ನಂಗರ್‌ಹಾರ್ ಪ್ರಾಂತ್ಯದಲ್ಲಿ ತಾಲಿಬಾನ್ ಉಗ್ರರಿಂದ 16 ಆಫ್ಘನ್ ಸೈನಿಕರ ಹತ್ಯೆ
ಆಫ್ಘಾನಿಸ್ತಾನದ ನಂಗರ್‌ಹಾರ್ ಪ್ರಾಂತ್ಯದಲ್ಲಿ ಆಫ್ಘನ್ ಭದ್ರತಾ ಪಡೆಗಳ ನೆಲೆಗಳನ್ನು ಗುರಿಯಾಗಿಸಿಕೊಂಡು ತಾಲಿಬಾನ್ ಉಗ್ರರು ನಡೆಸಿದ ದಾಳಿಯಲ್ಲಿ 16 ಸೈನಿಕರು ಸಾವನ್ನಪ್ಪಿದ್ದು, ಇನ್ನೂ ಹಲವರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮೂಲಗಳನ್ನುಲ್ಲೇಖಿಸಿ ಸ್ಪುಟ್ನಿಕ್ ಸುದ್ದಿಸಂಸ್ಥೆ ವರದಿ ಮಾಡಿದೆ.

ಕಾಬೂಲ್: ಆಫ್ಘಾನಿಸ್ತಾನದ ನಂಗರ್‌ಹಾರ್ ಪ್ರಾಂತ್ಯದಲ್ಲಿ ಆಫ್ಘನ್ ಭದ್ರತಾ ಪಡೆಗಳ ನೆಲೆಗಳನ್ನು ಗುರಿಯಾಗಿಸಿಕೊಂಡು ತಾಲಿಬಾನ್ ಉಗ್ರರು ನಡೆಸಿದ ದಾಳಿಯಲ್ಲಿ 16 ಸೈನಿಕರು ಸಾವನ್ನಪ್ಪಿದ್ದು, ಇನ್ನೂ ಹಲವರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮೂಲಗಳನ್ನುಲ್ಲೇಖಿಸಿ ಸ್ಪುಟ್ನಿಕ್ ಸುದ್ದಿಸಂಸ್ಥೆ ವರದಿ ಮಾಡಿದೆ.
ನಂಗರ್‌ಹಾರ್‌ನ ಖೋಗ್ಯಾನಿ ಜಿಲ್ಲೆಯ ಗಂದುಮಕ್ ಪ್ರದೇಶದಲ್ಲಿ ಆಫ್ಘನ್ ಸೇನೆ ಮತ್ತು ಪೊಲೀಸರ ತಪಾಸಣಾ ಶಿಬಿರಗಳನ್ನು ಗುರಿಯಾಗಿಸಿಕೊಂಡು ಉಗ್ರರು ದಾಳಿ ಮಾಡಿದ್ದಾರೆ. ದಾಳಿಯ ಪರಿಣಾಮ ಮೂರು ಭದ್ರತಾ ತಪಾಸಣಾ ಶಿಬಿರಗಳು ತೀವ್ರ ಹಾನಿಗೊಂಡಿವೆ ಎಂದು ಮೂಲಗಳು ತಿಳಿಸಿವೆ.
ಆಫ್ಘಾನಿಸ್ತಾನದ ಮತ್ತು ತಾಲಿಬಾನ್ ಕೈದಿಗಳನ್ನು ಪರಸ್ಪರ ಬಿಡುಗಡೆ ಮಾಡಿದ ನಂತರ ಶನಿವಾರ ಕತಾರ್ ನಲ್ಲಿ ಆರಂಭವಾಗಲಿರುವ ಬಹು ನಿರೀಕ್ಷಿತ ಅಂತರ-ಆಫ್ಘನ್ ಶಾಂತಿ ಮಾತುಕತೆ ವೇಳೆಯೇ ಈ ದಾಳಿ ನಡೆದಿದೆ. ಆಫ್ಘಾನಿಸ್ತಾನದಲ್ಲಿ ಸುಮಾರು ಎರಡು ದಶಕಗಳ ಯುದ್ಧ ಮತ್ತು ದಂಗೆಯ ನಂತರ, ಶಾಶ್ವತವಾಗಿ ಶಾಂತಿ ಕಾಪಾಡುವ ದೃಷ್ಟಿಕೋನದೊಂದಿಗೆ ಕದನ ವಿರಾಮ ಕುರಿತು ಮಾತುಕತೆಗಳನ್ನು ಕೇಂದ್ರೀಕರಿಸಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


