ಕೊರೋನಾ ವೈರಸ್ ಗೆ ಪಾಕಿಸ್ತಾನದಲ್ಲಿ ಮೊದಲ ಬಲಿ, ಸೋಂಕಿತರ ಸಂಖ್ಯೆ 193
ಜಗತ್ತನ್ನು ಬೆಚ್ಚಿಬೀಳಿಸುತ್ತಿರುವ ಮಹಾಮಾರಿ ಕೊರೋನಾ ವೈರಸ್(ಕೋವಿಡ್ -೧೯) ನೆರೆಯ ಪಾಕಿಸ್ತಾನಕ್ಕೂ ಭೀತಿ ಸೃಷ್ಟಿಸಿದ್ದು, ಪಾಕಿಸ್ತಾನದಲ್ಲಿ ಮೊದಲ “ಕೊರೋನಾ” ಸಾವು ಪ್ರಕರಣ ಮಂಗಳವಾರ ದಾಖಲಾಗಿದೆ.

ಇಸ್ಲಾಮಾಬಾದ್: ಜಗತ್ತನ್ನು ಬೆಚ್ಚಿಬೀಳಿಸುತ್ತಿರುವ ಮಹಾಮಾರಿ ಕೊರೋನಾ ವೈರಸ್(ಕೋವಿಡ್ -೧೯) ನೆರೆಯ ಪಾಕಿಸ್ತಾನಕ್ಕೂ ಭೀತಿ ಸೃಷ್ಟಿಸಿದ್ದು, ಪಾಕಿಸ್ತಾನದಲ್ಲಿ ಮೊದಲ “ಕೊರೋನಾ” ಸಾವು ಪ್ರಕರಣ ಮಂಗಳವಾರ ದಾಖಲಾಗಿದೆ.
ಕೋವಿಡ್ -೧೯ ಲಕ್ಷಣಗಳಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಮಂಗಳವಾರ ಮೃತಪಟ್ಟಿದ್ದಾರೆ ಎಂದು ಪಾಕಿಸ್ತಾನ ಸರ್ಕಾರ ಪ್ರಕಟಿಸಿದೆ.
ಹಫೀಜಾಬಾದ್ ಮೂಲದ ಈ ವ್ಯಕ್ತಿ ಇತ್ತೀಚೆಗೆ ಇರಾನ್‌ನಿಂದ ಸ್ವದೇಶಕ್ಕೆ ಮರಳಿದ್ದರು. ಕರೋನಾ ರೋಗ ಲಕ್ಷಣಗಳಿದ್ದ ಕಾರಣ, ಆತನನ್ನು ಇರಾನ್-ತಫ್ತಾನ್ ಗಡಿಯಲ್ಲಿ ಎರಡು ವಾರಗಳ ಕಾಲ ಪ್ರತ್ಯೇಕವಾಗಿರಿಸಿ ಚಿಕಿತ್ಸೆ ಕಲ್ಪಿಸಲಾಗಿತ್ತು. ಆದರೆ, ಆತನ ಆರೋಗ್ಯ ಹದಗೆಟ್ಟಿ ಕಾರಣ ಪಾಕಿಸ್ತಾನಕ್ಕೆ ಸ್ಥಳಾಂತರಿಸಲಾಗಿತ್ತು. ಲಾಹೋರ್‌ನ ಮಾಯೊ ಆಸ್ಪತ್ರೆಯ ಪ್ರತ್ಯೇಕ ವಾರ್ಡ್‌ನಲ್ಲಿ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದಾಗ ವ್ಯಕ್ತಿ ಮೃತಪಟ್ಟಿದ್ದಾರೆ.
ಈ ಮಧ್ಯೆ ಪಾಕಿಸ್ತಾನದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ 193ಕ್ಕೆ ಏರಿದೆ. ವಿಶ್ವಾದ್ಯಂತ ೭,೦೦೦ ಕ್ಕೂ ಹೆಚ್ಚು ಜನರು ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಭಾರತದಲ್ಲಿ ಮೂವರು ಮೃತಪಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


