ನೂತನ ಅಧ್ಯಕ್ಷ ಬೈಡನ್ ಗೆ ಅಧಿಕಾರ ಹಸ್ತಾಂತರಿಸುವಂತೆ ಟ್ರಂಪ್ ಮೇಲೆ ಒತ್ತಡ
ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಭರ್ಜರಿ ಬಹುಮತದೊಂದಿಗೆ ಆಯ್ಕೆಯಾಗಿರುವ ಡೆಮೋಕ್ರಾಟಿಕ್ ಪಕ್ಷದ ಜೋ ಬೈಡನ್ ಅವರಿಗೆ ಸುಗಮ ಅಧಿಕಾರ ಹಸ್ತಾಂತರಕ್ಕೆ ಸಹಕರಿಸುವಂತೆ ನಿರ್ಗಮಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮೇಲೆ ಒತ್ತಡ ಹಾಕಲಾಗುತ್ತಿದೆ.

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಭರ್ಜರಿ ಬಹುಮತದೊಂದಿಗೆ ಆಯ್ಕೆಯಾಗಿರುವ ಡೆಮೋಕ್ರಾಟಿಕ್ ಪಕ್ಷದ ಜೋ ಬೈಡನ್ ಅವರಿಗೆ ಸುಗಮ ಅಧಿಕಾರ ಹಸ್ತಾಂತರಕ್ಕೆ ಸಹಕರಿಸುವಂತೆ ನಿರ್ಗಮಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮೇಲೆ ಒತ್ತಡ ಹಾಕಲಾಗುತ್ತಿದೆ.
ನೂತನ ಅಧ್ಯಕ್ಷರಾಗಿ ಜೋ ಬೈಡನ್ ಆಯ್ಕೆಯಾಗಿದ್ದಾರೆ. ಆದರೆ ಹಾಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಅಧಿಕಾರದಿಂದ ಕೆಳಕ್ಕಿಳಿಯುವ ಮನಸ್ಸಿಲ್ಲ. ಅಧಿಕಾರ ಹಸ್ತಾಂತರಕ್ಕೆ ಜನವರಿಯವರೆಗೂ ಸಮಯವಿದೆ. ಅಲ್ಲಿಯವರೆಗೂ ಟ್ರಂಪ್ ಅಧಿಕಾರ ಸಂಘರ್ಷ ನಡೆಸುವ ಸಾಧ್ಯತೆ ಇದೆ.
ಜನರಲ್ ಸರ್ವೀಸಸ್ ಅಡ್ಮಿನಿಸ್ಟ್ರೇಷನ್ ಬೈಡೆನ್ ಅವರನ್ನು ಚುನಾಯಿತ ಅಧ್ಯಕ್ಷ ಎಂದು ಅಧಿಕೃತವಾಗಿ ಘೋಷಿಸುವ ಕಾರ್ಯವನ್ನು ನಿರ್ವಹಿಸುತ್ತದೆ ಮತ್ತು ಈ ಮೂಲಕ ಅಧಿಕಾರ ಹಸ್ತಾಂತರಕ್ಕೆ ಚಾಲನೆ ನೀಡುತ್ತದೆ. ಆದರೆ ಟ್ರಂಪ್ ನೇಮಕ ಮಾಡಿದ ಆಡಳಿತಾಧಿಕಾರಿ ಎಮಿಲಿ ಮರ್ಫಿ ಅವರು ಈ ಪ್ರಕ್ರಿಯೆಯನ್ನು ಇನ್ನೂ ಪ್ರಾರಂಭಿಸಿಲ್ಲ ಮತ್ತು ಈ ಬಗ್ಗೆ ಅವರು ಯಾವುದೇ ಮಾರ್ಗದರ್ಶನ ನೀಡಿಲ್ಲ.
ಈ ಮಧ್ಯೆ, ಜನವರಿ 20ರ ವೇಳೆಗೆ ಅಮೆರಿಕದ ಹಲವು ನೀತಿಗಳಲ್ಲಿ ಕಿಡಿಗೇಡಿತನ ಮಾಡಲು ತುಂಬಾ ಅವಕಾಶಗಳಿವೆ ಎಂದು ನನಗನ್ನಿಸುತ್ತದೆ' ಎಂದು ಬೀಜಿಂಗ್‌ನ ಅಮೆರಿಕ ರಾಯಭಾರ ಕಚೇರಿಯ ಮಾಜಿ ವಾಣಿಜ್ಯ ಅಧಿಕಾರಿ ಮತ್ತು ಜಾರ್ಜ್‌ಟೌನ್ ವಿಶ್ವವಿದ್ಯಾಲಯದ ಹಿರಿಯ ಪ್ರೊಫೆಸರ್ ಜೇಮ್ಸ್ ಗ್ರೀನ್ ಹೇಳಿದ್ದಾರೆ.
'ಸಹಕಾರಯುತ ಅಧಿಕಾರ ಹಸ್ತಾಂತರ ಪ್ರಕ್ರಿಯೆಗಳು ನಡೆಯುವುದರ ಬಗ್ಗೆ ಅನುಮಾನವಿದೆ. ಟ್ರಂಪ್ ಆಡಳಿತವು ತಾನು ಪಾಲಿಸಲು ಆಸಕ್ತಿ ತೋರಿಸದೆ ಇರುವ ನಿಯಮಗಳಲ್ಲಿ ಇದೂ ಒಂದಾಗಲಿದೆ' ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


