ದಕ್ಷಿಣ ಏಷ್ಯಾದಲ್ಲಿ ಸಾರ್ವಜನಿಕ ಆರೋಗ್ಯ ಬೆದರಿಕೆ ವಿರುದ್ಧ ಹೋರಾಡುವ ಸಂಸ್ಥೆ ಸ್ಥಾಪನೆ- ಶೇಖ್ ಹಸೀನಾ
ಕೊರೋನಾವೈರಸ್ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಸಾಮೂಹಿಕ ಪರಿಣತಿ ಮತ್ತು ಸಂಪನ್ಮೂಲಗಳೊಂದಿಗೆ ಸಾರ್ಕ್ ರಾಷ್ಟ್ರಗಳ ನಡುವೆ ಸಮನ್ವಯತೆ ರೂಪಿಸುವ ಅಗತ್ಯವನ್ನು ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಪ್ರತಿಪಾದಿಸಿದ್ದಾರೆ.

ಢಾಕಾ: ಕೊರೋನಾವೈರಸ್ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಸಾಮೂಹಿಕ ಪರಿಣತಿ ಮತ್ತು ಸಂಪನ್ಮೂಲಗಳೊಂದಿಗೆ ಸಾರ್ಕ್ ರಾಷ್ಟ್ರಗಳ ನಡುವೆ ಸಮನ್ವಯತೆ ರೂಪಿಸುವ ಅಗತ್ಯವನ್ನು ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಪ್ರತಿಪಾದಿಸಿದ್ದಾರೆ.
ದಕ್ಷಿಣ ಏಷ್ಯಾ ಪ್ರಾಂತ್ಯದಲ್ಲಿ ಯಾವುದೇ ಸಾರ್ವಜನಿಕ ಆರೋಗ್ಯ ಬೆದರಿಕೆಯನ್ನು ತಡೆಯಲು ಮತ್ತು ಇದರ ವಿರುದ್ಧ ಹೋರಾಡಲು ಸಂಸ್ಥೆಯೊಂದನ್ನು ಸ್ಥಾಪಿಸುವ ಪ್ರಸ್ತಾವವನ್ನು ಮುಂದಿಟ್ಟಿದ್ದಾರೆ
ಭವಿಷ್ಯದಲ್ಲಿ ದಕ್ಷಿಣ ಏಷ್ಯಾದಲ್ಲಿ ಯಾವುದೇ ಸಾರ್ವಜನಿಕ ಆರೋಗ್ಯ ಬೆದರಿಕೆಯನ್ನು ತಡೆಗಟ್ಟಲು ಮತ್ತು ಹೋರಾಡಲು ಒಂದು ಸಂಸ್ಥೆಯನ್ನು ಸ್ಥಾಪನೆ ತುಂಬಾ ಅಗತ್ಯವಾಗಿದೆ. ಸಾರ್ಕ್ ಸದಸ್ಯ ರಾಷ್ಟ್ರಗಳು ದಯೆಯಿಂದ ಒಪ್ಪಿದರೆ ಅಂತಹ ಸಂಸ್ಥೆಯನ್ನು ಆತಿಥ್ಯ ವಹಿಸಲು ಬಾಂಗ್ಲಾದೇಶಕ್ಕೆ ಸಂತೋಷವಾಗುತ್ತದೆ ಎಂದು ಶೇಖ್ ಹಸೀನಾ ಹೇಳಿದ್ದಾರೆ.
ಭಾನುವಾರ ಸಂಜೆ ಸಾರ್ಕ್ ರಾಷ್ಟ್ರಗಳ ನಾಯಕರ ನಡುವಿನ ವೀಡಿಯೊ ಸಂವಾದದಲ್ಲಿ ಅವರು ಪಾಲ್ಗೊಂಡು ಈ ವಿಷಯ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


