ಜಾಧವ್ ಪರ ವಕೀಲರನ್ನು ನೇಮಕ ಮಾಡುವಲ್ಲಿ ಭಾರತ ವಿಫಲ: ಪಾಕಿಸ್ತಾನ
ಕುಲಭೂಷಣ್ ಜಾಧವ್ ಅವರಿಗೆ ಮಿಲಿಟರಿ ನ್ಯಾಯಾಲಯ ವಿಧಿಸಿರುವ ಮರಣದಂಡನೆ ಮರು ಪರಿಶೀಲನೆಗಾಗಿ ವಕೀಲರನ್ನು ನೇಮಕ ಮಾಡುವಲ್ಲಿ ಭಾರತ ವಿಫಲವಾಗಿದೆ ಎಂದು ಪಾಕಿಸ್ತಾನ ಸರ್ಕಾರ ಅಲ್ಲಿನ ನ್ಯಾಯಾಲಯಕ್ಕೆ ತಿಳಿಸಿದೆ.

ಇಸ್ಲಾಮಾಬಾದ್: ಕುಲಭೂಷಣ್ ಜಾಧವ್ ಅವರಿಗೆ ಮಿಲಿಟರಿ ನ್ಯಾಯಾಲಯ ವಿಧಿಸಿರುವ ಮರಣದಂಡನೆ ಮರು ಪರಿಶೀಲನೆಗಾಗಿ ವಕೀಲರನ್ನು ನೇಮಕ ಮಾಡುವಲ್ಲಿ ಭಾರತ ವಿಫಲವಾಗಿದೆ ಎಂದು ಪಾಕಿಸ್ತಾನ ಸರ್ಕಾರ ಅಲ್ಲಿನ ನ್ಯಾಯಾಲಯಕ್ಕೆ ತಿಳಿಸಿದೆ.
ಈ ಪ್ರಕರಣದಲ್ಲಿ ಮುಕ್ತ ಮತ್ತು ನ್ಯಾಯಯುತ ವಿಚಾರಣೆಯನ್ನು ಖಚಿತಪಡಿಸಿಕೊಳ್ಳಲು ಜಾಧವ್‌ಗೆ ಭಾರತೀಯ ವಕೀಲರನ್ನು ಎಂಬ ಭಾರತದ ಬೇಡಿಕೆಯನ್ನು ಪಾಕಿಸ್ತಾನ ಗುರುವಾರ ಮತ್ತೊಮ್ಮೆ ತಿರಸ್ಕರಿಸಿದ ನಂತರ ಇದು ನಡೆದಿದೆ.
50 ವರ್ಷದ ನಿವೃತ್ತ ಭಾರತೀಯ ನೌಕಾಪಡೆಯ ಅಧಿಕಾರಿ ಜಾಧವ್‌ಗೆ 2017 ರ ಏಪ್ರಿಲ್‌ನಲ್ಲಿ ಗೂಢ ಚರ್ಯೆ ಮತ್ತು ಭಯೋತ್ಪಾದನೆ ಆರೋಪದ ಮೇಲೆ ಪಾಕಿಸ್ತಾನದ ಮಿಲಿಟರಿ ನ್ಯಾಯಾಲಯ ಮರಣದಂಡನೆ ವಿಧಿಸಿತ್ತು.
ಅಂತಾರಾಷ್ಟ್ರೀಯ ನ್ಯಾಯಾಲಯದ ತೀರ್ಪಿನ ಬಳಿಕ ಜಾಧವ್ ಅವರಿಗೆ ಪಾಕ್ ಮಿಲಿಟರಿ ಕೋರ್ಟ್ ವಿಧಿಸಿರುವ ಮರಣ ದಂಡನೆ ಶಿಕ್ಷೆ ಜಾರಿಗೊಳಿಸುವುದು ಕಷ್ಟಕರವಾಗಿ ಪರಿಣಮಿಸಿದೆ. ಅವರಿಗೆ ವಿಧಿಸಿರುವ ಶಿಕ್ಷೆ ಮರು ಪರಿಶೀಲಿಸುತ್ತಿರುವ ಇಸ್ಲಾಮಾಬಾದ್ ಹೈಕೋರ್ಟ್, ಸೂಕ್ತ ವಕೀಲರ ನೇಮಕಕ್ಕೆ ಅವಕಾಶ ನೀಡುವಂತೆ ಸೂಚಿಸಿದೆ.ಮುಂದಿನ ವಿಚಾರಣೆಯನ್ನು ನವೆಂಬರ್ 9ಕ್ಕೆ ನ್ಯಾಯಾಲಯ ಮುಂದೂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


