ಪ್ರಣಬ್ ಮುಖರ್ಜಿ ಸಮರ್ಪಿತ ಸಾರ್ವಜನಿಕ ಸೇವಕರಾಗಿದ್ದರು: ಜೋ ಬಿಡೆನ್
ಭಾರತದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸಮರ್ಪಿತ ಸಾರ್ವಜನಿಕ ಸೇವಕರಾಗಿದ್ದರು ಎಂದು ಅಮೆರಿಕದ ಮಾಜಿ ಉಪಾಧ್ಯಕ್ಷ ಜೋ ಬಿಡೆನ್ ಹೇಳಿದ್ದಾರೆ.

ವಾಷಿಂಗ್ಟನ್: ಭಾರತದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸಮರ್ಪಿತ ಸಾರ್ವಜನಿಕ ಸೇವಕರಾಗಿದ್ದರು ಎಂದು ಅಮೆರಿಕದ ಮಾಜಿ ಉಪಾಧ್ಯಕ್ಷ ಜೋ ಬಿಡೆನ್ ಹೇಳಿದ್ದಾರೆ.
ಪ್ರಣಬ್ ಮುಖರ್ಜಿ ಅವರ ಸಾವಿನ ವಿಚಾರದ ಕುರಿತು ಟ್ವೀಟ್ ಮಾಡಿರುವ ಜೋ ಬಿಡೆನ್ ಅವರು, 'ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಸಾರ್ವಜನಿಕ ಸೇವೆಗೆ ತಮ್ಮನ್ನು ತಾವು ಸಮರ್ಪಿಸಿಕೊಂಡಿದ್ದರು. ಜಾಗತಿಕ ಸವಾಲುಗಳನ್ನು ಎದುರಿಸುವಲ್ಲಿ ನಮ್ಮ ಎರಡು ರಾಷ್ಟ್ರಗಳ ಮಹತ್ವವನ್ನು ಆಳವಾಗಿ ನಂಬಿದ್ದರು. ಜಿಲ್ ಮತ್ತು ನಾನು ಅವರ ನಿಧನವನ್ನು ಕೇಳಿ ದುಃಖಿತರಾಗಿದ್ದೇವೆ. ನಮ್ಮ ಪ್ರಾರ್ಥನೆಗಳು ಅವರ ಪ್ರೀತಿಪಾತ್ರರಿಗೆ ಮತ್ತು ಭಾರತೀಯ ಜನರಿಗಾಗಿದೆ ಎಂದು ಹೇಳಿದ್ದಾರೆ.
ಭಾರತದ ಅತ್ಯಂತ ಗೌರವಾನ್ವಿತ ರಾಜಕಾರಣಿಗಳಲ್ಲಿ ಒಬ್ಬರಾದ ಪ್ರಣಬ್ ಮುಖರ್ಜಿ ಸೋಮವಾರ ಸಂಜೆ ತಮ್ಮ 84 ನೇ ವಯಸ್ಸಿನಲ್ಲಿ ನಿಧನರಾದರು. ಕೊರೋನಾ ವೈರಸ್ ಸೋಂಕಿಗೆ ಒಳಗಾಗಿದ್ದ ಅವರು ಈ ತಿಂಗಳ ಆರಂಭದಲ್ಲಿ ಮೆದುಳಿನ ಶಸ್ತ್ರಚಿಕಿತ್ಸೆಯ ನಂತರ ಕೋಮಾದಲ್ಲಿದ್ದರು. ಪ್ರಣಬ್ ಮುಖರ್ಜಿ 2012 ರಿಂದ 2017 ರವರೆಗೆ ಭಾರತದ ರಾಷ್ಟ್ರಪತಿಯಾಗಿದ್ದರು. ಅವರಿಗೆ 2019 ರಲ್ಲಿ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನ ಮತ್ತು 2008 ರಲ್ಲಿ ಪದ್ಮವಿಭೂಷಣ ನೀಡಿ ಗೌರವಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


