ಪ್ರಣವ್ ಮುಖರ್ಜಿ ನಿಧನದಿಂದ ಇಂಡಿಯಾ- ಚೀನಾ ಸ್ನೇಹಕ್ಕೆ ಅಪಾರ ನಷ್ಟ- ಚೀನಾ
ದಕ್ಷ ರಾಜಕೀಯ ಮುತ್ಸದ್ದಿಯಾಗಿದ್ದ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರ ನಿಧನದಿಂದ ಇಂಡಿಯಾ- ಚೀನಾ ಸ್ನೇಹತ್ವಕ್ಕೆ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ ಎಂದು ಚೀನಾ ಹೇಳಿದೆ.

ಬೀಜಿಂಗ್: ದಕ್ಷ ರಾಜಕೀಯ ಮುತ್ಸದ್ದಿಯಾಗಿದ್ದ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರ ನಿಧನದಿಂದ ಇಂಡಿಯಾ- ಚೀನಾ
ಸ್ನೇಹತ್ವಕ್ಕೆ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ ಎಂದು ಚೀನಾ ಹೇಳಿದೆ.
ಪ್ರಣವ್ ಮುಖರ್ಜಿ ಅವರ 50 ವರ್ಷಗಳ ರಾಜಕೀಯ ಜೀವನದಲ್ಲಿ ಚೀನಾ- ಭಾರತ ಸಂಬಂಧದಲ್ಲಿ ಸಕಾರಾತ್ಮಕ ಕೊಡುಗೆಗಳನ್ನು ನೀಡಿದ್ದಾರೆ ಎಂದು ಚೀನಾ ವಿದೇಶಾಂಗ ಸಚಿವಾಲಯದ ವಕ್ತಾರೆ ಹುವಾ ಚುನೈಂಗ್ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ್ದಾರೆ.
2014ರಲ್ಲಿ ಚೀನಾ ಅಧ್ಯಕ್ಷ ಕ್ಸಿ- ಜಿನ್ ಪಿಂಗ್ ಭಾರತ ಭೇಟಿ ಹಾಗೂ ಮುಖರ್ಜಿ ಅವರೊಂದಿಗಿನ ಸಭೆಯನ್ನು ಉಲ್ಲೇಖಿಸಿದ ಹುವಾ, ಅಭಿವೃದ್ಧಿ ಪಾಲುದಾರಿಕೆ ಬಲವರ್ದನೆ ನಿಟ್ಟಿನಲ್ಲಿ ಉಭಯ ನಾಯಕರು ಜಂಟಿ ಹೇಳಿಕೆ ನೀಡಿದ್ದರು ಎಂದು ತಿಳಿಸಿದ್ದಾರೆ.
ಪ್ರಣವ್ ಮುಖರ್ಜಿ ನಿಧನದಿಂದ ಚೀನಾ, ಭಾರತದೊಂದಿಗಿನ ಸ್ನೇಹತ್ವ ಹಾಗೂ ಭಾರತಕ್ಕೆ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ. ಅವರ ಕುಟುಂಬಕ್ಕೆ ತೀವ್ರ ಸಂತಾಪ ಸೂಚಿಸುವುದಾಗಿ ಹುವಾ ಚುನೈಂಗ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


