ಚುನಾವಣೆಯಲ್ಲಿ ಗೆದ್ದಿರುವುದಾಗಿ ಟ್ವೀಟ್ ಮಾಡಿ ಅಪಹಾಸ್ಯಕ್ಕೆ ಗುರಿಯಾದ ಡೊನಾಲ್ಡ್ ಟ್ರಂಪ್!
ಅಧ್ಯಕ್ಷೀಯ ಚುನಾವಣೆಯಲ್ಲಿ ಜೋ ಬಿಡೆನ್ ವಿರುದ್ಧ ಸೋಲೋಪ್ಪಿಕೊಳ್ಳದ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ನಾನು ಗೆದ್ದಿದ್ದೇನೆ ಎಂದಿದ್ದಾರೆ.

ವಾಷಿಂಗ್ಟನ್: ಅಧ್ಯಕ್ಷೀಯ ಚುನಾವಣೆಯಲ್ಲಿ ಜೋ ಬಿಡೆನ್ ವಿರುದ್ಧ ಸೋಲೋಪ್ಪಿಕೊಳ್ಳದ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ನಾನು ಗೆದ್ದಿದ್ದೇನೆ ಎಂದಿದ್ದಾರೆ.
538 ಎಲೆಕ್ಟೊರಲ್ ಕಾಲೇಜ್ ಸದಸ್ಯರ ಪೈಕಿಯಲ್ಲಿ ಬಹುಮತಕ್ಕೆ ಅಗತ್ಯವಾಗಿದ್ದ 270 ಕ್ಕೂ ಮೀರಿದ ಎಲೆಕ್ಟೊರಲ್ ಕಾಲೇಜು ಸದಸ್ಯರ ಮತಗಳನ್ನು ಪಡೆಯುವ ಮೂಲಕ ಜೋ ಬಿಡೆನ್ ಗೆಲುವು ಸಾಧಿಸಿರುವುದಾಗಿ ಅಮೆರಿಕದ ಪ್ರಮುಖ ಮಾಧ್ಯಮಗಳು ಘೋಷಿಸಿದ್ದರೂ, ತಾವೇ ಚುನಾವಣೆಯಲ್ಲಿ ಗೆಲುವು ಸಾಧಿಸಿರುವುದಾಗಿ 74 ವರ್ಷದ ಡೊನಾಲ್ಡ್ ಟ್ರಂಪ್ ಟ್ವೀಟ್ ಮಾಡಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಈ ಟ್ವೀಟನ್ನು ಬಳಸಿಕೊಂಡು, ಟ್ವಿಟಿಗರು ಟ್ರಂಪ್ ಅವರನ್ನು ವಿಭಿನ್ನ ರೀತಿಯಲ್ಲಿ ಕಿಚಾಯಿಸಿದ್ದಾರೆ. ಸಾಕ್ಷಿಗಳು ಇಲ್ಲದೆ ಚುನಾವಣೆಯಲ್ಲಿ ಗೆದ್ದಿರುವುದಾಗಿ ಡೊನಾಲ್ಡ್ ಟ್ರಂಪ್ ಮಾಡಿರುವ ಟ್ವೀಟ್ ಅಪಹಾಸ್ಯಕ್ಕೆ ಗುರಿಯಾಗಿದೆ.
ವೆಜ್ ಬಿರಿಯಾನಿ ಭಾರತದ ರಾಷ್ಟ್ರೀಯ ಆಹಾರವೆಂದು ಘೋಷಿಸಲಾಗಿದೆ ಎಂದು ಆಹಾರ ಡೆಲಿವರಿ ಮಾಡುವ ಸ್ವಿಗಿ ತನ್ನ ಅಧಿಕೃತ ಖಾತೆಯಲ್ಲಿ ಅಪಹಾಸ್ಯ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


