ವಿದೇಶ

ಭಾರತ-ಚೀನಾ ಗಡಿ ಸಮಸ್ಯೆ ಬಗೆಹರಿಕೆಗೆ ಸಹಾಯ ಮಾಡಲು ನಾವು ಸಿದ್ಧ: ಅಮೆರಿಕಾ

ಭಾರತ-ಚೀನಾ ಗಡಿ ಸಮಸ್ಯೆ ಬಗೆಹರಿಸಲು ನಮ್ಮಿಂದ ಸಾಧ್ಯವಾಗುವುದೇ ಆದರೆ, ಸಹಾಯ ಮಾಡಲು ಅಮೆರಿಕಾ ಸಿದ್ಧವಿದೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೇಳಿದ್ದಾರೆ.

ಭಾರತ-ಚೀನಾ ಗಡಿ ಸಮಸ್ಯೆ ಬಗೆಹರಿಕೆಗೆ ಸಹಾಯ ಮಾಡಲು ನಾವು ಸಿದ್ಧ: ಅಮೆರಿಕಾ
ಡೊನಾಲ್ಡ್ ಟ್ರಂಪ್
Published On :

ವಾಷಿಂಗ್ಟನ್: ಭಾರತ-ಚೀನಾ ಗಡಿ ಸಮಸ್ಯೆ ಬಗೆಹರಿಸಲು ನಮ್ಮಿಂದ ಸಾಧ್ಯವಾಗುವುದೇ ಆದರೆ, ಸಹಾಯ ಮಾಡಲು ಅಮೆರಿಕಾ ಸಿದ್ಧವಿದೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೇಳಿದ್ದಾರೆ.

ಲಡಾಖ್'ನ ಪ್ಯಾಂಗ್ಯಾಂಗ್ ಸರೋವರದ ದಕ್ಷಿಣ ದಂಡೆಯಲ್ಲಿ ತ್ವೇಷಮಯ ಪರಿಸ್ಥಿತಿ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಟ್ರಂಪ್ ಅವರು, ಭಾರತ-ಚೀನಾ ಗಡಿಯಲ್ಲಿ ಸೃಷ್ಟಿಯಾಗಿರುವ ಉದ್ವಿಗ್ನತೆ ಅಸಹ್ಯಕರವಾದ ಪರಿಸ್ಥಿತಿಯಾಗಿದೆ. ಈ ಸಮಸ್ಯೆ ಬಗೆಹರಿಸಲು ನಮ್ಮಿಂದ ಸಾಧ್ಯವಾದರೆ, ಏನನ್ನಾದರೂ ಮಾಡಲು ನಾವು ಸಿದ್ಧವಿದ್ದೇವೆ. ಸಮಸ್ಯೆ ಬಗೆಹರಿಕೆಗೆ ಸಹಾಯ ಮಾಡುತ್ತೇವೆಂದು ಹೇಳಿದ್ದಾರೆ. 

ಇದೊಂದು ತುಂಬಾ ಅಸಹ್ಯಕರ ಸನ್ನಿವೇಶವಾಗಿದೆ ಮತ್ತು ಚೀನಾ ಮತ್ತು ಭಾರತಕ್ಕೆ ಸಂಬಂಧಿಸಿದಂತೆ ಸಹಾಯ ಮಾಡಲು ನಾವು ಸಿದ್ಧರಿದ್ದೇವೆ. ನಮ್ಮಿಂದ ಏನನ್ನಾದರೂ ಮಾಡಲು ಸಾಧ್ಯವಾದರೆ ನಾವು ತೊಡಗಿಸಿಕೊಳ್ಳಲು ಮತ್ತು ಸಹಾಯ ಮಾಡಲು ಇಷ್ಟಪಡುತ್ತೇವೆ. ಆ ಬಗ್ಗೆ ನಾವು ಎರಡೂ ದೇಶಗಳೊಂದಿಗೆ ಮಾತನಾಡುತ್ತೇವೆ ”ಎಂದು ಟ್ರಂಪ್ ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.