ಕೊರೋನಾ ವೈರಸ್: ಚೀನಾದಲ್ಲಿ 3,042 ದಾಟಿದ ಸಾವಿನ ಸಂಖ್ಯೆ
ಮಾರಣಾಂತಿಕ ಕೊರೋನಾ ವೈರಸ್ ನಿಂದಾಗಿ ತತ್ತರಿಸಿ ಹೋಗಿರುವ ಚೀನಾದಲ್ಲಿ ವೈರಸ್ ಗೆ ಬಲಿಯಾದವರ ಸಂಖ್ಯೆ 3,042ಕ್ಕೆ ಏರಿಕೆಯಾಗಿದೆ.

ಬೀಜಿಂಗ್: ಮಾರಣಾಂತಿಕ ಕೊರೋನಾ ವೈರಸ್ ನಿಂದಾಗಿ ತತ್ತರಿಸಿ ಹೋಗಿರುವ ಚೀನಾದಲ್ಲಿ ವೈರಸ್ ಗೆ ಬಲಿಯಾದವರ ಸಂಖ್ಯೆ 3,042ಕ್ಕೆ ಏರಿಕೆಯಾಗಿದೆ.
ಚೀನಾದಲ್ಲಿ ಬುಧವಾರ 31 ಮತ್ತು ಗುರುವಾರ 30 ಹೊಸ ಸಾವಿನ ಪ್ರಕರಣಗಳು ಸಂಭವಿಸಿದ್ದು, ಆ ಮೂಲಕ ಮಾರಣಾಂತಿಕ ಕೊರೋನಾ ವೈರಸ್‌ನಿಂದ ಸಾವನ್ನಪ್ಪಿದವರ ಸಂಖ್ಯೆ 3,042 ಕ್ಕೆ ಏರಿಕೆಯಾಗಿದೆ. ಅಂತೆಯೇ ಕೊರೊನಾವೈರಸ್ ಸೋಂಕಿನ 139 ಹೊಸ ಪ್ರಕರಣಗಳ ವರದಿಗಳು ಬಂದಿದ್ದು, ಚೀನಾದಲ್ಲಿ ವೈರಸ್ ಸೋಂಕಿಗೆ ತುತ್ತಾದವರ ಸಂಖ್ಯೆ 80,552 ಕ್ಕೆ ತಲುಪಿದೆ ಎಂದು ಆರೋಗ್ಯ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ಅಂತೆಯೇ ಪ್ರಸ್ತುತ ಸಂಭವಿಸಿರುವ ಎಲ್ಲ ಸಾವುಗಳೂ ಕೊರೋನಾ ವೈರಸ್ ಕೇಂದ್ರ ಬಿಂದುವಾಗಿರುವ ಹುಬೈ ಪ್ರಾಂತ್ಯದಲ್ಲಿ ಸಂಭವಿಸಿವೆ ಎಂದು ರಾಷ್ಟ್ರೀಯ ಆರೋಗ್ಯ ಆಯೋಗ ತಿಳಿಸಿದೆ. ಅಂತೆಯೇ ಚಿಕಿತ್ಸೆಯಿಂದ ಚೇತರಿಸಿಕೊಂಡ ನಂತರ ಬುಧವಾರ 2,189 ಜನರನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಗಿದ್ದು, ತೀವ್ರತರವಾದ ಪ್ರಕರಣಗಳ ಸಂಖ್ಯೆ 464 ರಷ್ಟು ಇಳಿದು 5,952 ಕ್ಕೆ ತಲುಪಿದೆ.
ಚೇತರಿಸಿಕೊಂಡ ನಂತರ ಸುಮಾರು 52,045 ಜನರನ್ನು ಮನೆಗೆ ಕಳುಹಿಸಲಾಗಿದ್ದು, 25,352 ರೋಗಿಗಳು ಇನ್ನೂ ಸೋಂಕುನಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. 522 ಜನರು ಇನ್ನೂ ವೈರಸ್ ಸೋಂಕಿಗೆ ಒಳಗಾಗಿರುವ ಶಂಕೆ ಇದೆ ಎಂದು ಆಯೋಗ ತಿಳಿಸಿದೆ. ಬುಧವಾರದವರೆಗೆ ಹಾಂಕಾಂಗ್ ವಿಶೇಷ ಆಡಳಿತ ಪ್ರದೇಶದಲ್ಲಿ ಎರಡು ಸಾವು ಸೇರಿದಂತೆ 104 ಪ್ರಕರಣಗಳನ್ನು ದೃಢಪಡಿಸಲಾಗಿದೆ. ಮಕಾವೊ ನಲ್ಲಿ 10 ಪ್ರಕರಣಗಳು ದೃಢಪಟ್ಟರೆ, ತೈವಾನ್‌ನಲ್ಲಿ 42 ಪ್ರಕರಣಗಳು ವರದಿಯಾಗಿವೆ ಎಂದು ಆಯೋಗ ಹೇಳಿದೆ. ಚೇತರಿಸಿಕೊಂಡ ನಂತರ ಹಾಂಗ್ ಕಾಂಗ್‌ನಲ್ಲಿ 43, ಮಕಾವೊದಲ್ಲಿ 9 ಮತ್ತು ತೈವಾನ್‌ನಲ್ಲಿ 12 ರೋಗಿಗಳನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಗಿದೆ.
Related Article
ವಿಶ್ವಾದ್ಯಂತ ಕೊರೋನಾ ವೈರಸ್ ಗೆ 3300 ಮಂದಿ ಬಲಿ: ವಿಶ್ವ ಆರೋಗ್ಯ ಸಂಸ್ಥೆ
ಕೊರೊನಾ ವೈರಸ್ ಗೆ ಭಾರತೀಯರು ಭಯಪಡುವ ಅಗತ್ಯವಿಲ್ಲ: ವಿಶ್ವ ಆರೋಗ್ಯ ಸಂಸ್ಥೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


