ನೂತನ ಜೋ ಬೈಡನ್ ಸರ್ಕಾರದಿಂದ 5 ಲಕ್ಷ ಭಾರತೀಯರಿಗೆ ಅಮೆರಿಕ ನಾಗರಿಕತ್ವ!
ಅಮೆರಿಕದ ನೂತನ ಅಧ್ಯಕ್ಷರಾಗಿ ಜೋ ಬೈಡನ್ ಆಯ್ಕೆಯಾದ ಬೆನ್ನಲ್ಲೇ ಬೈಡನ್ ಸರ್ಕಾರ ಅನಿವಾಸಿ ಭಾರತೀಯರಿಗೆ ಗುಡ್ ನ್ಯೂಸ್ ನೀಡಿದ್ದು, 5 ಲಕ್ಷ ಭಾರತೀಯರಿಗೆ ಅಮೆರಿಕ ನಾಗರಿಕತ್ವ ನೀಡಲು ಮುಂದಾಗಿದೆ.

ವಾಷಿಂಗ್ಟನ್: ಅಮೆರಿಕದ ನೂತನ ಅಧ್ಯಕ್ಷರಾಗಿ ಜೋ ಬೈಡನ್ ಆಯ್ಕೆಯಾದ ಬೆನ್ನಲ್ಲೇ ಬೈಡನ್ ಸರ್ಕಾರ ಅನಿವಾಸಿ ಭಾರತೀಯರಿಗೆ ಗುಡ್ ನ್ಯೂಸ್ ನೀಡಿದ್ದು, 5 ಲಕ್ಷ ಭಾರತೀಯರಿಗೆ ಅಮೆರಿಕ ನಾಗರಿಕತ್ವ ನೀಡಲು ಮುಂದಾಗಿದೆ.
ಹೌದು.. ಜೋ ಬೈಡನ್ ಮತ್ತು ಭಾರತ ಮೂಲದ ಕಮಲಾ ಹ್ಯಾರಿಸ್ ಸರ್ಕಾರ ಅನಿವಾಸಿ 5 ಲಕ್ಷ ಭಾರತೀಯರೂ ಸೇರಿದಂತೆ 11ಸ ಲಕ್ಷ ವಿದೇಶಿ ವಲಸಿಗರಿಗೆ ಅಮೆರಿಕ ನಾಗರಿಕತ್ವ ನೀಡುವ ಕುರಿತು ನಿರ್ಧರಿಸಿದೆ. ಅಂತೆಯೇ ನಾಗರಿಕತ್ವ ವಿತರಣೆಗೆ ವಾರ್ಷಿಕ 95,000 ಮಿತಿ ಹೇರಲಾಗಿದ್ದು, ಈ ಕುರಿತಂತೆ ಬೈಡನ್ ಕ್ಯಾಂಪೇನ್ ಪಾಸಲಿಸಿ ಡಾಕ್ಯುಮೆಂಟ್ ನಲ್ಲಿ ತಿಳಿಸಲಾಗಿದೆ.
ಅಮೆರಿಕದಲ್ಲಿ ಕೆಲಸಕ್ಕಾಗಿ ಬಂದ ವಿವಿಧ ದೇಶಗಳ ಸುಮಾರು 11 ಲಕ್ಷ ವಲಸಿಗರಿದ್ದು, ಈ ಪೈಕಿ ಭಾರತದ ಮೂಲದ 5ಲಕ್ಷ ವಲಸಿಗರಿದ್ದಾರೆ. ಈ ವಲಸಿಗರಿಗೆ ನಾಗರಿಕತ್ವ ನೀಡಲು ಬೈಡನ್ ಸರ್ಕಾರ ನೀತಿ ಜಾರಿಗೆ ತರಲು ಮುಂದಾಗಿದೆ. ಬೈಡನ್ ಸರ್ಕಾರ ಈ ನೀತಿಯ ಪ್ರಕಾರ, ವಲಸೆ ಸುಧಾರಣಾ ಕಾನೂನು ಜಾರಿಗೊಳಿಸುವುದಕ್ಕೆ, ಅದಕ್ಕೆ ಸಂಬಂಧಿಸಿದ ಮಸೂದೆ ಸಿದ್ಧಪಡಿಸಿ ಅಂಗೀಕರಿಸುವುದಕ್ಕಾಗಿ ಬೈಡನ್ ಅವರು, ಕಾಂಗ್ರೆಸ್ ಜೊತೆಗೂಡಿ ಶೀಘ್ರವೇ ಕೆಲಸ ಮಾಡಲಿದ್ದಾರೆ ಎಂದು ಹೇಳಲಾಗಿದೆ. ಅಮೆರಿಕಕ್ಕೆ ವಲಸೆ ಬರುವ ಉದ್ಯೋಗಸ್ಥರ ಕುಟುಂಬಗಳೂ ಕೂಡ ಒಟ್ಟಿಗೆ ಇರಿಸುವ ಪ್ರಯತ್ನ ಇದಾಗಿದೆ.
ಈ ಹಿಂದೆ ಬರಾಕ್ ಒಬಾಮ ಅಧ್ಯಕ್ಷರಾಗಿದ್ದಾಗ ಜಾರಿಯಲ್ಲಿದ್ದ ಅನೇಕ ನೀತಿಗಳನ್ನು ಒಬಾಮಾ ಸರ್ಕಾರ ರದ್ದುಗೊಳಿಸಿತ್ತು. ಈ ಪೈಕಿ ಉತ್ತಮವಾದ ಕೆಲ ನೀತಿಗಳನ್ನು ಮತ್ತೆ ಜಾರಿಗೊಳಿಸಲಾಗುವುದು ಎಂದು ಬೈಡನ್ ತಂಡ ಘೋಷಣೆ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


