ವಿದೇಶ

ಕೊರೋನಾ ವೈರಸ್ ಮರಣ ಮೃದಂಗಕ್ಕೆ ಜಗತ್ತಿನಾದ್ಯಂತ ಮೂರು ಸಾವಿರ ಬಲಿ..!

ವಿಶ್ವಾದ್ಯಂತ ಭೀತಿ ಹುಟ್ಟಿಸಿರುವ ಕೊರೋನಾ ಸೋಕಿನಿಂದ ಇದುವರೆಗೆ ಮೃತಪಟ್ಟವರ ಸಂಖ್ಯೆ ಮೂರು ಸಾವಿರಕ್ಕೆ ಏರಿಕೆಯಾಗಿದೆ.

ಕೊರೋನಾ ವೈರಸ್ ಮರಣ ಮೃದಂಗಕ್ಕೆ ಜಗತ್ತಿನಾದ್ಯಂತ ಮೂರು ಸಾವಿರ ಬಲಿ..!
ಸಂಗ್ರಹ ಚಿತ್ರ
Published On :

ಬೀಜಿಂಗ್: ವಿಶ್ವಾದ್ಯಂತ ಭೀತಿ ಹುಟ್ಟಿಸಿರುವ ಕೊರೋನಾ ಸೋಕಿನಿಂದ ಇದುವರೆಗೆ ಮೃತಪಟ್ಟವರ ಸಂಖ್ಯೆ ಮೂರು ಸಾವಿರಕ್ಕೆ ಏರಿಕೆಯಾಗಿದೆ.

ಜಗತ್ತಿನ 60 ದೇಶಗಳಿಗೆ ಕೊರೋನಾ ವೈರಸ್ ಸೋಂಕು ವ್ಯಾಪಿಸಿದ್ದು ಎಚ್ಚರಿಕೆಯಿಂದ ಇರುವಂತೆ ಜನತೆಯ ಆರೋಗ್ಯದ ಬಗ್ಗೆ ವಿಶೇಷ ಎಚ್ಚರಿಕೆ ವಹಿಸುವಂತೆ ವಿಶ್ವ ಆರೋಗ್ಯ ಸಂಸ್ಥೆ ಎಲ್ಲ ದೇಶಗಳಿಗೆ ಸೂಚನೆ ನೀಡಿದೆ.  ಚೀನಾವೊಂದರಲ್ಲೇ 2,912 ಮಂದಿ ಈವರೆಗೆ ಕೊರೋನಾ ವೈರಸ್​ಗೆ ಬಲಿಯಾಗಿರುವುದಾಗಿ ಚೀನಾದ ರಾಷ್ಟ್ರೀಯ ಆರೋಗ್ಯ ಆಯೋಗ ಸೋಮವಾರ ಬೆಳಗ್ಗೆ ಮಾಹಿತಿ ನೀಡಿದೆ.

ಈ ಕಳವಳಕಾರಿ ಸುದ್ದಿಯ ನಡುವೆ ಖುಷಿಯ ವಿಚಾರವೆಂದರೆ ಕೊರೋನಾ ವೈರಸ್ ಸೋಂಕು​ ಪ್ರಕರಣಗಳು ದಿನೇ ದಿನೇ ತುಂಬಾ ಕಡಿಮೆಯಾಗಿದೆ. ಹುಬೇ ಹೊರಭಾಗದಲ್ಲಿ ಕೇವಲ 6 ಪ್ರಕರಣಗಳು ಮಾತ್ರ ದಾಖಲಾಗಿವೆ. ಇನ್ನು 60 ದೇಶಗಳಿಗೆ ಮಾರಕ ವೈರಸ್​ ಹರಡಿದೆ. ಕೊರೋನಾ ವೈರಸ್​ ಕಳೆದ ವರ್ಷ ಡಿಸೆಂಬರ್​ನಲ್ಲಿ ಕೇಂದ್ರ ಚೀನಾದ ಹುಬೇ ಪ್ರಾಂತ್ಯದ ವುಹಾನ್​ ನಗರದಲ್ಲಿ ಸ್ಫೋಟಗೊಂಡಿತ್ತು. ಅದರಲ್ಲೂ ಜೀವಂತ ಪ್ರಾಣಿ ಮಾರುಕಟ್ಟೆಯಿಂದ ಹರಡಿತ್ತು ಎಂದು ಹೇಳಲಾಗಿದೆ.

ಯುಎಸ್​ ಆಸ್ಟ್ರೇಲಿಯಾದಲ್ಲಿ ಕಳೆದ ವೀಕೆಂಡ್​ನಲ್ಲಿ ಮೊದಲ ಸಾವಿನ ಪ್ರಕರಣಗಳು ವರದಿಯಾಗಿದೆ. ಕಳೆದ 48 ಗಂಟೆಗಳಲ್ಲಿ ಯುರೋಪ್​ ದೇಶ ಇಟಲಿಯಲ್ಲಿ ವೈರಸ್​ ಸೋಂಕಿತರ ಪ್ರಮಾಣ ದ್ವಿಗುಣವಾಗಿದೆ.

ವಯಸ್ಸಾಗಿ ಇತರೆ ಅನಾರೋಗ್ಯದಿಂದ ದುರ್ಬಲಗೊಂಡಿರುವ 60ರ ವಯೋಮಾನದವರ ಮೇಲೆ ಕೊರೋನಾ ವೈರಸ್​ ಹೆಚ್ಚಾಗಿ ಪರಿಣಾಮ ಬೀರಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ. ವೈರಸ್​ ತಗುಲಿದ ಅನೇಕ ಮಂದಿ ಸಣ್ಣ ಪ್ರಮಾಣದ ರೋಗದ ಲಕ್ಷಣಗಳನ್ನು ಹೊಂದಿದ್ದಾರೆ. ಶೇ. 14 ಮಂದಿ ನ್ಯೂಮೋನಿಯಾದಂತಹ ಗಂಭೀರವಾದ ಕಾಯಿಲೆಯಿಂದ ಬಳಲುತ್ತಿದ್ದಾರೆ. ಶೇ. 5 ಮಂದಿಯ ಸ್ಥಿತಿ ಹೀನಾಯವಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಮಾಹಿತಿ ನೀಡಿದೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.