ಮಹಾಮಾರಿ ಕೊರೋನಾ ವೈರಸ್'ಗೆ ವಿಶ್ವದಾದ್ಯಂತ 5000 ಮಂದಿ ಬಲಿ: ಇರಾನ್, ಇಟಲಿ, ಸ್ಪೇನ್'ನಲ್ಲಿ ಭಾರೀ ಪ್ರಮಾಣದಲ್ಲಿ ಹರಡುತ್ತಿರುವ ವೈರಸ್
4 ತಿಂಗಳ ಹಿಂದೆ ಚೀನಾದಲ್ಲಿ ಕಾಣಿಸಿಕೊಂಡು ಇದೀಗ ವಿಶ್ವದ 138 ರಾಷ್ಟ್ರಗಳಿಗೆ ಹಬ್ಬಿರಿಸುವ ಕೊರೋನಾ ವೈರಸ್'ಗೆ ಈ ವರೆಗೂ 5000 ಮಂದಿ ಬಲಿಯಾಗಿದ್ದಾರೆ. ಮೊದಲಿಗೆ ಸೋಂಕು ಕಾಣಿಸಿಕೊಂಡ ಚೀನದಲ್ಲಿ ಅಚ್ಚರಿಯ ರೀತಿಯಲ್ಲಿ ಸಮಸ್ಯೆಯನ್ನು ನಿವಾರಿಸಲಾಗುತ್ತಿದ್ದು, ಗುರುವಾರ ಕೇವಲ 8 ಹೊಸ ಪ್ರಕರಣ ಬೆಳಕಿಗೆ ಬಂದಿದ್ದರೆ, ಕೇವಲ 7 ಜನರು ಸಾವನ್ನಪ್ಪಿರುವುದಾಗಿ ವರದಿಗಳು ತಿಳಿಸಿ

ನವದೆಹಲಿ: 4 ತಿಂಗಳ ಹಿಂದೆ ಚೀನಾದಲ್ಲಿ ಕಾಣಿಸಿಕೊಂಡು ಇದೀಗ ವಿಶ್ವದ 138 ರಾಷ್ಟ್ರಗಳಿಗೆ ಹಬ್ಬಿರಿಸುವ ಕೊರೋನಾ ವೈರಸ್'ಗೆ ಈ ವರೆಗೂ 5000 ಮಂದಿ ಬಲಿಯಾಗಿದ್ದಾರೆ. ಮೊದಲಿಗೆ ಸೋಂಕು ಕಾಣಿಸಿಕೊಂಡ ಚೀನದಲ್ಲಿ ಅಚ್ಚರಿಯ ರೀತಿಯಲ್ಲಿ ಸಮಸ್ಯೆಯನ್ನು ನಿವಾರಿಸಲಾಗುತ್ತಿದ್ದು, ಗುರುವಾರ ಕೇವಲ 8 ಹೊಸ ಪ್ರಕರಣ ಬೆಳಕಿಗೆ ಬಂದಿದ್ದರೆ, ಕೇವಲ 7 ಜನರು ಸಾವನ್ನಪ್ಪಿರುವುದಾಗಿ ವರದಿಗಳು ತಿಳಿಸಿವೆ.
ಸೋಂಕಿತರ ಸಂಖ್ಯೆ ಕೂಡ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಈ ವರೆಗೂ ವಿಶ್ವದಾದ್ಯಂತ 139,000 ಮಂದಿಯಲ್ಲಿ ಸೋಂಕು ಪತ್ತೆಯಾಗಿರುವುದಾಗಿ ವರದಿಗಳು ತಿಳಿಸಿವೆ.
ಈ ನಡುವೆ ಭಾರತದಲ್ಲಿ ದಿನೇ ದಿನೇ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಶುಕ್ರವಾರ ಮತ್ತೆ 5 ಜನರಲ್ಲಿ ಸೋಂಕು ತಗುಲಿರುವುದು ಖಚಿತಪಟ್ಟಿದೆ. ಇದರೊಂದಿಗೆ ದೇಶದಲ್ಲಿ ಕೊರೋನಾ ವೈರಾಣು ಪೀಡಿತರ ಸಂಖ್ಯೆ 88ಕ್ಕೆ ಏರಿಕೆಯಾಗಿದೆ.
ದೇಶಾದ್ಯಂತ ಹರಡುತ್ತಿರುವ ಮಾರಕ ರೋಗದ ತಡೆಗೆ ರಾಜ್ಯಗಳು ಮತ್ತು ಸುಪ್ರೀಂ ಕೋರ್ಟ್ ಸಹ ಹಲವಾರು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುತ್ತಿವೆ. ಮಾಲ್ ಮತ್ತು ಸಿನೆಮಾ ಹಾಲ್ ಗಳನ್ನು ಮುಚ್ಚುವಂತೆ ಬಿಹಾರ ಮತ್ತು ಕರ್ನಾಟಕ ಸರ್ಕಾರ ಆದೇಶಿಸಿದೆ. ಅಲ್ಲದೆ ದೊಡ್ಡ ಸಾರ್ವಜನಿಕ ಸಭೆಗಳನ್ನು ನಿಷೇಧಿಸಿದೆ.
ಭಾರತದ ಕ್ರಿಕೆಟ್‌ನ ಸರ್ವೋಚ್ಚ ಸಂಸ್ಥೆಯಾದ ಬಿಸಿಸಿಐ ಭಾರತ - ದಕ್ಷಿಣ ಆಫ್ರಿಕಾ ಏಕದಿನ ಪಂದ್ಯಗಳನ್ನು ರದ್ದುಗೊಳಿಸಲು ನಿರ್ಧರಿಸಿತು. ಐಪಿಎಲ್ ಕೂಡ ಮುಂದೂಡಲ್ಪಟ್ಟಿತು
ಇನ್ನು ಕಳೆದ ಮೂರು ದಿನದ ಹಿಂದೆ ಮೃತಪಟ್ಟಿದ್ದ ಕಲಬುರಗಿಯ76 ವರ್ಷದ ವೃದ್ದ ಕೊರೋನಾ ಸೋಂಕಿನಿಂದಲೇ ಸಾವನ್ನಪ್ಪಿರುವುದಾಗಿ ನಿನ್ನೆ (ಗುರುವಾರ) ರಾಜ್ಯ ಆರೋಗ್ಯ ಇಲಾಖೆ ದೃಢಪಡಿಸಿತ್ತು. ಇದು ದೇಶದ ಮೊದಲ ಕೊರೋನಾವೈರಸ್ ನಿಂದ ಉಂಟಾದ ಸಾವಿನ ಪ್ರಕರಣವಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


