ಕೊರೋನಾ ಅಂತ್ಯಕ್ಕೆ ಇನ್ನೂ ಬಹು ದೂರ ಕ್ರಮಿಸಬೇಕಿದೆ: ಡಬ್ಲ್ಯುಎಚ್ ಒ ನಿರ್ದೇಶಕ ಟೆಡ್ರೊಸ್ ಅಧಾನೊಮ್ ಎಚ್ಚರಿಕೆ
ಕೊರೋನಾ ಸಾಂಕ್ರಾಮಿಕ ನಿಭಾಯಿಸಲು ವಿಶ್ವದ ರಾಷ್ಟ್ರಗಳು ಇನ್ನಿಲ್ಲದ ಕಷ್ಟ ಪಡುತ್ತಿವೆ. ಕೊರೋನಾ ಎದುರಿಸುವಲ್ಲಿ ಸಾಕಷ್ಟು ಗೊಂದಲಗಳಿವೆ. ಮನುಷ್ಯರ ಬೇಜವಾಬ್ದಾರಿತನದಿಂದಾಗಿ ಸಾಂಕ್ರಾಮಿಕ ಅಂತ್ಯಗೊಳ್ಳಲು ನಾವು ಇನ್ನು ಬಹು ದೂರ ಕ್ರಮಿಸಬೇಕಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯುಎಚ್ ಒ) ಮಹಾನಿರ್ದೇಶಕ ಟೆಡ್ರೊಸ್ ಅಧಾನೊಮ್ ಎಚ್ಚರಿಕೆ ನೀಡಿದ್ದಾರೆ.

ಜಿನಿವಾ: ಕೊರೋನಾ ಸಾಂಕ್ರಾಮಿಕ ನಿಭಾಯಿಸಲು ವಿಶ್ವದ ರಾಷ್ಟ್ರಗಳು ಇನ್ನಿಲ್ಲದ ಕಷ್ಟ ಪಡುತ್ತಿವೆ. ಕೊರೋನಾ ಎದುರಿಸುವಲ್ಲಿ ಸಾಕಷ್ಟು ಗೊಂದಲಗಳಿವೆ. ಮನುಷ್ಯರ ಬೇಜವಾಬ್ದಾರಿತನದಿಂದಾಗಿ ಸಾಂಕ್ರಾಮಿಕ ಅಂತ್ಯಗೊಳ್ಳಲು ನಾವು ಇನ್ನು ಬಹು ದೂರ ಕ್ರಮಿಸಬೇಕಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯುಎಚ್ ಒ) ಮಹಾನಿರ್ದೇಶಕ ಟೆಡ್ರೊಸ್ ಅಧಾನೊಮ್ ಎಚ್ಚರಿಕೆ ನೀಡಿದ್ದಾರೆ.
ಅತ್ಯಾಧುನಿಕ ವೈದ್ಯಕೀಯ ಕ್ರಮಗಳ ಮೂಲಕ ಕೆಲ ತಿಂಗಳ ಅವಧಿಯಲ್ಲಿ ಕೊರೋನಾ ಸಾಂಕ್ರಾಮಿಕ ನಿಯಂತ್ರಿಸಬಹುದು ಎಂಬುದು ದೃಢಪಟ್ಟಿದೆ. ಈ ವರ್ಷದ ಮೊದಲ ಎರಡು ತಿಂಗಳ ಅಂಕಿ ಅಂಶ ನೋಡಿದರೆ ಅದು ಅರ್ಥವಾಗುತ್ತದೆ ಎಂದು ಅವರು ಹೇಳಿದ್ದಾರೆ. ಕಳೆದ ಎರಡು ತಿಂಗಳಲ್ಲಿ ಸಾವು, ಹೊಸ ಪ್ರಕರಣಗಳ ಸಂಖ್ಯೆ ತೀವ್ರವಾಗಿ ಕುಸಿದಿದೆ ಎಂದು ಟೆಡ್ರೊಸ್ ವಿವರಿಸಿದ್ದಾರೆ. ವೈರಸ್ ಅನ್ನು ನಿಯಂತ್ರಿಸಬಹುದು ಹಾಗೂ ರೂಪಾಂತರಿಗಳನ್ನು ತಡೆಯಬಹುದು ಎಂಬುದು ಸ್ಪಷ್ಟವಾಗಿದೆ.
ಆದರೆ ಕಳೆದ ಎರಡು ವಾರಗಳಲ್ಲಿ ಪ್ರಕರಣಗಳ ಸಂಖ್ಯೆಯಲ್ಲಿ ಶೇ. 9ರಷ್ಟು ಹೆಚ್ಚಳ, ಸಾವುಗಳಲ್ಲಿ ಶೇ. 5ರಷ್ಟು ಹೆಚ್ಚಳ ಕಂಡುಬಂದಿದೆ. ಕೆಲವು ದೇಶಗಳಲ್ಲಿ ಕೊರೊನಾ ಹೆಚ್ಚಳಗೊಂಡಿದ್ದರೂ, ನೈಟ್ ಕ್ಲಬ್ ಗಳು, ರೆಸ್ಟೋರೆಂಟ್ ಗಳು ಹಾಗೂ ಮಾರುಕಟ್ಟೆಗಳು ಜನ ದಟ್ಟಣಿಯಿಂದ ತುಂಬಿ ಹೋಗಿವೆ. ಜನರ ಬೇಜವ್ದಾರಿತನ ತೊಲಗಬೇಕು ಎಂದು ಅವರು ಹೇಳಿದ್ದಾರೆ.
ಕೊರೋನಾ ಸೋಂಕಿನಿಂದ ಚೇತರಿಸಿಕೊಂಡ ನಂತರವೂ ಹಲವಾರು ಸಮಸ್ಯೆಗಳು ಪ್ರಾರಂಭವಾಗುತ್ತವೆ ಎಂದು ಸಂಶೋಧನೆ ಹೇಳುತ್ತದೆ. ಕೊರೋನಾ ಸೋಂಕಿನಿಂದ ಚೇತರಿಸಿಕೊಳ್ಳುವ ಪ್ರತಿ ಮೂವರಲ್ಲಿ ಒಬ್ಬರು ನರ ಸಮಸ್ಯೆಗಳು ಅಥವಾ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದಾರೆ. ಕೊರೋನಾ ಸೋಂಕು ತಗುಲಿದ ಮೊದಲ ಆರು ತಿಂಗಳಲ್ಲಿ ಸುಮಾರು ಶೇ. 34ರಷ್ಟು ಮಂದಿಯ ಮೇಲೆ ಪ್ರಭಾವ ಉಂಟಾಗಿದೆ.
ಕೊರೋನಾದಿಂದ ಚೇತರಿಸಿಕೊಂಡ ಶೇ. 17 ಮಂದಿಯಲ್ಲಿ ಆತಂಕ ಶೇ. 14ರಷ್ಟು ಜನರಲ್ಲಿ ಮೂಡ್ ಬದಲಾವಣೆ ಸಮಸ್ಯೆ ಎದುರಿಸುತ್ತಿದ್ದಾರೆ. ಶೇ. 13ರಷ್ಟು ಜನರು ಮೊದಲ ಬಾರಿಗೆ ಮಾನಸಿಕ ಸಮಸ್ಯೆ ಎದುರಿಸುತ್ತಿದ್ದಾರೆ. ಸೆರೆಬ್ರಲ್ ರಕ್ತಸ್ರಾವ ಶೇ.0.6 ಪಾರ್ಶ್ವವಾಯು ಶೇ.2.1 ಹಾಗೂ ಮರೆವು ಶೇ. 0.7 ರಷ್ಟು ಮಂದಿಯಲ್ಲಿ ಕಂಡುಬರುತ್ತದೆ ಎಂದು ಸಂಶೋಧನೆ ಹೇಳಿದೆ.
ಜ್ವರ ಮತ್ತು ಇತರ ಉಸಿರಾಟದ ಸೋಂಕುಗಳಿಗಿಂತ ಕೊರೊನಾ ಹೆಚ್ಚು ಅಪಾಯಕಾರಿ ಎಂದು ಸಂಶೋಧಕರು ಹೇಳುತ್ತಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


