ವಿಶ್ವದಾದ್ಯಂತ ಕೊರೋನಾ ವೈರಸ್ ರುದ್ರತಾಂಡವ: 20,000 ಬಲಿ, ಸೋಂಕಿತರ ಸಂಖ್ಯೆ 471,035ಕ್ಕೆ ಏರಿಕೆ
ವಿಶ್ವದಾದ್ಯಂತ ಕೊರೋನಾ ವೈರಸ್ ರುದ್ರತಾಂಡವವಾಡುತ್ತಿದ್ದು, ವೈರಸ್ ಪರಿಣಾಮ ಈವರೆಗೂ ವಿಶ್ವದಾದ್ಯಂತ 20,000 ಮಂದಿ ಬಲಿಯಾಗಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

ಪ್ಯಾರಿಸ್: ವಿಶ್ವದಾದ್ಯಂತ ಕೊರೋನಾ ವೈರಸ್ ರುದ್ರತಾಂಡವವಾಡುತ್ತಿದ್ದು, ವೈರಸ್ ಪರಿಣಾಮ ಈವರೆಗೂ ವಿಶ್ವದಾದ್ಯಂತ 20,000 ಮಂದಿ ಬಲಿಯಾಗಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.
ವಿಶ್ವದ ಒಟ್ಟು 182 ದೇಶಗಳಲ್ಲಿ ವೈರಸ್'ಗೆ 20,000 ಮಂದಿ ಬಲಿಯಾಗಿದ್ದು, 471,035ಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ವರದಿಗಳು ತಿಳಿಸಿವೆ.
ಭಾರತದಲ್ಲೂ ಸಂಪೂರ್ಣ ಲಾಕ್'ಡೌನ್ ಘೋಷಣೆ ಮಾಡುವುದರೊಂದಿಗೆ ಇಡೀ ವಿಶ್ವವೇ ಮೂರನೇ ಒಂದರಷ್ಟು ಅಥವಾ 260 ಕೋಟಿ ಜನರು ಇದೀಗ ಗೃಹ ಬಂಧನಕ್ಕೆ ಒಳಗಾಗಿದ್ದಾರೆ. ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಬ್ರಿಟನ್, ಫ್ರಾನ್ಸ್, ಇಟಲಿ, ಸ್ಪೇನ್ ಸೇರಿದಂತೆ 42 ದೇಶಗಳು ಲಾಕ್ ಡೌನ್ ಘೋಷಣೆ ಮಾಡಿದ್ದು, ತಮ್ಮ ಗಡಿಗಳನ್ನು ಬಂದ್ ಮಾಡಿವೆ.
ಲಾಕ್ ಡೌನ್ ಘೋಷಿಸಿದ ದೇಶಗಳ ಸಾಲಿಗೆ ಈಗ ಭಾರತ ಮತ್ತು ನ್ಯೂಜಿಲೆಡ್ ದೇಶಗಳು ಹೊಸದಾಗಿ ಸೇರ್ಪಡೆಯಾಗಿವೆ. ಈ ದೇಶಗಳಲ್ಲಿ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. 18.9 ಕೋಟಿ ಜನರು ಇರುವ 15 ದೇಶಗಳಲ್ಲಿ ಕರ್ಫೂಯ ಘೋಷಣೆ ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


