ಸಿಹಿ ಸುದ್ದಿ: ಕೊರೊನಾ ಲಸಿಕೆಯನ್ನು ಸಾರ್ವಜನಿಕರಿಗೆ ಉಚಿತವಾಗಿ ನೀಡಲು ಚಿಂತನೆ: ಡೊನಾಲ್ಡ್ ಟ್ರಂಪ್
ಕೊರೋನಾ ವೈರಸ್ ಸೋಂಕು ತಗುಲದಂತೆ ತೆಗೆದುಕೊಳ್ಳಬಹುದಾದ ಲಸಿಕೆಯ್ನು ಸಾರ್ವಜನಿಕರಿಗೆ ಉಚಿತವಾಗಿ ನೀಡಲು ಚಿಂತನೆ ನಡೆದಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ವಾಷಿಂಗ್ಟನ್: ಕೊರೋನಾ ವೈರಸ್ ಸೋಂಕು ತಗುಲದಂತೆ ತೆಗೆದುಕೊಳ್ಳಬಹುದಾದ ಲಸಿಕೆಯ್ನು ಸಾರ್ವಜನಿಕರಿಗೆ ಉಚಿತವಾಗಿ ನೀಡಲು ಚಿಂತನೆ ನಡೆದಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಇದಕ್ಕೂ ಮುನ್ನ ಶುಕ್ರವಾರ ಬೆಳಗ್ಗೆ ಅವರು ಈ ವರ್ಷಾಂತ್ಯದ ವೇಳೆಗೆ ಕೋವಿಡ್ 19ರ ಲಸಿಕೆ ಸಿಗಲಿದೆ ಎಂದು ಹೇಳಿದ್ದಾರೆ. ಆಪರೇಷನ್ ವಾರ್ಡ್ ಸ್ಪೀಡ್ ಎಂಬ ಉಪಕ್ರಮವನ್ನು ಆರಂಭಿಸಿ 2021ರ ಜನವರಿ ವೇಳೆಗೆ ಲಸಿಕೆ ಸಿದ್ಧಪಡಿಸುವ ಕಾರ್ಯ ನಡೆಯಲಿದೆ ಎಂದು ಟ್ರಂಪ್ ಹೇಳಿದ್ದರು.
ಶುಕ್ರವಾರ ಸಂಜೆ ವೇಳೆಗೆ ಅಮೆರಿಕದಲ್ಲಿ 15 ಲಕ್ಷಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿದ್ದು 88,550 ಜನರು ಮೃತಪಟ್ಟಿದ್ದಾರೆ ಎಂದು ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ವರದಿ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


