ಕೊರೋನಾ ವೈರಸ್ ಎಫೆಕ್ಟ್: ಹೆಚ್ಚುವರಿಯಾಗಿ 1 ಲಕ್ಷ ಜನರನ್ನು ಕೆಲಸಕ್ಕೆ ತೆಗೆದುಕೊಳ್ಳುತ್ತಿರುವ ಅಮೆಜಾನ್!
ಕೊರೋನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಜನರು ಹೊರಗಡೆ ಬರದೆ ಮನೆಯಲ್ಲೇ ಕೂರುತ್ತಿರುವುದರಿಂದ ಆನ್ ಲೈನ್ ಶಾಪಿಂಗ್ ಅಮೆಜಾನ್ ಹೆಚ್ಚುವರಿಯಾಗಿ 1 ಲಕ್ಷ ಜನರನ್ನು ಕೆಲಸಕ್ಕೆ ಸೇರಿಸಿಕೊಳ್ಳುತ್ತಿದೆ.

ನ್ಯೂಯಾರ್ಕ್: ಕೊರೋನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಜನರು ಹೊರಗಡೆ ಬರದೆ ಮನೆಯಲ್ಲೇ ಕೂರುತ್ತಿರುವುದರಿಂದ ಆನ್ ಲೈನ್ ಶಾಪಿಂಗ್ ಅಮೆಜಾನ್ ಹೆಚ್ಚುವರಿಯಾಗಿ 1 ಲಕ್ಷ ಜನರನ್ನು ಕೆಲಸಕ್ಕೆ ಸೇರಿಸಿಕೊಳ್ಳುತ್ತಿದೆ.
ಅಮೆರಿಕದಲ್ಲಿ ಸಾಕಷ್ಟು ಜನರು ಮನೆಯಿಂದಲೇ ಕೆಲಸ ಮಾಡುತ್ತಿದ್ದು ಆನ್ ಲೈನ್ ನಲ್ಲೇ ಎಲ್ಲವನ್ನೂ ಆರ್ಡರ್ ಮಾಡುತ್ತಿದ್ದಾರೆ. ಹೀಗಾಗಿ ಈ ವರ್ಷ ಹೆಚ್ಚುವರಿಯಾಗಿ ಕೆಲಸಗಾರರನ್ನು ಸೇರಿಸಿಕೊಳ್ಳಲಾಗುತ್ತಿದೆ ಎಂದು ಅಮೆಜಾನ್ ನ ಗೋದಾಮು ಮತ್ತು ವಿತರಣಾ ಜಾಲದ ಮೇಲ್ವಿಚಾರಕ ಡೇವ್ ಕ್ಲಾರ್ಕ್ ಹೇಳಿದ್ದಾರೆ.
ಆರ್ಡರ್ ಮಾಡುವವರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿರುವುದರಿಂದ ಸೂಕ್ತ ಸಮಯದಲ್ಲಿ ವಸ್ತುಗಳನ್ನು ಗ್ರಾಹಕರಿಗೆ ತಲುಪಿಸುವುದು ಕಷ್ಟವಾಗುತ್ತಿದೆ. ಇನ್ನು ಮನೆ ಶುಚಿಗೊಳಿಸುವ ಸಾಮಗ್ರಿಗಳಿಗೆ ಬೇಡಿಕೆ ಹೆಚ್ಚಾಗಿದ್ದು ಅವುಗಳನ್ನು ಸಂಗ್ರಹಿಸಲು ಕೆಲಸ ಮಾಡುತ್ತಿದ್ದೇವೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


