲ್ಲಿ ಕೊರೋನಾ ಎಂದರೆ ಕಿರೀಟ ಎಂದರ್ಥ. ಹೀಗಾಗಿ ವೈರಸ್'ಗೆ ಕೊರೋನಾ ಹೆಸರು. ಚೀನಾದ ವುಹಾನ್ ನಗರದಲ್ಲಿನ ಅಕ್ರಮ ವನ್ಯ ಜೀವಿ ಮಾಂಸ ಕೇಂದ್ರದ ಮೂಲಕ ಮಾನವರಿಗೆ ವೈರಸ್ ತಗುಲಿದೆ. ವೈರಸ್ ಒಂಟೆ, ಬೆಕ್ಕು, ಬಾವಲಿ ಸೇರಿದಂತೆ ಹಲವಾರು ಪ್ರಾಣಿಗಳಲ್ಲೂ ಪ್ರವೇಶಿಸುತ್ತಿದೆ. ಪ್ರಾಣಿಗಳ ದೇಹ ಸೇರಿದ ಈ ವೈರಸ್ ಅಪರೂಪ ಎಂಬಂತೆ ಮನುಷ್ಯರ ದೇಹವನ್ನೂ ಸೇರುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.