ಕೊರೋನಾ ವೈರಸ್: ವಿಶ್ವದೆಲ್ಲೆಡೆ ಮಹಾಮಾರಿಗೆ 14,000 ಮಂದಿ ಬಲಿ, ಸೋಂಕಿತರ ಸಂಖ್ಯೆ 292,142 ಏರಿಕೆ
ಜಾಗತಿಕವಾಗಿ ಕೊರೋನಾ ವೈರಸ್'ಗೆ ಬಲಿಯಾದವರ ಸಂಖ್ಯೆ 14,000ಕ್ಕೆ ಏರಿಕೆಯಾಗಿದ್ದು, ಸೋಂಕಿತರ ಸಂಖ್ಯೆ 292,142 ಏರಿಕೆಯಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಮಾಸ್ಕೋ: ಜಾಗತಿಕವಾಗಿ ಕೊರೋನಾ ವೈರಸ್'ಗೆ ಬಲಿಯಾದವರ ಸಂಖ್ಯೆ 14,000ಕ್ಕೆ ಏರಿಕೆಯಾಗಿದ್ದು, ಸೋಂಕಿತರ ಸಂಖ್ಯೆ 292,142 ಏರಿಕೆಯಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.
ವೈರಸ್'ಗೆ ವಿಶ್ವದಾದ್ಯಂತ ಒಟ್ಟು 14,000 ಮಂದಿ ಸಾವನ್ನಪ್ಪಿದ್ದಾರೆಂದು ವಿಶ್ವ ಆರೋಗ್ಯ ಸಂಸ್ಥೆ ತನ್ನ ವರದಿಯಲ್ಲಿ ತಿಳಿಸಿದೆ.
ಆಫ್ರಿಕಾದಲ್ಲಿ ಸೋಂಕಿನ ಹೊಸ ಪ್ರಕರಣಗಳು ವರದಿಯಾಗಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಭಾನುವಾರ ವರದಿ ಮಾಡಿದೆ.
ವರದಿಯ ಪ್ರಕಾರ, ಕಳೆದ 24 ಗಂಟೆಗಳಲ್ಲಿ ಜಾಗತಿಕವಾಗಿ 26,069 ಹೊಸ ಕರೋನವೈರಸ್ ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ 1,600 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಅವರಲ್ಲಿ 1426 ಜನ ಯುರೋಪ್ ಖಂಡದವರೇ ಆಗಿದ್ದಾರೆಂದು ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


