ಹೆರಿಗೆ ಆಸ್ಪತ್ರೆ ಬಳಿ ಆತ್ಮಾಹುತಿ ಬಾಂಬ್ ಸ್ಫೋಟ, 15 ಮಂದಿ ಸಾವು, ಇದು ನಮ್ಮ ಕೃತ್ಯವಲ್ಲ ಎಂದ ತಾಲಿಬಾನ್!
ಆಫ್ಘಾನಿಸ್ತಾನದ ಹೆರಿಗೆ ಆಸ್ಪತ್ರೆಯೊಂದರಲ್ಲಿ ಆತ್ಮಾಹುತಿ ಬಾಂಬ್ ಸ್ಫೋಟದಲ್ಲಿ ನವಜಾತ ಶಿಶುಗಳು ಮತ್ತು ದಾದಿಯರು ಸೇರಿದಂತೆ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ.

ಕಾಬೂಲ್: ಆಫ್ಘಾನಿಸ್ತಾನದ ಹೆರಿಗೆ ಆಸ್ಪತ್ರೆಯೊಂದರಲ್ಲಿ ಆತ್ಮಾಹುತಿ ಬಾಂಬ್ ಸ್ಫೋಟದಲ್ಲಿ ನವಜಾತ ಶಿಶುಗಳು ಮತ್ತು ದಾದಿಯರು ಸೇರಿದಂತೆ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ.
ದೇಶಾದ್ಯಂತ ಉಗ್ರಗಾಮಿ ಕೃತ್ಯಗಳು ಏರಿಕೆ, ಕೊರೋನಾ ಸೋಂಕು ಉಲ್ಬಣ ಮತ್ತು ವಿದೇಶಿ ಮಿಲಿಟರಿ ಬೆಂಬಲವನ್ನು ಕಡಿಮೆ ಮಾಡುವುದು ಸೇರಿದಂತೆ ಅಸಂಖ್ಯಾತ ಬಿಕ್ಕಟ್ಟುಗಳನ್ನು ಎದುರಿಸುತ್ತಿರುವಾಗ ಆಫ್ಘಾನಿಸ್ತಾನದಲ್ಲಿ ಹಿಂಸಾಚಾರ ಸಂಭವಿಸಿದೆ.
ಮುಂಜಾನೆ ನಡೆದ ದಾಳಿಯ ನಂತರ ಮೂವರು ಬಂದೂಕುಧಾರಿಗಳು ಕಾಬೂಲ್‌ನ ಬಾರ್ಚಿ ರಾಷ್ಟ್ರೀಯ ಆಸ್ಪತ್ರೆಗೆ ಮುತ್ತಿಗೆ ಹಾಕಿದ್ದರು. ಭದ್ರತಾ ಪಡೆಗಳು ತೆರವು ಕಾರ್ಯಾಚರಣೆಯಲ್ಲಿ ಅವರನ್ನು ಹತ್ಯೆಗೈಯಲ್ಲಾಗಿದೆ ಎಂದು ಆಂತರಿಕ ಸಚಿವಾಲಯ ತಿಳಿಸಿದೆ.
ಇದೇ ವೇಳೆ ಸುಮಾರು 15 ಜನರು ಗಾಯಗೊಂಡಿದ್ದಾರೆ. ಇನ್ನು ಮೂವರು ವಿದೇಶಿ ಪ್ರಜೆಗಳು ಸೇರಿದಂತೆ 100ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ ಎಂದರು.
ಇನ್ನು ಈ ದಾಳಿಯನ್ನು ನಾವು ಸಂಘಟಿಸಿಲ್ಲ ಎಂದು ತಾಲಿಬಾನ್ ಹೇಳಿಕೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


