ಲಾಕ್ ಡೌನ್, ಲಸಿಕೆ ಮಂತ್ರ: ಬ್ರಿಟನ್ ನಲ್ಲಿ ಕೋವಿಡ್-19 ಪ್ರಕರಣಗಳ ಪ್ರಮಾಣ ಶೇ.60ರಷ್ಟು ಇಳಿಕೆ!
ಕಳೆದ ವರ್ಷ ಕೊರೋನಾ ಕಾಟದಿಂದ ನಲುಗಿದ್ದ ಬ್ರಿಟನ್ ಚೇತರಿಸಿಕೊಳ್ಳುವುದು ಕಷ್ಟ ಸಾಧ್ಯ ಎಂಬ ಪರಿಸ್ಥಿತಿಗೆ ತಲುಪಿತ್ತು. ಆದರೆ ಈಗ ಲಾಕ್ ಡೌನ್ ಹಾಗೂ ಲಸಿಕೆಯಿಂದಾಗಿ ಬ್ರಿಟನ್ ನಲ್ಲಿ ಕೋವಿಡ್-19 ಪ್ರಕರಣಗಳು ಶೇ.60ರಷ್ಟು ಕುಸಿದಿದೆ.

ಲಂಡನ್: ಕಳೆದ ವರ್ಷ ಕೊರೋನಾ ಕಾಟದಿಂದ ನಲುಗಿದ್ದ ಬ್ರಿಟನ್ ಚೇತರಿಸಿಕೊಳ್ಳುವುದು ಕಷ್ಟ ಸಾಧ್ಯ ಎಂಬ ಪರಿಸ್ಥಿತಿಗೆ ತಲುಪಿತ್ತು. ಆದರೆ ಈಗ ಲಾಕ್ ಡೌನ್ ಹಾಗೂ ಲಸಿಕೆಯಿಂದಾಗಿ ಬ್ರಿಟನ್ ನಲ್ಲಿ ಕೋವಿಡ್-19 ಪ್ರಕರಣಗಳು ಶೇ.60ರಷ್ಟು ಕುಸಿದಿದೆ.
ಲಂಡನ್ ನ ಇಂಪೀರಿಯಲ್ ಕಾಲೇಜ್ ನ ಸಂಶೋಧಕರ ಪ್ರಕಾರ ಮಾರ್ಚ್ ತಿಂಗಳಲ್ಲಿ ಕೋವಿಡ್-19 ಸೋಂಕು ಶೇ.60 ರಷ್ಟು ಕುಸಿದಿದ್ದು, ರಾಷ್ಟ್ರೀಯ ಲಾಕ್ ಡೌನ್ ಕ್ರಮಗಳಿಂದಾಗಿ ಸೋಂಕು ಪ್ರಸರಣ ಕಡಿಮೆಯಾಗಿದ.
ಪ್ರಾರಂಭಿಕ ಹಂತದಲ್ಲಿ ಹಿರಿಯ ನಾಗರಿಕರಿಗೆ ಲಸಿಕೆ ನೀಡಿದ್ದರಿಂದ ಈಗ 65 ಹಾಗೂ ಮೇಲ್ಪಟ್ಟ ನಾಗರಿಕರಿಗೆ ಕಡಿಮೆ ಪ್ರಮಾಣದಲ್ಲಿ ಸೋಂಕು ಹರಡುವ ಸಾಧ್ಯತೆ ಇದೆ. ಇದೇ ವೇಳೆ ಸೋಂಕು, ಮರಣ ಪ್ರಮಾಣಕ್ಕೂ ಅಂತರ ಜಾಸ್ತಿಯಾಗುತ್ತಿದೆ. ಆದರೂ ಜನತೆ ಎಚ್ಚರಿಕೆಯಿಂದ ಇರಬೇಕೆಂದು ಸಂಶೋಧಕರು ಎಚ್ಚರಿಸಿದ್ದಾರೆ. ಇಂಗ್ಲೆಂಡ್ ನಲ್ಲಿ ಏ.12 ರಿಂದ ಮುಂದಿನ ಹಂತಕ್ಕೆ ಲಾಕ್ ಡೌನ್ ನ್ನು ಸಡಿಲಗೊಳಿಸಲಾಗುತ್ತದೆ. ಮಾ.11 ರಿಂದ ಮಾ.30 ವರೆಗೆ 140,000 ಮಂದಿಯನ್ನು ಪರೀಕ್ಷೆಗೆ ಒಳಪಡಿಸಿ ಈ ಅಧ್ಯಯನ ವರದಿಯನ್ನು ಪ್ರಕಟಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


