‘ನಾವು ಆರ್ಥಿಕ ಹಿಂಜರಿತಕ್ಕೆ ಕಾಲಿಟ್ಟಿದ್ದೇವೆ, 2009ಕ್ಕಿಂತಲೂ ಇದು ಕೆಟ್ಟ ಸ್ಥಿತಿಯಾಗಿರಲಿದೆ'
ನಾವು ಆರ್ಥಿಕ ಹಿಂಜರಿತಕ್ಕೆ ಕಾಲಿಟ್ಟಿದ್ದೇವೆ. 2009ರಲ್ಲಿ ಇದ್ದಂತಹ ಸ್ಥಿತಿಗಿಂತಲೂ ಇದು ಕೆಟ್ಟದಾಗಿರಲಿದೆ’ ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿಯ (ಐಎಂಎಫ್) ಮುಖ್ಯಸ್ಥೆ ಕ್ರಿಸ್ಟಲಿನಾ ಜಾರ್ಜಿಯಾ ಅವರು ಎಚ್ಚರಿಕೆ ನೀಡಿದ್ದಾರೆ.

ವಾಷಿಂಗ್ಟನ್: ‘ನಾವು ಆರ್ಥಿಕ ಹಿಂಜರಿತಕ್ಕೆ ಕಾಲಿಟ್ಟಿದ್ದೇವೆ. 2009ರಲ್ಲಿ ಇದ್ದಂತಹ ಸ್ಥಿತಿಗಿಂತಲೂ ಇದು ಕೆಟ್ಟದಾಗಿರಲಿದೆ’ ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿಯ (ಐಎಂಎಫ್) ಮುಖ್ಯಸ್ಥೆ ಕ್ರಿಸ್ಟಲಿನಾ ಜಾರ್ಜಿಯಾ ಅವರು ಎಚ್ಚರಿಕೆ ನೀಡಿದ್ದಾರೆ.
‘ಕೊರೊನಾ ವೈರಸ್ ಸೋಂಕು ಜಾಗತಿಕ ಆರ್ಥಿಕತೆಯ ಮೇಲೆ ಪ್ರತಿಕೂಲ ಪರಿಣಾಮ ಬೀರಿದ್ದು, ಪ್ರವರ್ಧಮಾನಕ್ಕೆ ಬರುತ್ತಿರುವ ದೇಶಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಹಣಕಾಸಿನ ನೆರವು ಬೇಕಾಗಲಿದೆ’ ಎಂದು ಅಭಿಪ್ರಾಯಪಟ್ಟಿದ್ದಾರೆ.‘ಆರ್ಥಿಕ ಚಟುವಟಿಕೆಗಳು ದಿಢೀರನೆ ಸ್ಥಗಿತಗೊಂಡಿವೆ. ಇದರಿಂದಾಗಿ ಪ್ರವರ್ಧಮಾನಕ್ಕೆ ಬರುತ್ತಿರುವ ದೇಶಗಳಿಗೆ ₹185 ಲಕ್ಷ ಕೋಟಿಗಳಷ್ಟು ಹಣಕಾಸಿನ ನೆರವು ನೀಡಬೇಕಾಗಿದೆ. ಇದು ಕನಿಷ್ಠ ಮಟ್ಟದ ಅಂದಾಜಾಗಿದೆ ಎಂದು ಹೇಳಿದ್ದಾರೆ.
ಪ್ರವರ್ಧಮನಾಕ್ಕೆ ಬರುತ್ತಿರುವ ದೇಶಗಳು ಇತ್ತೀಚಿನ ವಾರಗಳಲ್ಲಿ ₹6.145 ಲಕ್ಷ ಕೋಟಿಗೂ ಅಧಿಕ ನಷ್ಟ ಅನುಭವಿಸಿವೆ. ಈ ನಷ್ಟ ತುಂಬಿಕೊಳ್ಳಲು ದೇಶಿ ವರಮಾನದ ಕೊರತೆಯೂ ಎದುರಾಗಿದೆ. ಈಗಾಗಲೇ ಕೆಲವು ದೇಶಗಳು ಭಾರಿ ಪ್ರಮಾಣದ ಸಾಲದ ಹೊರೆಯಲ್ಲಿ ಸಿಲುಕಿವೆ. ‘ಕಡಿಮೆ ಆದಾಯ ಇರುವ 80ಕ್ಕೂ ಅಧಿಕ ದೇಶಗಳಲ್ಲಿ ಬಹುತೇಕ ದೇಶಗಳು ಐಎಂಎಫ್‌ನಿಂದ ತುರ್ತು ನಿಧಿಗಾಗಿ ಬೇಡಿಕೆ ಸಲ್ಲಿಸಿವೆ’ ಎಂದು ತಿಳಿಸಿದ್ದಾರೆ.
ವಾಷಿಂಗ್ಟನ್ ಮೂಲದ ಹಣಕಾಸು ಸಮಿತಿಯೊಂದಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಮಾತುಕತೆ ನಡೆಸಿದ ಅವರು, ಈಗಿರುವ ₹ 3.70 ಲಕ್ಷ ಕೋಟಿ ತುರ್ತು ನಿಧಿ ಮೊತ್ತವನ್ನು ಹೆಚ್ಚಿಸುವಂತೆ ಮನವಿ ಮಾಡಿದ್ದಾರೆ. ಅಮೆರಿಕ ಘೋಷಿಸಿರುವ ಪ್ಯಾಕೆಜ್ ಬಗ್ಗೆಯೂ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


