ವಿದೇಶ

ವಿಶ್ವದಲ್ಲಿ ಕೊರೋನಾ ಆರ್ಭಟ: 58 ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ, 3.60 ಲಕ್ಷ ಮಂದಿ ಬಲಿ

ವಿಶ್ವದೆಲ್ಲೆಡೆ ಕೊರೋನಾ ವೈರಸ್ ತನ್ನ ಆರ್ಭಟವನ್ನು ಮುಂದುವರೆಸಿದ್ದು, ಈ ವರೆಗೂ 58 ಲಕ್ಷಕ್ಕೂ ಹೆಚ್ಚು ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಅಲ್ಲದೆ 3.8 ಲಕ್ಷ ಜನರು ಬಲಿಯಾಗಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

ವಿಶ್ವದಲ್ಲಿ ಕೊರೋನಾ ಆರ್ಭಟ: 58 ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ, 3.60 ಲಕ್ಷ ಮಂದಿ ಬಲಿ
ಸಂಗ್ರಹ ಚಿತ್ರ
Published On :

ಲಂಡನ್: ವಿಶ್ವದೆಲ್ಲೆಡೆ ಕೊರೋನಾ ವೈರಸ್ ತನ್ನ ಆರ್ಭಟವನ್ನು ಮುಂದುವರೆಸಿದ್ದು, ಈ ವರೆಗೂ 58 ಲಕ್ಷಕ್ಕೂ ಹೆಚ್ಚು ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಅಲ್ಲದೆ 3.8 ಲಕ್ಷ ಜನರು ಬಲಿಯಾಗಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. 

ವಿಶ್ವದೆಲ್ಲೆಡೆ ಒಟ್ಟಾರೆಯಾಗಿ 58,60,213 ಮಂದಿ ಸೋಂಕಿಗೊಳಗಾಗಿದ್ದು, 25,40,993ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಇನ್ನು ಮಹಾಮಾರಿ ವೈರಸ್'ಗೆ 3,60,049 ಮಂದಿ ಬಲಿಯಾಗಿದ್ದಾರೆ. 

ಇತರೆ ರಾಷ್ಟ್ರಗಳಿಗೆ ಹೋಲಿಕೆ ಮಾಡಿದರೆ ಅಮೆರಿಕಾದಲ್ಲಿಯೇ ಹೆಚ್ಚು ಸೋಂಕಿತರಿದ್ದು, ಒಟ್ಟು 17,21,753 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇನ್ನು ಬ್ರೆಜಿಲ್ 438,812, ರಷ್ಯಾ 379,051, ಸ್ಪೇನ್ 284,986, ಬ್ರಿಟನ್ 269,127, ಇಟಲಿ 231,732, ಫ್ರಾನ್ಸ್ 186,238, ಜರ್ಮನಿ 182,452 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.