ವಿದೇಶ

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಪತ್ನಿ ಮೆಲಾನಿಯಾ ಟ್ರಂಪ್'ಗೆ ಕೊರೋನಾ ಸೋಂಕು ದೃಢ

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಅಮೆರಿಕದ ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್‌ ಅವರಿಗೆ ಮಹಾಮಾರಿ ಕೊರೋನಾ ವೈರಸ್ ಸೋಂಕು ದೃಢಪಟ್ಟಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಪತ್ನಿ ಮೆಲಾನಿಯಾ ಟ್ರಂಪ್'ಗೆ ಕೊರೋನಾ ಸೋಂಕು ದೃಢ
ಸಂಗ್ರಹ ಚಿತ್ರ
Published On :

ವಾಷಿಂಗ್ಟನ್: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಅಮೆರಿಕದ ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್‌ ಅವರಿಗೆ ಮಹಾಮಾರಿ ಕೊರೋನಾ ವೈರಸ್ ಸೋಂಕು ದೃಢಪಟ್ಟಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಈ ಹಿಂದೆ ಟ್ರಂಪ್ ಅವರ ಉನ್ನತ ಸಲಹೆಗಾರರಾದ ಹೋಪ್ ಹಿಕ್ಸ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು. ಇದೀಗ ಕೊರೋನಾ ಪರೀಕ್ಷೆಗೊಳಗಾಗಿದ್ದು, ನಾನು ಹಾಗೂ ನನ್ನ ಪತ್ನಿ ಇಬ್ಬರೂ ಕ್ವಾರಂಟೈನ್'ನಲ್ಲಿದ್ದೇವೆ. ವೈದ್ಯಕೀಯ ವರದಿಗಾಗಿ ಕಾಯುತ್ತಿದ್ದೇವೆಂದು ಟ್ರಂಪ್ ಹೇಳಿದ್ದರು. 

ಇದರಂತೆ ಇದೀಗ ವೈದ್ಯಕೀಯ ಪರೀಕ್ಷೆಯ ವರದಿ ಬಂದಿದ್ದು, ನನಗೆ ಹಾಗೂ ಅಮೆರಿಕಾದ ಪ್ರಥಮ ಮಹಿಳೆಗೆ ಕೊರೋನಾ ವೈರಸ್ ದೃಢಪಟ್ಟಿದೆ. ಕ್ವಾರಂಟೈನ್ ಪ್ರಕ್ರಿಯೆ ಆರಂಭವಾಗಿದ್ದು, ಚಿಕಿತ್ಸೆ ಪ್ರಕ್ರಿಯೆಗಳೂ ಆರಂಭವಾಗುತ್ತಿವೆ. ನಾವಿಬ್ಬರೂ ಒಟ್ಟಿಗೆ ಎದುರಿಸುತ್ತೇವೆಂದು ಟ್ರಂಪ್ ಟ್ವಿಟರ್ ನಲ್ಲಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.