ಅಫ್ಘಾನಿಸ್ತಾನದಿಂದ ಸೇನೆ ಹಿಂಪಡೆದ ನಿರ್ಧಾರವನ್ನು ಸಮರ್ಥಿಸಿಕೊಳ್ಳುತ್ತೇನೆ: ಅಮೆರಿಕಾ ಅಧ್ಯಕ್ಷ ಜೋ ಬೈಡೆನ್
ಅಫ್ಘಾನಿಸ್ತಾನ ರಾಷ್ಟ್ರದಿಂದ ತಮ್ಮ ಸೇನೆಯಲನ್ನು ಹಿಂಪಡೆದುಕೊಂಡು ನಿರ್ಧಾರವನ್ನು ಅಮೆರಿಕಾ ಅಧ್ಯಕ್ಷ ಜೋ ಬೈಡೆನ್ ಅವರು ಸಮರ್ಥಿಸಿಕೊಂಡಿದ್ದಾರೆ.

ವಾಷಿಂಗ್ಟನ್: ಅಫ್ಘಾನಿಸ್ತಾನ ರಾಷ್ಟ್ರದಿಂದ ತಮ್ಮ ಸೇನೆಯಲನ್ನು ಹಿಂಪಡೆದುಕೊಂಡು ನಿರ್ಧಾರವನ್ನು ಅಮೆರಿಕಾ ಅಧ್ಯಕ್ಷ ಜೋ ಬೈಡೆನ್ ಅವರು ಸಮರ್ಥಿಸಿಕೊಂಡಿದ್ದಾರೆ.
ಅಫ್ಗಾನಿಸ್ತಾನವನ್ನು ತಾಲಿಬಾನ್ ಉಗ್ರರು ತಮ್ಮ ತೆಕ್ಕೆಗೆ ತೆಗೆದುಕೊಂಡ ಹಿನ್ನೆಲೆಯಲ್ಲಿ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಅವರು, ಸೈನ್ಯ ಹಿಂತೆಗೆದುಕೊಂಡಿದ್ದನ್ನು ಅಮೆರಿಕ ಅಧ್ಯಕ್ಷ ಜೋ ಬೈಡನ್ ಮತ್ತೊಮ್ಮೆ ಸಮರ್ಥನೆ ಮಾಡಿಕೊಂಡಿದ್ದಾರೆ. ಅಲ್ಲದೆ, ಅಫ್ಘಾನಿಸ್ತಾನದಲ್ಲಿ ಈಗಿನ ಪರಿಸ್ಥಿತಿಗೆ ಅಲ್ಲಿನ ನಾಯಕರೇ ಹೊಣೆ ಎಂದು ಈ ವೇಳೆ ಆರೋಪಿಸಿದ್ದಾರೆ.
ಅಫ್ಘಾನಿಸ್ತಾನದಲ್ಲಿ ನಾವು ಇಂಥಹ ಪರಿಸ್ಥಿತಿಯನ್ನು ನಿರೀಕ್ಷೆ ಮಾಡಿದ್ದೆವು. ಆದರೆ ಆ ಪರಿಸ್ಥಿತಿ ಇಷ್ಟು ಬೇಗ ಬರುತ್ತದೆ ಎಂದು ನಾವು ನಿರೀಕ್ಷಿಸಿರಲಿಲ್ಲ. ಆಫ್ಘನ್ ನಾಯಕರೇ ಆ ದೇಶವನ್ನು ತಾಲಿಬಾನಿಗಳಿಗೆ ಬಿಟ್ಟುಕೊಟ್ಟು, ದೇಶವನ್ನು ತೊರೆದಿದ್ದಾರೆ. ಅಫ್ಘಾನಿಸ್ತಾನದ ಪ್ರಸ್ತುತ ಪರಿಸ್ಥಿತಿ ಸಾಕಷ್ಟು ಬೇಸರವನ್ನು ತಂದಿದೆ. ಆದರೆ. ನನ್ನ ನಿರ್ಧಾರದ ಕುರಿತು ಯಾವುದೇ ರೀತಿಯ ವಿಷಾದವಿಲ್ಲ ಎಂದಿದ್ದಾರೆ.
ಅಫ್ಘಾನಿಸ್ತಾನದಿಂದ ಸೇನೆಯನ್ನು ಹಿಂಪಡೆದ ನಿರ್ಧಾರವನ್ನು ನಾನು ಸಮರ್ಥನೆ ಮಾಡಿಕೊಳ್ಳುತ್ತೇನೆ. ವರ್ಷಗಳ ನಂತರ ಅಮೆರಿಕ ಪಡೆಗಳನ್ನು ಹಿಂತೆಗೆದುಕೊಳ್ಳಲು ಕಠಿಣ ಕ್ರಮ ಕೈಗೊಂಡಿದ್ದೇನೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ಆಫ್ಘನ್ ರಾಷ್ಟ್ರಕ್ಕೆ ಅಮೆರಿಕದ ಸೇನೆ ತೆರಳಿದ್ದು, ಆ ರಾಷ್ಟ್ರವನ್ನು ಕಟ್ಟುವ ಕೆಲಸಕ್ಕೆ ಅಲ್ಲ ಎಂದ ಬೈಡನ್, ಸೇನೆ ಅಲ್ಲಿಂದ ವಾಪಸ್ಸಾದರೂ ಭಯೋತ್ಪಾದನೆಯ ವಿರುದ್ಧದ ಹೋರಾಟ ಮುಂದುವರೆಯಲಿದೆ ಎಂದಿದ್ದಾರೆ.
ಅಮೆರಿಕ ಸೇನೆಯೊಂದಿಗೆ ಕೆಲಸ ಮಾಡಿದ ಅಮೆರಿಕದ ನಾಗರಿಕರು ಮತ್ತು ಆಫ್ಘನ್ ನಾಗರಿಕರನ್ನು ಕೆಲವೇ ದಿನಗಳಲ್ಲಿ ನಮ್ಮ ದೇಶಕ್ಕೆ ಕರೆಸಿಕೊಳ್ಳುವ ಕೆಲಸ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಇದೇ ವೇಳೆ ತಾಲಿಬಾನಿಗಳು ಅಮೆರಿಕನ್ ಪ್ರಜೆಗಳ ಮೇಲೆ ದಾಳಿ ಮಾಡಿದರೆ, ಸಂಕಷ್ಟವನ್ನು ಎದುರಿಸಬೇಕಾಗುತ್ತದೆ ಎಂದೂ ಎಚ್ಚರಿಕೆ ನೀಡಿದ್ದಾರೆ.
ಈ ನಡುವೆ ಹೇಳಿಕೆ ನೀಡಿರುವ ವಿಶ್ವಸಂಸ್ಥೆಯ ಮಹಾಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್ ಅವರು, ಸದ್ಯದ ಪರಿಸ್ಥಿತಿಯಲ್ಲಿ ಅಫ್ಘಾನಿಸ್ತಾನದಲ್ಲಿ ಜಾಗತಿಕ ಭಯೋತ್ಪಾದನೆ ಬೆದರಿಕೆ ನಿಗ್ರಹಿಸಲು ವಿಶ್ವದ ಎಲ್ಲ ರಾಷ್ಟ್ರಗಳು ಒಟ್ಟಾಗಿ ಕೆಲಸ ಮಾಡುವಂತೆ ಕರೆ ನೀಡಿದ್ದಾರೆ.
ಆಫ್ಘನ್ನರಿಗೆ ತಲೆಮಾರುಗಳ ಯುದ್ಧ ಮತ್ತು ಕಷ್ಟಗಳು ತಿಳಿದಿವೆ. ಅವರೆಲ್ಲರೂ ಸಂಪೂರ್ಣ ಬೆಂಬಲಕ್ಕೆ ಅರ್ಹರಾಗಿದ್ದಾರೆ. ಮುಂದಿನ ದಿನಗಳು ನಿರ್ಣಾಯಕವಾಗಿರಲಿದ್ದು, ಇಡೀ ಜಗತ್ತು ಅವರೊಂದಿಗೆ ನಿಲ್ಲಬೇಕಿದೆ ಎಂದು ಗುಟೆರಸ್ ಅಭಿಪ್ರಾಯಪಟ್ಟಿದ್ದಾರೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


