ಅಧ್ಯಕ್ಷೀಯ ಚುನಾವಣೆ ಎಫೆಕ್ಟ್: ಅಮೆರಿಕದಲ್ಲಿ ಒಂದೇ ದಿನ 99 ಸಾವಿರಕ್ಕೂ ಅಧಿಕ ಕೊರೋನಾ ಸೋಂಕು ಪತ್ತೆ!
ಅಮೆರಿಕದಲ್ಲಿ ಅಧ್ಯಕ್ಷೀಯ ಚುನವಾಣಾ ರಣಕಣ ತಾರಕಕ್ಕೇರಿರುವಂತೆಯೇ ಇತ್ತ ಕೊರೋನಾ ವೈರಸ್ ಕೂಡ ತನ್ನ ಅಟ್ಟಹಾಸ ಮುಂದುವರೆಸಿದ್ದು, ಒಂದೇ ದಿನ 99 ಸಾವಿರಕ್ಕೂ ಅಧಿಕ ಹೊಸ ಸೋಂಕು ಪ್ರಕರಣಗಳು ವರದಿಯಾಗಿವೆ.

ವಾಷಿಂಗ್ಟನ್: ಅಮೆರಿಕದಲ್ಲಿ ಅಧ್ಯಕ್ಷೀಯ ಚುನವಾಣಾ ರಣಕಣ ತಾರಕಕ್ಕೇರಿರುವಂತೆಯೇ ಇತ್ತ ಕೊರೋನಾ ವೈರಸ್ ಕೂಡ ತನ್ನ ಅಟ್ಟಹಾಸ ಮುಂದುವರೆಸಿದ್ದು, ಒಂದೇ ದಿನ 99 ಸಾವಿರಕ್ಕೂ ಅಧಿಕ ಹೊಸ ಸೋಂಕು ಪ್ರಕರಣಗಳು ವರದಿಯಾಗಿವೆ.
ಕಳೆದ 24 ಗಂಟೆಗಳಲ್ಲಿ 99,000 ಕ್ಕೂ ಹೆಚ್ಚು ಕೊರೊನಾ ವೈರಸ್ ಪ್ರಕರಣಗಳು ದಾಖಲಾಗಿದ್ದು, ಇದು ಹೊಸ ದೈನಂದಿನ ದಾಖಲೆಯಾಗಿದೆ ಎಂದು ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ವರದಿ ಹೇಳಿದೆ. ಮಂಗಳವಾರ ರಾತ್ರಿ 8:30 ರಿಂದ ಬುಧವಾರ ನಡುವೆ 99,660 ಹೊಸ ಸೋಂಕುಗಳು ಮತ್ತು 1,112 ಸಾವುಗಳು ಸಂಭವಿಸಿವೆ ಎಂದು ವರದಿಯಲ್ಲಿ ಹೇಳಲಾಗಿದೆ. ಅಮೆರಿಕನ್ನರು ತಮ್ಮ ಅಧ್ಯಕ್ಷರನ್ನು ಆಯ್ಕೆ ಮಾಡಿದ ಮಾರನೆಯೇ ದಿನವೇ ಕೊರೋನಾ ದೈನಂದಿನ ಹೊಸ ಪ್ರಕರಣಗಳ ಸಂಖ್ಯೆ ದಾಖಲೆ ಮಟ್ಟದಲ್ಲಿ ಏರಿಕೆಯಾಗಿದೆ.
ಇನ್ನು ಅಮೆರಿಕದಲ್ಲಿ ಈ ವರೆಗೂ 9.4 ದಶಲಕ್ಷಕ್ಕೂ ಹೆಚ್ಚು ಜನರು ಸೋಂಕಿಗೆ ತುತ್ತಾಗಿದ್ದು, 2,33,000ಕ್ಕೂ ಅಧಿಕ ಸೋಂಕಿತರು ಸಾವನ್ನಪ್ಪಿದ್ದಾರೆ.
ಮಾರಕ ಕೊರೋನಾ ವೈರಸ್ ನಿಂದಾಗಿ ಭೀಕರ ಹೊಡೆತ ತಿಂದಿರುವ ದೇಶಗಳ ಪಟ್ಟಿಯಲ್ಲಿ ಅಮೆರಿಕ ಮೊದಲ ಸ್ಥಾನದಲ್ಲಿದ್ದು, ಜಗತ್ತಿನಲ್ಲೇ ಸೋಂಕಿಗೆ ತುತ್ತಾದವರ ಸಂಖ್ಯೆ ಅಮೆರಿಕದಲ್ಲಿ ಗರಿಷ್ಠವಾಗಿದೆ. ಸಾವಿನ ಸಂಖ್ಯೆಯಲ್ಲೂ ಕೂಡ ಅಮೆರಿಕ ಮೊದಲ ಸ್ಥಾನದಲ್ಲಿದೆ. ಇಷ್ಟು ಮಾತ್ರವಲ್ಲದೇ ಲಕ್ಷಾಂತರ ಉದ್ಯೋಗ ನಷ್ಚ ಅಮೆರಿಕದ ಬಲಿಷ್ಠ ಆರ್ಥಿಕತೆಯನ್ನೇ ಅಲುಗಾಡಿಸಿದ್ದು, ಟ್ರಂಪ್ ಸರ್ಕಾರ ಸಾಂಕ್ರಾಮಿಕವನ್ನು ನಿರ್ವಹಿಸಿದ ರೀತಿ ಅಮೆರಿಕನ್ನರ ಆಕ್ರೋಶಕ್ಕೂ ಕಾರಣವಾಗಿತ್ತು, ಇದು ಇದೀಗ ಹಾಲಿ ಅಧ್ಯಕ್ಷೀಯ ಚುನಾವಣೆಯಲ್ಲಿ ಗೋಚರವಾಗುತ್ತಿದ್ದು, ಟ್ರಂಪ್ ತಮ್ಮ ಪ್ರತಿಸ್ಪರ್ಧಿ ಜೋ ಬಿಡನ್ ವಿರುದ್ಧ ತೀವ್ರ ಪ್ರತಿಸ್ಪರ್ಧೆ ಎದುರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


