ಚೀನಾ: ಕೊರೋನಾ ಶಂಕಿತರನ್ನು ಪ್ರತ್ಯೇಕವಾಗಿ ಇಟ್ಟಿದ್ದ ಹೋಟೆಲ್ ಕಟ್ಟಡ ಕುಸಿತ, ನಾಲ್ವರು ದುರ್ಮರಣ
ಈಶಾನ್ಯ ಚೀನಾದ ಫುಜಿಯನ್ ಪ್ರಾಂತ್ಯದಲ್ಲಿ ಕೊರೋನಾ ವೈರಸ್ ಶಂಕಿತರನ್ನು ಪ್ರತ್ಯೇಕವಾಗಿ ಇಡಲಾಗಿದ್ದ ಹೋಟೆಲ್ ಕಟ್ಟಡ ಕುಸಿದು ನಾಲ್ಕು ಜನರು ಮೃತಪಟ್ಟಿದ್ದಾರೆ. ಕಟ್ಟಡದ ಅವಶೇಷಗಳಡಿಯಲ್ಲಿ ಸಿಲುಕಿದ್ದ 42 ಜನರನ್ನು ಹೊರಗೆ ತರಲಾಗಿದೆ ಎಂದು ಅಧಿಕೃತ ಮಾಧ್ಯಮಗಳು ವರದಿ ಮಾಡಿವೆ.

ಬೀಜಿಂಗ್: ಈಶಾನ್ಯ ಚೀನಾದ ಫುಜಿಯನ್ ಪ್ರಾಂತ್ಯದಲ್ಲಿ ಕೊರೋನಾ ವೈರಸ್ ಶಂಕಿತರನ್ನು ಪ್ರತ್ಯೇಕವಾಗಿ ಇಡಲಾಗಿದ್ದ ಹೋಟೆಲ್ ಕಟ್ಟಡ ಕುಸಿದು ನಾಲ್ಕು ಜನರು ಮೃತಪಟ್ಟಿದ್ದಾರೆ. ಕಟ್ಟಡದ ಅವಶೇಷಗಳಡಿಯಲ್ಲಿ ಸಿಲುಕಿದ್ದ 42 ಜನರನ್ನು ಹೊರಗೆ ತರಲಾಗಿದೆ ಎಂದು ಅಧಿಕೃತ ಮಾಧ್ಯಮಗಳು ವರದಿ ಮಾಡಿವೆ.
ಕ್ವಾನ್ಜೌ ನಗರದ ಲಿಚೆಂಗ್ ನಗರದ ಕ್ಸಿನ್‌ಜಿಯಾ ಹೋಟೆಲ್ ಕುಸಿದು ಬಿದ್ದಿದ್ದು ಅದರಲ್ಲಿ ಸುಮಾರು 71 ಜನರು ಸಿಲುಕಿದ್ದರು ಎನ್ನಲಾಗಿದೆ. ಕೊರೋನಾ ವೈರಸ್ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಶಂಕಿತರನ್ನು ಇಲ್ಲಿ ಪ್ರತ್ಯೇಕವಾಗಿ ಇಡುವ ಮೂಲಕ ಅವರ ತಪಾಸಣೆ ಹಾಗೂ ಚಿಕಿತ್ಸೆ ನೀಡಲಾಗುತಿತ್ತು.
ರಕ್ಷಣಾ ಕಾರ್ಯಾಚರಣೆ ವೇಳೆಯಲ್ಲಿ 2 ವರ್ಷದ ಬಾಲಕ ಹಾಗೂ ಆತನ ಪೋಷಕರನ್ನು ಅವಶೇಷಗಳಿಂದ ಹೊರಗೆ ತರಲಾಗಿದ್ದು,ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.
ಸುದ್ದಿ ತಿಳಿದ ಕೂಡಲೇ ಸುಮಾರು 200 ಕ್ಕೂ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಕಳೆದ ವರ್ಷ ಡಿಸೆಂಬರ್ ನಲ್ಲಿ ವುಹಾನ್ ನಲ್ಲಿ ಕಾಣಿಸಿಕೊಂಡ ಮಾರಣಾಂತಿಕ ಕೊರೋನಾ ವೈರಸ್ ನಿಂದಾಗಿ ಈವರೆಗೂ ಚೀನಾದಲ್ಲಿ ಮೃತಪಟ್ಟರ ಸಂಖ್ಯೆ 3 ಸಾವಿರಕ್ಕೆ ಏರಿಕೆ ಆಗಿದೆ.
ಚೀನಾ ಮಾತ್ರವಲ್ಲದೇ ಇತರೆಡೆ ಕೊರೋನಾ ವೈರಸ್ ನಿಂದ 3400 ಜನರು ಮೃತಪಟ್ಟಿದ್ದು,101, 000 ಜನರಲ್ಲಿ ಸೋಂಕು ಪತ್ತೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


