ಬರಾಕ್ ಒಬಾಮಾ ಒಬ್ಬ ಅಸಮರ್ಥ ಅಧ್ಯಕ್ಷ: ಡೊನಾಲ್ಡ್ ಟ್ರಂಪ್ ಟೀಕೆ
ಕೊರೊನಾ ವೈರಸ್ ಸಾಂಕ್ರಾಮಿಕ ರೋಗವನ್ನು ನಿಭಾಯಿಸುವಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಫಲವಾಗಿದ್ದಾರೆ ಎಂದು ಮಾಜಿ ಅಧ್ಯಕ್ಷ ಬರಾಕ್ ಒಬಾಮ ಮಾಡಿದ್ದ ಟೀಕೆಗೆ ಟ್ರಂಪ್ ತಿರುಗೇಟು ನೀಡಿದ್ದಾರೆ.

ವಾಷಿಂಗ್ಟನ್: ಕೊರೊನಾ ವೈರಸ್ ಸಾಂಕ್ರಾಮಿಕ ರೋಗವನ್ನು ನಿಭಾಯಿಸುವಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಫಲವಾಗಿದ್ದಾರೆ ಎಂದು ಮಾಜಿ ಅಧ್ಯಕ್ಷ ಬರಾಕ್ ಒಬಾಮ ಮಾಡಿದ್ದ ಟೀಕೆಗೆ ಟ್ರಂಪ್ ತಿರುಗೇಟು ನೀಡಿದ್ದಾರೆ.
'ಬರಾಕ್ ಒಬಾಮ ಅಸಮರ್ಥ ಅಧ್ಯಕ್ಷರಾಗಿದ್ದರು. ತೀವ್ರ ಅಸಮರ್ಥ ನಾಯಕರಾಗಿದ್ದರು. ಅಷ್ಟೇ ನಾನು ಹೇಳಬಲ್ಲೆ' ಎಂದು ಶ್ವೇತ ಭವನದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಕೊರೊನಾ ವೈರಸ್ ಸಮರ್ಥವಾಗಿ ನಿಭಾಯಿಸಲು ವಿಫಲವಾಗಿರುವುದಕ್ಕೆ ಸಂಬಂಧಪಟ್ಟಂತೆ ಡೊನಾಲ್ಡ್ ಟ್ರಂಪ್ ಅವರನ್ನು ಬರಾಕ್ ಒಬಾಮ ಟೀಕೆ ಮಾಡಿದ್ದರು.ಬರಾಕ್ ಒಬಾಮ ತಮ್ಮ ಹೇಳಿಕೆಯಲ್ಲಿ ಜನರನ್ನು ಒಗ್ಗೂಡಿಸುವ ಪ್ರಮಾಣಿಕರ ನಾಯಕರನ್ನು ಹೊಂದಿರಬೇಕು ಎಂದು ಹೇಳಿದ್ದರು.
ಕೊರೊನಾ ವೈರಸ್ ಸಾಂಕ್ರಾಮಿಕ ರೋಗಕ್ಕೆ ಅಮೆರಿಕದಲ್ಲಿ ಅತಿ ಹೆಚ್ಚು ಸಾವು-ನೋವು ಸಂಭವಿಸಿದೆ. ಸೋಂಕಿತರ ಸಂಖ್ಯೆ 15 ಲಕ್ಷದ ಗಡಿ ಸಮೀಪದಲ್ಲಿದ್ದು, 89 ಸಾವಿರಕ್ಕೂ ಹೆಚ್ಚು ಮಂದಿ ಸಾವಿಗೆ ಶರಣಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


