ಜಾಗತಿಕವಾಗಿ ಕೊರೋನ ಸೋಂಕು ಪ್ರಕರಣಗಳ ಸಂಖ್ಯೆ 4 ಕೋಟಿ 33 ಲಕ್ಷಕ್ಕೆ ಏರಿಕೆ
ಜಗತ್ತಿನಾದ್ಯಂತ ಕೊರೋನ ಸೋಂಕು ಪ್ರಕರಣಗಳ ಸಂಖ್ಯೆ 4 ಕೋಟಿ 33 ಲಕ್ಷಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.

ವಾಷಿಂಗ್ಟನ್: ಜಗತ್ತಿನಾದ್ಯಂತ ಕೊರೋನ ಸೋಂಕು ಪ್ರಕರಣಗಳ ಸಂಖ್ಯೆ 4 ಕೋಟಿ 33 ಲಕ್ಷಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.
ಪ್ರಸ್ತುತ ಪ್ರಕರಣವು 43,346,888 ರಷ್ಟಿದ್ದು, 1,159,097 ಸಾವುಗಳು ಮತ್ತು ಈವರೆಗೆ 31,905,975 ಜನರು ಚೇತರಿಸಿಕೊಂಡಿದ್ದಾರೆ ಎಂದೂ ವರದಿಗಳು ತಿಳಿಸಿವೆ.
ಹೆಚ್ಚು ಚೇತರಿಕೆ ಪ್ರಮಾಣ ಹೊಂದಿರುವ ಪಟ್ಟಿಯಲ್ಲಿ ಭಾರತದ ಮೊದಲ ಸ್ಥಾನದಲ್ಲಿದ್ದು, ಭಾರತದಲ್ಲಿ ಈ ವರೆಗೂ 71,37,229 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಪ್ರಸ್ತುತ ದೇಶದಲ್ಲಿ 6,53,717ರಷ್ಟು ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ವಿಶ್ವದ ಇತರೆ ದೇಶಗಳಿಗೆ ಹೋಲಿಕೆ ಮಾಡಿದರೆ ಅಮೆರಿಕಾದಲ್ಲಿಯೇ ಕೊರೋನಾ ಮಹಾಮಾರಿಯ ಆರ್ಭಟ ಹೆಚ್ಚಾಗಿದ್ದು, ಈ ವರೆಗೂ ಅಮೆರಿಕಾದಲ್ಲಿ 8,889,179 ಮಂದಿ ಸೋಂಕಿಗೊಳಗಾಗಿದ್ದಾರೆ. ಅಲ್ಲದೆ, 230,510 ಮಂದಿ ಸಾವನ್ನಪ್ಪಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


