ಅಧ್ಯಕ್ಷ ಹಾದಿ ಬೈಡನ್ ಗೆ ಮತ್ತಷ್ಟು ಸುಗಮ: ಪೆನ್ಸಿಲ್ವೇನಿಯಾ ಮತ ಎಣಿಕೆ ಸ್ಥಗಿತಕ್ಕೆ ಸುಪ್ರೀಂ ಕೋರ್ಟ್ ನಕಾರ
ಅಮೆರಿಕ ಅಧ್ಯಕ್ಷೀಯ ಪದವಿಗೆ ಡೆಮಾಕ್ರಟ್ ಪಕ್ಷದ ಅಭ್ಯರ್ಥಿ ಜೊ ಬೈಡನ್ ಸಮೀಪದಲ್ಲಿದ್ದಾರೆ. ದೇಶದ ಪ್ರಮುಖ ರಾಜ್ಯಗಳಲ್ಲಿ ನಿನ್ನೆ ಮತ ಎಣಿಕೆಯಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗಿಂತ ಮುನ್ನಡೆಯಲಿದ್ದಾರೆ.

ನ್ಯೂಯಾರ್ಕ್: ಅಮೆರಿಕ ಅಧ್ಯಕ್ಷೀಯ ಪದವಿಗೆ ಡೆಮಾಕ್ರಟ್ ಪಕ್ಷದ ಅಭ್ಯರ್ಥಿ ಜೊ ಬೈಡನ್ ಸಮೀಪದಲ್ಲಿದ್ದಾರೆ. ದೇಶದ ಪ್ರಮುಖ ರಾಜ್ಯಗಳಲ್ಲಿ ನಿನ್ನೆ ಮತ ಎಣಿಕೆಯಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗಿಂತ ಮುನ್ನಡೆಯಲಿದ್ದಾರೆ.
ಬೈಡನ್ ಪೆನ್ಸಿಲ್ವೇನಿಯಾ, ನೆವಾಡಾ ಮತ್ತು ಜಾರ್ಜಿಯಾ ರಾಜ್ಯಗಳಲ್ಲಿ ಮುನ್ನಡೆಯಲ್ಲಿದ್ದು ಶ್ವೇತಭವನದ ಅಧಿಕಾರದ ಗದ್ದುಗೆ ಏರಲು ಅಗತ್ಯವಿರುವ 270 ಎಲೆಕ್ಟೊರಲ್ ಕಾಲೇಜು ವೋಟ್ ಗಳನ್ನು ಗಳಿಸಲು ಅವರ ಜೊ ಬೈಡನ್ ಹಾದಿ ಸುಗಮವಾಗಿದೆ. ಅನೇಕ ಐತಿಹಾಸಿಕ ಸವಾಲುಗಳನ್ನು, ಆಳಮಟ್ಟದಲ್ಲಿ ರಾಜಕೀಯ ಧ್ರುವೀಕರಣ ಮತ್ತು ಕೋವಿಡ್-19 ಸಾಂಕ್ರಾಮಿಕ ಪಿಡುಗಿನ ಸಮಸ್ಯೆಗಳ ಮಧ್ಯೆ ನೂತನ ಅಧ್ಯಕ್ಷರು ಅಧಿಕಾರ ವಹಿಸಲಿದ್ದಾರೆ.
ಮುಂದಿನ ನಾಲ್ಕು ವರ್ಷಗಳ ಕಾಲ ಅಮೆರಿಕದ ಆಡಳಿತ ಚುಕ್ಕಾಣಿ ಯಾರು ಹಿಡಿಯುತ್ತಾರೆ ಎಂದು ಮತದಾನ ನಡೆದು ಮೂರನೇ ದಿನ ಕೂಡ ಅಮೆರಿಕನ್ನರು ಸೇರಿದಂತೆ ಇಡೀ ವಿಶ್ವ ತೀವ್ರ ಕುತೂಹದಿಂದ ಕಾಯುತ್ತಾ ಕುಳಿತಿದೆ.
ಸದ್ಯ ಬಂದಿರುವ ವರದಿಗಳ ಪ್ರಕಾರ ಜೊ ಬೈಡನ್ 264 ಎಲೆಕ್ಟೊರಲ್ ಮತಗಳನ್ನು ಗಳಿಸಿದ್ದರೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 214 ಎಲೆಕ್ಟೊರಲ್ ಮತಗಳನ್ನು ಪಡೆದಿದ್ದಾರೆ.
ಪೆನ್ಸಿಲ್ವೇನಿಯಾ ರಾಜ್ಯದ ಮತ ಎಣಿಕೆಯನ್ನು ಕೂಡಲೇ ನಿಲ್ಲಿಸಬೇಕೆಂದು ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


