ಊಹಾಪೋಹಾಗಳಿಗೆ ತೆರೆ: ಸಾರ್ವಜನಿಕ ಕಾರ್ಯಕ್ರಮದಲ್ಲಿ ಕಿಮ್ ಜಾಂಗ್ ಉನ್ ಪ್ರತ್ಯಕ್ಷ!
ಕಳೆದ 20 ದಿನಗಳಿಂದ ಸಾರ್ವಜನಿಕವಾಗಿ ಕಾಣಿಸಿಕೊಳ್ಳದೇ ಹಲವು ಊಹಾ ಪೋಹಗಳಿಗೆ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್ ಉನ್ ತೆರೆ ಎಳೆದಿದ್ದಾರೆ.

ಪ್ಯೊಂಗ್ಯಾಂಗ್: ಕಳೆದ 20 ದಿನಗಳಿಂದ ಸಾರ್ವಜನಿಕವಾಗಿ ಕಾಣಿಸಿಕೊಳ್ಳದೇ ಹಲವು ಊಹಾ ಪೋಹಗಳಿಗೆ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್ ಉನ್ ತೆರೆ ಎಳೆದಿದ್ದಾರೆ.
ಶುಕ್ರವಾರ ನಡೆದ ಕೆಮಿಕಲ್ ಕಾರ್ಖಾನೆ ಉದ್ಘಾಟನೆಯಲ್ಲಿ ಕಿಮ್ ಜಾಂಗ್ ಭಾಗವಹಿಸಿದ್ದರು ಎಂದು ಕೆಸಿಎನ್ ಎ ವರದಿ ಮಾಡಿದೆ.
ತಮ್ಮ ಸಹೋದರಿ ಕಿಮ್ ಯೋ ಜಾಂಗ್ ಜೊತೆ ಸುಂಜಾನ್ ಫೋಸ್ಪೇಟಿಕ್ ಫರ್ಟಿಲೈಸರ್ ಎಂಬ ಕಾರ್ಖಾನೆಯ ರಿಬ್ಬನ್ ಕಟ್ಟಿಂಗ್ ಕಾರ್ಯಕ್ರಮದಲ್ಲಿ ಕಿಮ್ ಪಾಲ್ಗೋಂಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ವರದಿಯಲ್ಲಿ ಹೇಳಿದೆ.
ಕಾರ್ಮಿಕರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಈ ಕಾರ್ಯಕ್ರಮಕ್ಕೆ ಕಿಮ್ ಜಾಂಗ್ ಆಗಮಿಸಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದರು. ತಮ್ಮ ಸರ್ವೋಚ್ಚ ನಾಯಕನನ್ನು ನೋಡಿ ಅಲ್ಲಿ ಭಾಗವಹಿಸಿದವರೆಲ್ಲಾ ಹುರ್ರೇ ಎಂದು ಘೋಷಣೆ ಕೂಗಿದರು ಎಂದು ಕೆಸಿಎನ್ ಎ ತಿಳಿಸಿದೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


