ವಿದೇಶ

ಕಠಿಣ ಕ್ರಮ ಕೈಗೊಂಡಲ್ಲಿ ಕೊರೋನಾ ವೈರಸ್ ಜೂನ್ ಒಳಗೆ ಅಂತ್ಯ; ಚೀನಾ

ವಿಶ್ವಾದ್ಯಂತ ತೀವ್ರವಾಗಿ ಹರಡುತ್ತಿರುವ ಕೊರೋನಾ ವೈರಸ್ ತಡೆಯಲು ಎಲ್ಲಾ ದೇಶಗಳು ಪರಿಣಾಮಕಾರಿ ಕ್ರಮಗಳನ್ನು ಕೈಗೊಂಡಲ್ಲಿ ಜೂನ್ ಅಂತ್ಯದೊಳಗೆ ರದನ್ನು ಸಂಪೂರ್ಣವಾಗಿ ತಡೆಯಬಹುದು ಎಂದು ಚೀನಾದ ತಜ್ಞರ ವೈದ್ಯರು ಅಭಿಪ್ರಾಯಪಟ್ಟಿದ್ದಾರೆ.

ಕಠಿಣ ಕ್ರಮ ಕೈಗೊಂಡಲ್ಲಿ ಕೊರೋನಾ ವೈರಸ್ ಜೂನ್ ಒಳಗೆ ಅಂತ್ಯ; ಚೀನಾ
ಕಠಿಣ ಕ್ರಮ ಕೈಗೊಂಡಲ್ಲಿ ಕೊರೋನಾ ವೈರಸ್ ಜೂನ್ ಒಳಗೆ ಅಂತ್ಯ; ಚೀನಾ
Published On :

ಬೀಜಿಂಗ್: ವಿಶ್ವಾದ್ಯಂತ ತೀವ್ರವಾಗಿ ಹರಡುತ್ತಿರುವ ಕೊರೋನಾ ವೈರಸ್ ತಡೆಯಲು ಎಲ್ಲಾ ದೇಶಗಳು ಪರಿಣಾಮಕಾರಿ ಕ್ರಮಗಳನ್ನು ಕೈಗೊಂಡಲ್ಲಿ ಜೂನ್ ಅಂತ್ಯದೊಳಗೆ ರದನ್ನು ಸಂಪೂರ್ಣವಾಗಿ ತಡೆಯಬಹುದು ಎಂದು ಚೀನಾದ ತಜ್ಞರ ವೈದ್ಯರು ಅಭಿಪ್ರಾಯಪಟ್ಟಿದ್ದಾರೆ. 

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿರುವ ತಜ್ಞ ವೈದ್ಯರಾದ ಜಾಂಗ್, ಅತಿ ಹೆಚ್ಚು ಸೋಂಕಿತ ಪ್ರಕರಣಗಳನ್ನು ಹೊಂದಿರುವ ಇಟಲಿ ಹಾಗೂ ದಕ್ಷಿಣ ಕೊರಿಯಾದಲ್ಲಿ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, ಅಲ್ಲಿನ ಪ್ರಕರಣಗಳು ಇಳಿಕೆಯಾಗಿವೆ. ಇದು ಹೀಗೆ ಮುಂದುವರಿದಲ್ಲಿ ಜೂನ್ ಅಂತ್ಯದೊಳಗೆ ಈ ಸಾಂಕ್ರಾಮಿಕ ಕಾಯಿಲೆ ಅಂತ್ಯಗೊಳ್ಳಲಿದೆ ಎಂದಿದ್ದಾರೆ. 

ಅತಿಯಾದ ಉಷ್ಣಾಂಶದ ವಾತಾವರಣದಲ್ಲಿ ವೈರಾಣು ಸಕ್ರಿಯವಾಗಿರುವುದಿಲ್ಲ. ಆದ್ದರಿಂದ ಇನ್ನು ಮುಂದೆ ಅದು ಕಡಿಮೆಯಾಗಲಿದೆ ಎಂದಿದ್ದಾರೆ. ಇಟಲಿ, ಸ್ಪೈನ್, ಅಮೆರಿಕ ಹಾಗೂ ಫ್ರಾನ್ಸ್ ನಲ್ಲಿ ಸೋಂಕಿನ ಹರಡುವಿಕೆಯ ಆತಂಕ ಹೆಚ್ಚಿದೆ. ಆದ್ದರಿಂದ ಅದರ ಬಗ್ಗೆ ಸರ್ಕಾರಗಳು ತೀವ್ರ ನಿಗಾ ವಹಿಸಬೇಕಿದೆ. ಚೀನಾದಲ್ಲಿ ಹುಬೇ ಮತ್ತು ವುಹಾನ್ ಹೊರತುಪಡಿಸಿ ಉಳಿದೆಡೆ ಸೋಂಕಿತರ ಸಾವಿನ ಸಂಖ್ಯೆ ಕಡಿಮೆಯಿದೆ. ಇದರರ್ಥ ದೇಶದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದರ್ಥ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.