ವಿದೇಶ

ಕುಲಭೂಷಣ್ ಜಾಧವ್ ಪರ ವಕೀಲರ ನೇಮಕ ಮಾಡುವ ಕುರಿತು ಭಾರತದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ: ಪಾಕಿಸ್ತಾನ

ಕುಲಭೂಷಣ್ ಜಾಧವ್ ಪರ ವಕೀಲರ ನೇಮಕ ಮಾಡುವ ಕುರಿತು ಭಾರತದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಪಾಕಿಸ್ತಾನ ಶುಕ್ರವಾರ ಹೇಳಿದೆ.

ಕುಲಭೂಷಣ್ ಜಾಧವ್ ಪರ ವಕೀಲರ ನೇಮಕ ಮಾಡುವ ಕುರಿತು ಭಾರತದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ: ಪಾಕಿಸ್ತಾನ
ಕುಲಭೂಷಣ್ ಜಾಧವ್
Published On :

ಇಸ್ಲಾಮಾಬಾದ್: ಕುಲಭೂಷಣ್ ಜಾಧವ್ ಪರ ವಕೀಲರ ನೇಮಕ ಮಾಡುವ ಕುರಿತು ಭಾರತದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಪಾಕಿಸ್ತಾನ ಶುಕ್ರವಾರ ಹೇಳಿದೆ. 

ರಾಜತಾಂತ್ರಿಕ ಮಾರ್ಗದ ಮೂಲಕ ಕುಲಭೂಷಣ್ ಜಾಧವ್ ಪರ ವಕೀಲರ ನೇಮಕ ಮಾಡುವಂತೆ ಭಾರತಕ್ಕೆ ಸಂದೇಶ ರವಾನಿಸಲಾಗಿತ್ತು. ಆದರೆ, ಈ ವರೆಗೂ ಭಾರತದಿಂದ ಯಾವುದೇ ಪ್ರತಿಕ್ರಿಯೆಗಳೂ ಬಂದಿಲ್ಲ ಎಂದು ಪಾಕಿಸ್ತಾನ ವಿದೇಶಾಂಗ ಕಚೇರಿಯ ವಕ್ತಾರ ಜಾಹಿದ್ ಹಫೀಜ್ ಚೌಧರಿ ಹೇಳಿದ್ದಾರೆ. 

ಜಾಧವ್ ಪರ ವಕೀಲರನ್ನು ನೇಮಕ ಮಾಡಲು ಭಾರತಕ್ಕೆ ಮತ್ತೊಂದು ಅವಕಾಶ ಸಿಗಬೇಕು ಎಂದು ಕೆಲವು ದಿನಗಳ ಹಿಂದೆ ಇಸ್ಲಾಮಾಬಾದ್ ಹೈಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿತ್ತು. ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್ ಕೂಡ ಒಂದು ತಿಂಗಳು ಮುಂದೂಡಿದೆ. 

ನಿವೃತ್ತ ನೌಕಾಧಿಕಾರಿ ಕುಲಭೂಷಣ್ ಜಾಧವ್ ಅವರನ್ನು ಬೇಹುಗಾರಿಕೆ ಆರೋಪದ ಮೇಲೆ ಪಾಕಿಸ್ತಾನ ಜೈಲಿನಲ್ಲಿ ದಾಖಲಿಸಲಾಗಿದೆ ಮತ್ತು ಅವರ ಮರಣದಂಡನೆ ಶಿಕ್ಷೆಯ ವಿರುದ್ಧ ಪರಿಶೀಲನಾ ಅರ್ಜಿ ಸಲ್ಲಿಸಲು ಭಾರತೀಯ ವಕೀಲರನ್ನು ನೇಮಕ ಮಾಡುವ ಬಗ್ಗೆ ವಿಚಾರಣೆ ನಡೆಯುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.