ಭಾರತಕ್ಕೆ ತಕ್ಷಣ ಕೋವಿಡ್ ಲಸಿಕೆಯ ಕಚ್ಚಾ ವಸ್ತುಗಳನ್ನು ಒದಗಿಸುತ್ತೇವೆ: ಅಮೆರಿಕ
ಕೋವಿಶೀಲ್ಡ್ ಲಸಿಕೆ ತಯಾರಿಸಲು ಭಾರತೀಯರಿಗೆ ತುರ್ತಾಗಿ ಬೇಕಾದ ಕಚ್ಚಾ ಸಾಮಗ್ರಿ ತಕ್ಷಣ ಒದಗಿಸಲಾಗುವುದು ಎಂದು ಶ್ವೇತಭವನ ಭಾನುವಾರ ತಿಳಿಸಿದೆ.

ವಾಷಿಂಗ್ಟನ್: ಕೋವಿಶೀಲ್ಡ್ ಲಸಿಕೆ ತಯಾರಿಸಲು ಭಾರತೀಯರಿಗೆ ತುರ್ತಾಗಿ ಬೇಕಾದ ಕಚ್ಚಾ ಸಾಮಗ್ರಿ ತಕ್ಷಣ ಒದಗಿಸಲಾಗುವುದು ಎಂದು ಶ್ವೇತಭವನ ಭಾನುವಾರ ತಿಳಿಸಿದೆ.
ಇಂದು ಬೆಳಗ್ಗೆ ಅಮೆರಿಕ ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್ ಸುಲ್ಲಿವಾನ್ ಅವರು ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರೊಂದಿಗೆ ಮಾತನಾಡಿ, ಭಾರತದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದರು.
ಯುನೈಟೆಡ್ ಸ್ಟೇಟ್ಸ್ ಭಾರತದ ಜನರೊಂದಿಗೆ ಒಗ್ಗಟ್ಟಿನಲ್ಲಿ ನಿಂತಿದೆ ಮತ್ತು ನಾವು ಹೆಚ್ಚಿನ ಸರಬರಾಜು ಮತ್ತು ಸಂಪನ್ಮೂಲಗಳನ್ನು ಭಾರತಕ್ಕೆ ನಿಯೋಜಿಸುತ್ತಿದ್ದೇವೆ ಎಂದು ಸುಲ್ಲಿವಾನ್ ಅವರು ತಿಳಿಸಿದ್ದಾರೆ.
ಭಾರತದಲ್ಲಿ ಕೋವಿಶೀಲ್ಡ್ ಲಸಿಕೆಯ ತಯಾರಿಕೆಗೆ ತುರ್ತಾಗಿ ಅಗತ್ಯವಿರುವ ನಿರ್ದಿಷ್ಟ ಕಚ್ಚಾ ವಸ್ತುಗಳ ಮೂಲಗಳನ್ನು ಯುನೈಟೆಡ್ ಸ್ಟೇಟ್ಸ್ ಗುರುತಿಸಿದೆ, ಅದನ್ನು ತಕ್ಷಣವೇ ಭಾರತಕ್ಕೆ ಲಭ್ಯವಾಗುವಂತೆ ಮಾಡಲಾಗುವುದು ಎಂದು ಸುಲ್ಲಿವನ್ ಮತ್ತು ದೋವಲ್ ಮಾತುಕತೆ ನಂತರ ಶ್ವೇತಭವನವು ಪ್ರಕಟಣೆಯಲ್ಲಿ ತಿಳಿಸಿದೆ.
ಕೊರೋನಾ ರೋಗಿಗಳಿಗೆ ಚಿಕಿತ್ಸೆ ನೀಡಲು ಮತ್ತು ಭಾರತದಲ್ಲಿನ ಮುಂಚೂಣಿಯ ಆರೋಗ್ಯ ಕಾರ್ಯಕರ್ತರನ್ನು ರಕ್ಷಿಸಲು ಸಹಾಯ ಮಾಡಲು, ಅಮೆರಿಕ ಚಿಕಿತ್ಸಕ, ಕ್ಷಿಪ್ರ ರೋಗನಿರ್ಣಯ ಪರೀಕ್ಷಾ ಕಿಟ್‌ಗಳು, ವೆಂಟಿಲೇಟರ್‌ಗಳು ಮತ್ತು ವೈಯಕ್ತಿಕ ರಕ್ಷಣಾ ಸಾಧನಗಳನ್ನು(ಪಿಪಿಇ) ಸರಬರಾಜು ಮಾಡಲಿದೆ ಎಂದು ಶ್ವೇತಭವನ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


