ಆಫ್ಘಾನಿಸ್ತಾನ ಉಪಾಧ್ಯಕ್ಷರ ಬೆಂಗಾವಲು ಪಡೆ ಮೇಲೆ ದಾಳಿ: 10 ಮಂದಿ ಸಾವು
ಅಫ್ಘಾನಿಸ್ತಾನದ ಉಪಾಧ್ಯಕ್ಷ ಅಮ್ರುಲ್ಲಾ ಸಲೇಹ್ ಅವರ ಬೆಂಗಾವಲು ಪಡೆಯನ್ನು ಗುರಿಯಾಗಿಸಿಕೊಂಡು ರಸ್ತೆಬದಿಯಲ್ಲಿ ಇರಿಸಲಾಗಿದ್ದ ಬಾಂಬ್ ಸ್ಫೋಟಿಸಲಾಗಿದ್ದು, ಘಟನೆಯಲ್ಲಿ ಕನಿಷ್ಠ 10 ಮಂದಿ ಸಾವನ್ನಪ್ಪಿದ್ದು, ಇತರ 15 ಮಂದಿ ಗಾಯಗೊಂಡಿದ್ದಾರೆ.

ಕಾಬೂಲ್: ಅಫ್ಘಾನಿಸ್ತಾನದ ಉಪಾಧ್ಯಕ್ಷ ಅಮ್ರುಲ್ಲಾ ಸಲೇಹ್ ಅವರ ಬೆಂಗಾವಲು ಪಡೆಯನ್ನು ಗುರಿಯಾಗಿಸಿಕೊಂಡು ರಸ್ತೆಬದಿಯಲ್ಲಿ ಇರಿಸಲಾಗಿದ್ದ ಬಾಂಬ್ ಸ್ಫೋಟಿಸಲಾಗಿದ್ದು, ಘಟನೆಯಲ್ಲಿ ಕನಿಷ್ಠ 10 ಮಂದಿ ಸಾವನ್ನಪ್ಪಿದ್ದು, ಇತರ 15 ಮಂದಿ ಗಾಯಗೊಂಡಿದ್ದಾರೆ.
ಉಪಾಧ್ಯಕ್ಷ ಸಲೇಹ್ ತನ್ನ ಹದಿಹರೆಯದ ಮಗನೊಂದಿಗೆ ಬಾಂಬ್ ನಿರೋಧಕ ವಾಹನದಲ್ಲಿದ್ದರಿಂದ ಯಾವುದೇ ತೊಂದರೆಗೊಳಗಾದೆ ಪಾರಾಗಿದ್ದಾರೆ.
ಈ ವಿಷಯವನ್ನು ಸಲೇಹ್ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿ ದೃಢಪಡಿಸಿದ್ದಾರೆ.
‘ಭಯೋತ್ಪಾದಕರ ಹೀನ ಕೃತ್ಯದ ಪ್ರಯತ್ನ ವಿಫಲವಾಗಿದೆ. ಕಾಬೂಲ್‌ನಲ್ಲಿ ನಡೆದ ಬಾಂಬ್ ಸ್ಫೋಟದಿಂದ ಸಲೇಹ್ ಬದುಕುಳಿದ್ದಾರೆ.’ ಎಂದು ಸಲೇಹ್ ಅವರ ವಕ್ತಾರ ರಜ್ವಾನ್ ಮುರಾದ್ ಹೆಚ್ಚಿನ ವಿವರಗಳನ್ನು ನೀಡದೆ ಮಾಹಿತಿ ನೀಡಿದ್ದಾರೆ ಎಂದು ಅರಿಯಾನಾ ಸುದ್ದಿ ಸಂಸ್ಥೆ ವರದಿ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


