ವಿಶ್ವದೆಲ್ಲೆಡೆ ಕೊರೋನಾ ಆರ್ಭಟ: ಸೋಂಕಿತರ ಸಂಖ್ಯೆ 35 ಲಕ್ಷಕ್ಕೆ ಏರಿಕೆ, 2.46 ಲಕ್ಷ ಮಂದಿ ಸಾವು
ವಿಶ್ವದೆಲ್ಲೆಡೆ ಕೊರೋನಾ ರಣಕೇಕೆ ಹಾಕುತ್ತಿದ್ದು, 35, 00,000 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಅಲ್ಲದೆ, ಮಹಾಮಾರಿ ವೈರಸ್'ಗೆ 2,46,000 ಮಂದಿ ಬಲಿಯಾಗಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

ಲಂಡನ್: ವಿಶ್ವದೆಲ್ಲೆಡೆ ಕೊರೋನಾ ರಣಕೇಕೆ ಹಾಕುತ್ತಿದ್ದು, 35, 00,000 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಅಲ್ಲದೆ, ಮಹಾಮಾರಿ ವೈರಸ್'ಗೆ 2,46,000 ಮಂದಿ ಬಲಿಯಾಗಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.
ವಿಶ್ವದ ಒಟ್ಟು 212 ರಾಷ್ಟ್ರಗಳಲ್ಲಿ ಮಹಾಮಾರಿ ವೈರಸ್ ತಟ್ಟಿದ್ದು, ಈ ವರೆಗೂ 35,33,550 ಮಂದಿ ಸೋಂಕಿಗೊಳಗಾಗಿದ್ದಾರೆ. ಅಲ್ಲದೆ, 2,46,900 ಮಂದಿ ಬಲಿಯಾಗಿದ್ದಾರೆ. ಈ ನಡುವೆ ಗುಣಮುಖರಾಗುತ್ತಿರುವ ಸಂಖ್ಯೆ ಕೂಡ ಏರಿಕೆಯಾಗುತ್ತಿದ್ದು, ಸುಮಾರು 11,44,000 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಅಮೆರಿಕಾ ಒಂದರಲ್ಲೇ ಕಳೆದ 24 ಗಂಟೆಗಳಲ್ಲಿ 10,550 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಅಲ್ಲದೆ, ಒಟ್ಟು ಸೋಂಕಿತರ ಸಂಖ್ಯೆ ಆ ರಾಷ್ಟ್ರದಲ್ಲಿ 11,71,350ಕ್ಕೆ ಏರಿಕೆಯಾಗಿದೆ.
ಸ್ಪೇನ್ ನಲ್ಲಿ ಒಂದೇ ದಿನದಲ್ಲಿ 1,533 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಒಟ್ಟಾರೆಯಾಗಿ ಸೋಂಕಿತರ ಸಂಖ್ಯೆ 2,47,100ಕ್ಕೆ ಏರಿಕೆಯಾಗಿದೆ. ಇನ್ನು ಇಟಲಿಯಲ್ಲಿ 2,10,500, ಬ್ರಿಟನ್ ನಲ್ಲಿ 1,86,500, ಫ್ರಾನ್ಸ್ ನಲ್ಲಿ 1,68,300, ಜರ್ಮನಿಯಲ್ಲಿ 1,65,100 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


