'ಹೆಪಟೈಟಿಸ್ ಸಿ ವೈರಸ್' ಪತ್ತೆ ಮಾಡಿದ ಮೂವರು ಸಾಧಕರಿಗೆ ವೈದ್ಯಕೀಯ ನೊಬೆಲ್
2020ನೇ ಸಾಲಿನ ವೈದ್ಯಕೀಯ ನೊಬೆಲ್ ಪ್ರಶಸ್ತಿ ಘೋಷಣೆಯಾಗಿದ್ದು, 'ಹೆಪಟೈಟಿಸ್ ಸಿ ವೈರಸ್' ಆವಿಷ್ಕರಿಸಿದ ಮೂವರು ಸಾಧಕರಾದ ಹಾರ್ವೆ ಜೆ.ಆಲ್ಟರ್, ಮಿಷೆಲ್ ಹೌಟನ್ ಹಾಗೂ ಚಾರ್ಲ್ಸ್ ಎಂ.ರೈಸ್ ಅವರು ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಸ್ಟಾಕ್ಹೋಮ್: 2020ನೇ ಸಾಲಿನ ವೈದ್ಯಕೀಯ ನೊಬೆಲ್ ಪ್ರಶಸ್ತಿ ಘೋಷಣೆಯಾಗಿದ್ದು, 'ಹೆಪಟೈಟಿಸ್ ಸಿ ವೈರಸ್' ಆವಿಷ್ಕರಿಸಿದ ಮೂವರು ಸಾಧಕರಾದ ಹಾರ್ವೆ ಜೆ.ಆಲ್ಟರ್, ಮಿಷೆಲ್ ಹೌಟನ್ ಹಾಗೂ ಚಾರ್ಲ್ಸ್ ಎಂ.ರೈಸ್ ಅವರು ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ನೊಬೆಲ್ ಸಮಿತಿಯ ಮುಖ್ಯಸ್ಥ ಥಾಮಸ್ ಪರ್ಲ್ಮನ್ ಅವರು ಸೋಮವಾರ ಸ್ಟಾಕ್ ಹೋಮ್ ನಲ್ಲಿ 2020ನೇ ಸಾಲಿನ ವೈದ್ಯಕೀಯ ಪ್ರಶಸ್ತಿಯ ವಿಜೇತರ ಹೆಸರನ್ನು ಘೋಷಿಸಿದರು.
ವಿಶ್ವ ಆರೋಗ್ಯ ಸಂಸ್ಥೆಯ ಅಂದಾಜಿನ ಪ್ರಕಾರ, ವಿಶ್ವಾದ್ಯಂತ 70 ದಶಲಕ್ಷಕ್ಕೂ ಹೆಚ್ಚು ಹೆಪಟೈಟಿಸ್ ಪ್ರಕರಣಗಳು ವರದಿಯಾಗುತ್ತಿದ್ದು, ಪ್ರತಿ ವರ್ಷ 400,000 ಮಂದಿ ಸಾವನ್ನಪ್ಪುತ್ತಿದ್ದಾರೆ.
ಇದು ದೀರ್ಘಕಾಲದ ರೋಗವಾಗಿದ್ದು, ಯಕೃತ್ತಿನ ಉರಿಯೂತ ಮತ್ತು ಕ್ಯಾನ್ಸರ್ ಗೆ ಪ್ರಮುಖ ಕಾರಣವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


