ಕರ್ನಾಟಕ: 50 ದಿನಗಳ ನಂತರ ಹುಬ್ಬಳ್ಳಿ ಟೆಕ್ಕಿಯ ಶವ ಲಂಡನ್ ನಿಂದ ಕುಟುಂಬಕ್ಕೆ ಹಸ್ತಾಂತರದ ನಿರೀಕ್ಷೆ
ಲಂಡನ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಹುಬ್ಬಳ್ಳಿ ಮೂಲದ ಟೆಕ್ಕಿಯ ಶವ 50 ದಿನಗಳ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರವಾಗುವ ನಿರೀಕ್ಷೆ ಇದೆ.

ಹುಬ್ಬಳ್ಳಿ: ಲಂಡನ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಹುಬ್ಬಳ್ಳಿ ಮೂಲದ ಟೆಕ್ಕಿಯ ಶವ 50 ದಿನಗಳ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರವಾಗುವ ನಿರೀಕ್ಷೆ ಇದೆ.
ಕೇಂದ್ರ ಸರ್ಕಾರ ವಿದೇಶಗಳಲ್ಲಿ ಸಿಲುಕಿಕೊಂಡಿರುವ ಭಾರತೀಯರನ್ನು ವಾಪಸ್ ಕರೆತರಲು ಕಾರ್ಯಾಚರಣೆ ನಡೆಸಲು ತೀರ್ಮಾನಿಸಿರುವುದು ಮೃತ ಟೆಕ್ಕಿಯ ಕುಟುಂಬ ಸದಸ್ಯರಿಗೆ ಆಶಾಕಿರಣವಾಗಿದ್ದು, 50 ದಿನಗಳ ಬಳಿಕವಾದರೂ ಮಗನ ಪಾರ್ಥಿವ ಶರೀರದ ದರ್ಶನಕ್ಕೆ ಪೋಷಕರು ಎದುರುನೋಡುತ್ತಿದ್ದಾರೆ.
ಮೃತ ಟೆಕ್ಕಿಯ ಪತ್ನಿ, ಮಗು, ಪತ್ನಿಯ ಸಹೋದರ ಲಂಡನ್ ನಲ್ಲಿಯೇ ಇದ್ದಾರೆ. ಇತ್ತ ಪೋಷಕರು ಹುಬ್ಬಳ್ಳಿಯಲ್ಲಿ ಪುತ್ರನ ಪಾರ್ಥಿವ ಶರೀರಕ್ಕಾಗಿ ಎದುರು ನೋಡುತ್ತಿದ್ದಾರೆ. ಟೆಕ್ಕಿ ಮಾ.13, 2020 ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು ಆತ್ಮಹತ್ಯೆ ಮಾಡಿಕೊಂಡ ಟೆಕ್ಕಿಯ ಅಂತ್ಯ ಸಂಸ್ಕಾರ ಹುಬ್ಬಳ್ಳಿಯಲ್ಲೇ ನಡೆಸಲು ಕುಟುಂಬ ಸದಸ್ಯರು ತೀರ್ಮಾನಿಸಿದ್ದಾರೆ. ಬ್ರಿಟನ್ ನಲ್ಲಿ ಲಾಕ್ ಡೌನ್ ಹಿನ್ನೆಲೆಯಲ್ಲಿ ಟೆಕ್ಕಿಯ ಪಾರ್ಥಿವ ಶರೀರ ಭಾರತಕ್ಕೆ ತರಲು ಸಾಧ್ಯವಾಗಿರಲಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


