ಚೀನಾ: ಕೊರೋನಾ ಪೀಡಿತರು ಗುಣವಾಗುತ್ತಿದ್ದಾರೆ ಎಂದುಕೊಳ್ಳುತ್ತಿರುವಾಗಲೇ ಬಯಲಾಯ್ತು ಹೊಸ ಅಘಾತಕಾರಿ ಅಂಶ!
ಕೊರೋನಾ ವೈರಾಣು ಸೋಂಕಿತರು ಗುಣಮುಖರಾಗುತ್ತಿರುವ ಪ್ರಕರಣಗಳು ಈ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಭರವಸೆ ಮೂಡಿಸುತ್ತಿವೆ. ಆದರೆ ಚೀನಾದಲ್ಲಿ ಕೊರೋನಾಗೆ ಸಂಬಂಧಪಟ್ಟಂತೆ ಮತ್ತೊಂದು ಅಘಾತಕಾರಿ ಸುದ್ದಿ ಬಹಿರಂಗವಾಗಿದೆ.

ಬೀಜಿಂಗ್: ಕೊರೋನಾ ವೈರಾಣು ಸೋಂಕಿತರು ಗುಣಮುಖರಾಗುತ್ತಿರುವ ಪ್ರಕರಣಗಳು ಈ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಭರವಸೆ ಮೂಡಿಸುತ್ತಿವೆ. ಆದರೆ ಚೀನಾದಲ್ಲಿ ಕೊರೋನಾಗೆ ಸಂಬಂಧಪಟ್ಟಂತೆ ಮತ್ತೊಂದು ಅಘಾತಕಾರಿ ಸುದ್ದಿ ಬಹಿರಂಗವಾಗಿದೆ.
ಕೊರೋನಾದಿಂದ ಗುಣಮುಖರಾದವರ ಮಲ ಹಾಗೂ ಉಗುಳಿನಲ್ಲಿ ಜೀವಂತ ಕೊರೋನಾ ವೈರಾಣುಗಳನ್ನು ಚೀನಾ ವೈದ್ಯರು ಪತ್ತೆ ಮಾಡಿದ್ದಾರೆ.
ಚೀನಾದ ಜರ್ನಲ್ ಒಂದರಲ್ಲಿ ಈ ಕುರಿತು ವರದಿ ಪ್ರಕಟವಾಗಿದ್ದು, ಕೊರೋನಾದಿಂದ ಗುಣಮುಖರಾಗುತ್ತಿರುವ ರೋಗಿಗಳ ಗಂಟಲು ದ್ರವ ಪರೀಕ್ಷೆಯಲ್ಲಿ ನೆಗೆಟೀವ್ ಬಂದರೂ ಸಹ ಮಲ, ಉಗುಳಿನಲ್ಲಿ ಕೊರೋನಾ ವೈರಾಣು ಇರುವುದು ಪತ್ತೆಯಾಗಿದೆ.
ಈ ವರೆಗೂ ಕೊರೋನಾ ಪೀಡಿತರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲು ಗಂಟಲು ದ್ರವವನ್ನು ಪರೀಕ್ಷಿಸಲಾಗುತ್ತಿತ್ತು. ಈ ಪರೀಕ್ಷೆಯಲ್ಲಿ ನೆಗೆಟೀವ್ ಬಂದವರನ್ನು ಮಾತ್ರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುತ್ತಿದೆ. ಆದರೆ ಬೀಜಿಂಗ್ ನ ಡಿಟಾನ್ ಆಸ್ಪತ್ರೆ, ಕ್ಯಾಪಿಟಲ್ ವೈದ್ಯಕೀತ ವಿಶ್ವವಿದ್ಯಾಲಯದಲ್ಲಿ ಕಂಡುಬಂದಿರುವ ಹೊಸ ಅಂಶಗಳಾ ಪ್ರಕಾರ ಗಂಟಲು ದ್ರವ ಪರೀಕ್ಷೆಯಲ್ಲಿ ನೆಗೆಟೀವ್ ಬಂದರೂ ಆ ವ್ಯಕ್ತಿಯ ಉಗು, ಮಲಗಳಲ್ಲಿ ಜೀವಂತ ಕೊರೋನಾ ವೈರಸ್ ಪತ್ತೆಯಾಗಿರುವುದು ಈಗ ಚೀನಿಯರ ಆತಂಕಕ್ಕೆ ಕಾರಣವಾಗಿದ್ದು ಈ ಬಗ್ಗೆ ಇನ್ನಷ್ಟು ಅಧ್ಯಯನ ನಡೆಯಬೇಕೆನ್ನುತ್ತಿದ್ದಾರೆ ಸಂಶೋಧಕರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


